Mahindra: ಮಹೀಂದ್ರಾದ ಈ ಕಾರಿಗಾಗಿ ಶೋರೂಂ ಎದುರು ಫುಲ್ ಕ್ಯೂ.. 13 ಲಕ್ಷ ಬೆಲೆ, 7 ಜನ ಹೋಗಬಹುದು!

ಮಹೀಂದ್ರಾ (Mahindra) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ700, ಥಾರ್, ಎಕ್ಸ್‌ಯುವಿ 3 ಎಕ್ಸ್ಒ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಈಚೆಗೆ ಕಂಪನಿಯು ಎಲ್ಲ ಕಾರುಗಳ ಉತ್ಪಾದನೆಯನ್ನು ದ್ವಿಗುಣಗೊಳಿಸಿದ್ದು, ಬೇಗ-ಬೇಗನೇ ಖರೀದಿದಾರರಿಗೆ ತಲುಪಿಸುತ್ತಿದೆ. ಇದರಿಂದ ಕಾಯುವಿಕೆ ಅವಧಿಯೂ ಕಡಿಮೆಯಾಗಿದೆ. ಆದರೂ ಜನಪ್ರಿಯ ಎಸ್‌ಯುವಿಯಾಗಿರುವ ಸ್ಕಾರ್ಪಿಯೋಗೂ ಭಾರಿ ಬೇಡಿಕೆ ಮುಂದುವರಿದಿದ್ದು, ದೊಡ್ಡ ಮಟ್ಟದಲ್ಲಿ ಬುಕ್ಕಿಂಗ್ ಪಡೆದುಕೊಳ್ಳುತ್ತಿದೆ. ಹೆಚ್ಚಿನ ಆರ್ಡರ್‌ಗಳನ್ನು ಗ್ರಾಹಕರಿಗೆ ಪೂರೈಸಬೇಕಾಗಿದೆ.

ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುವಿ ಎನ್ ಹಾಗೂ ಕ್ಲಾಸಿಕ್ ಎಂಬ ಎರಡು ವಿಧದಲ್ಲಿ ಸಿಗುತ್ತದೆ. ಸದ್ಯ ಜುಲೈ ತಿಂಗಳ (2024) ಓಪನ್ ಆರ್ಡರ್ ಬುಕ್ಕಿಂಗ್ ಬಗ್ಗೆ ವಿವರಗಳು ಲಭ್ಯವಾಗಿದ್ದು, 58,000 ಯುನಿಟ್‌ ಸ್ಕಾರ್ಪಿಯೋ ಎಸ್‌ಯುವಿಗಳನ್ನು ಖರೀದಿದಾರರಿಗೆ ವಿತರಿಸಬೇಕಾಗಿದೆ. ಮೇ ತಿಂಗಳಲ್ಲಿ ಬಾಕಿ ಉಳಿಸಿಕೊಂಡಿದ್ದ 86,000 ಯುನಿಟ್‌ ಆರ್ಡರ್‌ಗಳಿಗೆ ಹೋಲಿಕೆ ಮಾಡಿದರೆ, ಶೇಕಡ 33% ಕುಸಿತವಾಗಿದೆ. ಇದು ಉತ್ತಮ ಬೆಳವಣಿಗೆಯಾಗಿದ್ದು, ತಯಾರಿಕೆ ಹೆಚ್ಚಾಗಿರುವುದರಿಂದ ಪಟಪಟನೇ ಸ್ಕಾರ್ಪಿಯೋ ಕಾರುಗಳು ಗ್ರಾಹಕರ ಮನೆ ಸೇರುತ್ತವೆ.

Mahindra Scorpio Car 58 000 Open Bookings In July 2024 Details

ಈಗಲೂ ಹೊಸ ಖರೀದಿದಾರರು ಸ್ಕಾರ್ಪಿಯೋ ಎಸ್‌ಯುವಿಯನ್ನು ತಾಮುಂದು - ನಾಮುಂದು ಎಂಬಂತೆ ಬುಕ್ಕಿಂಗ್ ಮಾಡುತ್ತಿದ್ದು, ತಿಂಗಳಿಗೆ 12,000 ಆರ್ಡರ್‌ಗಳು ಬರುತ್ತಿವೆ. ಇದಕ್ಕೆ ಈ ಕಾರುಗಳು ಹೊಂದಿರುವ ಆಕರ್ಷಕ ವೈಶಿಷ್ಟ್ಯ ಹಾಗೂ ಕಾರ್ಯಕ್ಷಮತೆ ಬಹುಮುಖ್ಯ ಕಾರಣವಾಗಿದ್ದು, ಹಲವು ವರ್ಷಗಳಿಂದ ಸ್ಕಾರ್ಪಿಯೋ ಪ್ರಮುಖ ಕಾರುಗಳ ಪಟ್ಟಿಯಲ್ಲಿಯೂ ಸ್ಥಾನ ಪಡೆದಿದೆ.

ದೇಶೀಯವಾಗಿ ಲಭ್ಯವಿರುವ ನೂತನ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಎಸ್‌ಯುವಿ ರೂ.13.85 ಲಕ್ಷದಿಂದ ರೂ.24.54 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2.2-ಲೀಟರ್ ಡೀಸೆಲ್ ಮತ್ತು 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಸಿಗುತ್ತದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 6/ 7 ಆಸನಗಳನ್ನು ಪಡೆದಿದೆ.

Mahindra Scorpio Car 58 000 Open Bookings In July 2024 Details

ಈ ಸ್ಕಾರ್ಪಿಯೋ ಎನ್ ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ನಾಪೋಲಿ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗಲಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಸಿಂಗಲ್-ಪೇನ್ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ ಒಳಗೊಂಡಿದೆ.

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic) ಕೂಡ ಖರೀದಿಗೆ ದೊರೆಯುತ್ತದೆ. ಇದು ರೂ.13.62 ಲಕ್ಷದಿಂದ ರೂ.17.42 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಈ ಕಾರು 2.2-ಲೀಟರ್ ಡೀಸೆಲ್ ಎಂಜಿನ್ ಮಾತ್ರ ಒಳಗೊಂಡಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 16 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 7/ 9 ಆಸನಗಳನ್ನು ತನ್ನಡಗಿಸಿಕೊಂಡಿದೆ.

Mahindra Scorpio Car 58 000 Open Bookings In July 2024 Details

ನೂತನ ಸ್ಕಾರ್ಪಿಯೋ ಕ್ಲಾಸಿಕ್ ಗ್ಯಾಲಕ್ಸಿ ಗ್ರೇ, ರೆಡ್ ರೇಜ್, ಎವರೆಸ್ಟ್ ವೈಟ್, ಡೈಮಂಡ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್ ಹಾಗೂ ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್‌ನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, August 21, 2024, 19:59 [IST]
English summary
Mahindra scorpio car 58000 open bookings july 2024 details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+