Bolero: ಮಧ್ಯಮ ವರ್ಗದವರ ನೆಚ್ಚಿನ ಮಹೀಂದ್ರಾ ಬೊಲೆರೊ ನಿಯೋ ಬಗ್ಗೆ ಬಿಗ್ ಅಪ್ಡೇಟ್.. ಏನದು?

ಮಹೀಂದ್ರಾ (Mahindra) ಕಂಪನಿಯು ಬೊಲೆರೊ ನಿಯೋ (Bolero Neo) ಕಾರಿನ ಬೆಲೆಯನ್ನು ಪರಿಷ್ಕರಿಸಿದ್ದು, ಆಯ್ದ ರೂಪಾಂತರ (ವೇರಿಯೆಂಟ್)ಗಳ ದರವನ್ನು ರೂ.14,000 ವರೆಗೆ ಹೆಚ್ಚಳ ಮಾಡಿದೆ. ಇದರಿಂದ ನೂತನ ಬೊಲೆರೊ ನಿಯೋ ಆರಂಭಿಕ ಬೆಲೆ ರೂ.9,94,600 (ಎಕ್ಸ್ ಶೋರೂಂ) ಆಗಿದೆ.

ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಮಹೀಂದ್ರಾ ಬೊಲೆರೊ ನಿಯೋ (Mahindra Bolero Neo) ಎಸ್‌ಯುವಿಯು ಎನ್4, ಎನ್8, ಎನ್10 ಮತ್ತು ಎನ್10 (ಒ) ಎಂಬ ರೂಪಾಂತರಗಳ ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಸದ್ಯ ಎನ್4 ಹಾಗೂ ಎನ್8 ಮಾದರಿಗಳ ಬೆಲೆಯು ಕ್ರಮವಾಗಿ ರೂ.5,000 ದಿಂದ ರೂ.14,000 ವರೆಗೆ ಅಧಿಕಗೊಂಡಿದೆ. ಎನ್10 ಮತ್ತು ಎನ್10 ಆವೃತ್ತಿಗಳ ದರದಲ್ಲಿ ಯಾವುದೇ ರೀತಿಯಲ್ಲಿ ಬದಲಾವಣೆಯಾಗಿಲ್ಲ.

Mahindra Bolero Neo Suv Price Hike In May 2024

ನೂತನ ಮಹೀಂದ್ರಾ ಬೊಲೆರೊ ನಿಯೋ ಕಾರು ಆಕರ್ಷಕ ವಿನ್ಯಾಸವನ್ನು ಹೊಂದಿದ್ದು, ನಪೋಲಿ ಬ್ಲಾಕ್, ಮೆಜೆಸ್ಟಿಕ್ ಸಿಲ್ವರ್, ಹೈವೇ ರೆಡ್, ಪರ್ಲ್ ವೈಟ್, ಡೈಮಂಡ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೆ ಲಭ್ಯವಿದೆ ಈ ಕಾರಿನಲ್ಲಿ 7 ಮಂದಿ ಪ್ರಯಾಣಿಸಬಹುದು. ಪ್ರವಾಸದ ಸಮಯದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 384 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ.

ಈ ಬೊಲೆರೊ ನಿಯೋ (Bolero Neo) ಎಸ್‌ಯುವಿಯು 1.5 - ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 100 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 260 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 - ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್‌ನ್ನು ಹೊಂದಿದೆ. 17.29 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ.

Mahindra Bolero Neo Suv Price Hike In May 2024

ಹೊಸ ಮಹೀಂದ್ರಾ ಬೊಲೆರೊ ನಿಯೋ ಕಾರು 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ, ಹೈಟ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ರೇರ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ ರಿವರ್ಸ್ ಅಸಿಸ್ಟ್ ಅನ್ನು ಒಳಗೊಂಡಿದೆ.

ಬೊಲೆರೊ ನಿಯೋ ಜೊತೆಯಲ್ಲಿ ಸಾಮಾನ್ಯ ಬೊಲೆರೊ ಕೂಡ ಖರೀದಿಗೆ ಲಭ್ಯವಿದೆ. ಇದು ರೂ.9.98 ಲಕ್ಷದಿಂದ ರೂ.10.91 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.5 - ಲೀಟರ್ ಡೀಸೆಲ್ ಎಂಜಿನ್ ಪಡೆದಿದ್ದು, 76 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 210 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ 5 - ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.

ಈ ಮಹೀಂದ್ರಾ ಬೊಲೆರೊ ಸೆಮಿ - ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮ್ಯಾನುಯಲ್ ಎಸಿ, ಪವರ್ ವಿಂಡೋಗಳು ಹಾಗೂ ಪವರ್ ಸ್ಟೀರಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರಿವರ್ಸ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ. ಬೊಲೆರೊಗೆ ರೆನಾಲ್ಟ್ ಟ್ರೈಬರ್ ದೊಡ್ಡ ಪ್ರತಿಸ್ಪರ್ಧಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, May 19, 2024, 11:30 [IST]
English summary
Mahindra bolero neo suv price hike in may 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+