Mahindra: ಮಹೀಂದ್ರಾದಿಂದ ಗ್ರಾಹಕರಿಗೆ ಆಘಾತ.. ಕಾರಣವೇನು?

ಮಹೀಂದ್ರಾ (Mahindra) ವಿಶ್ವಾಸಾರ್ಹ ವಾಹನ ತಯಾರಿಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ 3ಎಕ್ಸ್ಒ, ಎಕ್ಸ್‌ಯುವಿ700 ಥಾರ್ ಮತ್ತು ಸ್ಕಾರ್ಪಿಯೋ ಸೇರಿದಂತೆ ವಿವಿಧ ಎಸ್‌ಯುವಿಗಳನ್ನು ಮಾರಾಟಗೊಳಿಸುತ್ತಿದೆ. ಕಳೆದ ತಿಂಗಳು (ನವೆಂಬರ್ - 2024) 46,222 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 39,981 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 15.6% ಪ್ರಗತಿ ಸಾಧಿಸಲಾಗಿದೆ.

ಸದ್ಯ, ಹಣದುಬ್ಬರ ಹಾಗೂ ತಯಾರಿಕಾ ವೆಚ್ಚಗಳು ಹೆಚ್ಚಾದ ಹಿನ್ನೆಲೆ, ಮಹೀಂದ್ರಾ ಕಂಪನಿಯು ವಿವಿಧ ಎಸ್‌ಯುವಿ ಮಾದರಿಗಳು (Suv Models) ಹಾಗೂ ವಾಣಿಜ್ಯ ವಾಹನಗಳ (Commercial Vehicles) ಬೆಲೆಯನ್ನು ಏರಿಕೆ ಮಾಡುವುದಾಗಿ ಘೋಷಣೆ ಮಾಡಿದೆ. ನೂತನ ದರಗಳು ಶೇಕಡ 3% ಹೆಚ್ಚಳವಾಗಲಿದ್ದು, ಜನವರಿ 2025 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

Mahindra Cars Price Hike In January 2025 XUV 3XO XUV700 Scorpio N To Thar ROXX

ದೇಶೀಯವಾಗಿ ಹಲವು ಎಸ್‌ಯುವಿಗಳನ್ನು ಮಾರಾಟಗೊಳಿಸುತ್ತಿದೆ. ಅವುಗಳಲ್ಲಿ ಎಕ್ಸ್‌ಯುವಿ 3ಎಕ್ಸ್ಒ (XUV 3XO) ಕೂಡ ಪ್ರಮುಖವಾದ ಕಾರಾಗಿ ಹೊರಹೊಮ್ಮಿದೆ. ಇದು ರೂ.7.79 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು.

ಜನಪ್ರಿಯ ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಎಸ್‌ಯುವಿ ಬಗ್ಗೆ ಹೇಳುವುದಾದರೆ, ಈ ಕಾರು ರೂ.13.99 ಲಕ್ಷದಿಂದ ರೂ.26.04 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 5, 6 & 7 ಆಸನದೊಂದಿಗೂ ಸಿಗುತ್ತದೆ.

Mahindra Cars Price Hike In January 2025 XUV 3XO XUV700 Scorpio N To Thar ROXX

ಪ್ರಖ್ಯಾತ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಎಸ್‌ಯುವಿ ಕುರಿತಂತೆ ಮಾತನಾಡುವುದಾದರೆ, ಇದು ಕನಿಷ್ಠ ರೂ.13.85 ಲಕ್ಷ ಹಾಗೂ ಗರಿಷ್ಠ ರೂ.24.54 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 6, 7 ಆಸನ ವ್ಯವಸ್ಥೆಯಲ್ಲಿಯೂ ಲಭ್ಯವಿದೆ.

ಮಹೀಂದ್ರಾ ಥಾರ್ ರಾಕ್ಸ್ (Mahindra Thar ROXX) ಪ್ರಮುಖವಾದ ಆಫ್-ರೋಡ್ ಎಸ್‌ಯುವಿಯಾಗಿದೆ. ಈ ಕಾರು, ರೂ.12.99 ಲಕ್ಷದಿಂದ ರೂ.22.49 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 2.0-ಲೀಟರ್ ಟರ್ಬೊ ಪೆಟ್ರೋಲ್, 2.0-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Mahindra Cars Price Hike In January 2025 XUV 3XO XUV700 Scorpio N To Thar ROXX

ಮಹೀಂದ್ರಾ ಬೊಲೆರೊ ನಿಯೋ (Mahindra Bolero Neo) ಬಗ್ಗೆ ಹೇಳುವುದಾದರೆ, ಇದು ರೂ.9.95 ಲಕ್ಷದಿಂದ ರೂ.12.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.5-ಲೀಟರ್ ಡಿಸೇಲ್ ಎಂಜಿನ್ ಪಡೆದಿದ್ದು, 5-ಸ್ಪೀಡ್ ಮ್ಯೂನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. ಈ ಕಾರು 7 ಆಸನಗಳನ್ನು ಹೊಂದಿದೆ. ಜೊತೆಗೆ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

ಕಡೆಯದಾಗಿ ಮಹೀಂದ್ರಾ ಎಕ್ಸ್‌ಯುವಿ400 (Mahindra XUV400) ಕುರಿತಂತೆ ಮಾತನಾಡುವುದಾದರೆ, ಈ ಕಾರು ರೂ.15.49 ಲಕ್ಷದಿಂದ ರೂ.19.39 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 34.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) & 39.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಒಳಗೊಂಡಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 375 ರಿಂದ 456 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, December 9, 2024, 12:28 [IST]
English summary
Mahindra cars price hike in january 2025 xuv 3xo xuv700 scorpio n to thar roxx
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+