ಮಹೀಂದ್ರಾದ ಈ ಹಳೆಯ ಹುಲಿಗಳಿಗೆ ಭಾರೀ ಬೇಡಿಕೆ: ಬಿಡುಗಡೆಯಾಗಿ ಕೆಲವೇ ವರ್ಷದಲ್ಲಿ ಹತ್ತು ಲಕ್ಷ ಕಾರು ಮಾರಾಟ!

ಭಾರತದ ಹೆಮ್ಮೆಯ ಕಾರು ನಿರ್ಮಾಣ ಕಂಪನಿಯಾದ ಮಹೀಂದ್ರಾ ಸದ್ಯಕ್ಕೆ ಆಟೋಮೊಬೈಲ್‌ನ ಎಲ್ಲಾ ಕ್ಷೇತ್ರದಲ್ಲೂ ಸಾಕಷ್ಟು ಹೆಸರು ಮಾಡುತ್ತಿದೆ. ಅದರಲ್ಲೂ ಮಹೀಂದ್ರಾ ಕಂಪನಿಯ ಸ್ಕಾರ್ಪಿಯೋ ಮತ್ತು ಸ್ಕಾರ್ಪಿಯೋ ಎನ್‌ ವಾಹನ ಮಾದರಿಗಳು ಸಾಕಷ್ಟು ಸಂಖ್ಯೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿದೆ. ಎರಡಿ ವರ್ಷಗಳ ಹಿಂದೆಯಷ್ಟೇ ಈ ಕಾರು ಮಾದರಿಗಳು ಮತ್ತೊಮ್ಮೆ ಭಾರತೀಯ ಮಾರುಕಟ್ಟೆಗೆ ಕಾಲಿಟ್ಟಿದ್ದಾದರೂ ಮಹೀಂದ್ರಾ ಕಾರು ಮಾರಾಟದಲ್ಲಿ ಭಾರೀ ಪಾತ್ರವನ್ನು ವಹಿಸಿದೆ. ಈ ಕಾರು ಮಾದರಿಗಳು ಬಂದ ಮೇಲೇನೆ ಮಹೀಂದ್ರಾದ ಇತರ ಕಾರುಗಳು ಸಹ ಹೆಚ್ಚು ಮಾರಾಟವಾಗುತ್ತಿದೆ ಎಂದರೆ ತಪ್ಪಾಗಲಾರದು.

ಇದೀಗ ಮಹೀಂದ್ರಾ ಕಂಪನಿಯ ಸ್ಕಾರ್ಪಿಯೋ (Mahindra Scorpio) ಮತ್ತು ಸ್ಕಾರ್ಪಿಯೋ ಎನ್‌, ಬಿಡುಗಡೆಯಾದ ಕೇವಲ ಎರಡೇ ವರ್ಷದಲ್ಲಿ ಭಾರೀ ದೊಡ್ಡ ಮೈಲುಗಲ್ಲನ್ನು ಸ್ಥಾಪಿಸಿದೆ. ಕಂಪನಿಯ ಪ್ರಕಾರ 69,397 ವಾಹನಗಳು ಮಾರಾಟವಾಗಿದ್ದು, ಇದರಲ್ಲಿ ರಫ್ತು ಸೇರಿದಂತೆ ಶೇ11 ರಷ್ಟು ಬೆಳವಣಿಗೆ ಸಾಧಿಸಿದೆ. ಯುಟಿಲಿಟಿ ವೆಹಿಕಲ್ಸ್ ವಿಭಾಗದಲ್ಲಿ, ಮಹೀಂದ್ರಾ ದೇಶೀಯ ಮಾರುಕಟ್ಟೆಯಲ್ಲಿ 40,022 ವಾಹನಗಳ ಮಾರಾಟ ಮತ್ತು ರಫ್ತು ಸೇರಿದಂತೆ ಒಟ್ಟಾರೆ 40,644 ವಾಹನಗಳನ್ನು ಮಾರಾಟ ಮಾಡುವ ಮೂಲಕ ಶೇ23 ರಷ್ಟು ಬೆಳವಣಿಗೆ ಸಾಧಿಸಿದೆ.

Mahindra Scorpio and Scorpio N Sales Surpass 1 Million Units

ಮೂಲಗಳ ಪ್ರಕಾರ ಮಹೀಂದ್ರಾ ಕಂಪನಿಯ ಸ್ಕಾರ್ಪಿಯೋ 2002 ರಲ್ಲಿ ಉತ್ಪಾದನೆ ಆರಂಭಿಸಲಾಗಿತ್ತು. ಸ್ಕಾರ್ಪಿಯೋ ಎನ್‌ ಕಾರನ್ನು ಎರಡು ವರ್ಷಗಳ ಹಿಂದೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿ ಕೇವಲ ಎರಡು ವರ್ಷವಾಗುವಷ್ಟರಲ್ಲಿ ಇವೆರಡೂ ಮಾದರಿಗಳು ಸೇರಿ ಸುಮಾರು ಹತ್ತು ಲಕ್ಷಕ್ಕೂ ಅಧಿಕ ಯೂನಿಟ್‌ಗಳನ್ನು ಮಾರಾಟ ಮಾಡಿ ಬಹುದೊಡ್ಡ ಮೈಲಿಗಲ್ಲನ್ನು ಸ್ಥಾಪಿಸಿದೆ.

ಒಂದು ಲೆಕ್ಕದಲ್ಲಿ ನೋಡುವುದಾದರೆ ಮಹೀಂದ್ರಾ ಕಂಪನಿಯ ಈ ಎರಡು ಕಾರು ಮಾದರಿಗಳು ಟ್ರಂಪ್ ಕಾರ್ಡ್‌ ಎಂದರೆ ತಪ್ಪಾಗಲಾರದು. ಈ ಮಹೀಂದ್ರಾ ಕ್ಲಾಸಿಕ್‌ ಎಸ್‌ಯುವಿ ಆರಂಭಿಕ ಬೆಲೆ ರೂ.13.05 ಲಕ್ಷವಾಗಿದೆ (ಎಕ್ಸ್ ಶೋರೂಂ). ಡೀಸೆಲ್ ಪವರ್‌ಟ್ರೇನ್, 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನ ಹಾಗೂ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರುವ Z8L ರೂಪಾಂತರದ ಬೆಲೆ ರೂ.24.51 ಲಕ್ಷ ಆಗಿದೆ.

Mahindra Scorpio and Scorpio N Sales Surpass 1 Million Units

ಮಹೀಂದ್ರಾ ಸ್ಕಾರ್ಪಿಯೋ ಎನ್ ಎರಡು ಪವರ್‌ಟ್ರೇನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. 2.0 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 200 bhp ಗರಿಷ್ಠ ಪವರ್ ಹಾಗೂ 380 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 6 ಸ್ವೀಡ್ ಆಟೋಮೆಟಿಕ್ ಅಥವಾ 6 ಸ್ವೀಡ್ ಮ್ಯಾನುವಲ್ ಟ್ರಾಸ್ಮಿಷನ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗಲಿದೆ.

ಮತ್ತೊಂದು ಪವರ್‌ಟ್ರೇನ್ ಆಯ್ಕೆ ಬಗ್ಗೆ ಮಾತನಾಡುವುದರೆ, 2.2 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಹೊಂದಿರುವ ಸ್ಕಾರ್ಪಿಯೋ ಎನ್, 172 bhp ಗರಿಷ್ಠ ಪವರ್ ಹಾಗೂ 370 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಅಲ್ಲದೆ, 6 ಸ್ವೀಡ್ ಅಟೋಮೆಟಿಕ್ ಟ್ರಾಸ್ಮಿಷನ್ ಆಯ್ಕೆ ಹೊಂದಿರುವ ಕಾರು, 400 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ.

Mahindra Scorpio and Scorpio N Sales Surpass 1 Million Units

ಮಹೀಂದ್ರಾ ಸ್ಕಾರ್ಪಿಯೋ N ಕುರಿತಾಗಿ ನೊಡುವುದಾದರೆ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಎಸ್‌ಯುವಿ ರೂ.13.60 ಲಕ್ಷದಿಂದ ರೂ.24.54 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಝಡ್2, ಝಡ್4, ಝಡ್6, ಝಡ್8 ರೂಪಾಂತರ ಮತ್ತು ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ನಾಪೋಲಿ ಬ್ಲ್ಯಾಕ್ ಸೇರಿದಂತೆ ಹಲವು ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ.

ಈ ಸ್ಕಾರ್ಪಿಯೋ ಕ್ಲಾಸಿಕ್ ಕಾರು ಕೇವಲ 2.2-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 132 ಪಿಎಸ್ ಗರಿಷ್ಠ ಪವರ್ ಮತ್ತು 300 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. ಜೊತೆಗೆ RWD (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, July 2, 2024, 10:21 [IST]
English summary
Mahindra scorpio and scorpio n sales surpass 1 million units
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+