ಹತ್ತಾರು ಪ್ರತಿಸ್ಪರ್ಧಿ ಕಾರುಗಳು: 7-ಸೀಟರ್.. ಈ ಮಹೀಂದ್ರಾ ಕಾರಿನ ವೇಗಕ್ಕೆ ಬ್ರೇಕ್ ಹಾಕಲು ಸಾಧ್ಯವಾಗುತ್ತಿಲ್ಲ!
ಭಾರತದಲ್ಲಿ ಟಾಟಾದಂತೆ ಮಹೀಂದ್ರಾ (Mahindra) ಸಹ ಸುರಕ್ಷಿತ ವಾಹನ ತಯಾರಿಕೆಗೆ ಹೆಸರುವಾಸಿಯಾಗಿದೆ. ಕಂಪನಿಯು ದೇಶೀಯ ಮಾರುಕಟ್ಟೆಯಲ್ಲಿ ಥಾರ್, ಎಕ್ಸ್‌ಯುವಿ400 ಇವಿ ಹಾಗೂ ಎಕ್ಸ್‌ಯುವಿ700 ಸೇರಿದಂತೆ ವಿವಿಧ ಎಸ್‌ಯುವಿಗಳನ್ನು ಮಾರಾಟ ಮಾಡುತ್ತಿದೆ. ಈ ಕಾರುಗಳು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ಇಷ್ಟಪಟ್ಟು ತೆಗೆದುಕೊಳುತ್ತಿದ್ದಾರೆ. ಇತ್ತೀಚೆಗೆ ಮಹೀಂದ್ರಾ ಆಗಸ್ಟ್ ತಿಂಗಳ (2024) ಕಾರು ಮಾರಾಟದ ಅಂಕಿಅಂಶಗಳನ್ನು ಬಹಿರಂಗಪಡಿಸಿದೆ. ಬಹುಬೇಡಿಕೆಯ 'ಸ್ಕಾರ್ಪಿಯೋ' ಎಸ್‌ಯುವಿ ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗಿದ್ದು, ನಿರೀಕ್ಷೆಗೂ ಮೀರಿದ ಬೆಳವಣಿಗೆ ಸಾಧಿಸಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ದೇಶೀಯ ಮಾರುಕಟ್ಟೆಯಲ್ಲಿ ಕಳೆದ ತಿಂಗಳು (ಆಗಸ್ಟ್ 2024) ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) ಆರನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಮಾರುತಿ ಸುಜುಕಿ ಬ್ರೆಝಾ, ಎರಡನೇ ಸ್ಥಾನದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಹಾಗೂ ಮೂರನೇ ಸ್ಥಾನದಲ್ಲಿ ಹ್ಯುಂಡೈ ಕ್ರೆಟಾ, ನಾಲ್ಕನೇ ಸ್ಥಾನದಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ ಹಾಗೂ ಐದನೇ ಸ್ಥಾನದಲ್ಲಿ ಟಾಟಾ ಪಂಚ್ ಕಾರಿದೆ.

ಮಹೀಂದ್ರಾ ಕಂಪನಿಯು ಈ ಆಗಸ್ಟ್‌ನಲ್ಲಿ ಬರೋಬ್ಬರಿ 13,787 ಯುನಿಟ್ ಸ್ಕಾರ್ಪಿಯೋ ಎಸ್‌ಯುವಿಗಳನ್ನು ಮಾರಾಟಗೊಳಿಸಿದೆ. 2023ರ ಇದೇ ಅವಧಿಯಲ್ಲಿ ಮಾರಾಟ ಮಾಡಿದ 9,898 ಯುನಿಟ್‌ಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ ಶೇಕಡ 39% ಪ್ರಗತಿ ಕಂಡಿದೆ. ಸದ್ಯ ಮಹೀಂದ್ರಾ ಸ್ಕಾರ್ಪಿಯೋ ಕಾರು ಎನ್ ಹಾಗೂ ಕ್ಲಾಸಿಕ್ ಎಂಬ ಎರಡು ರೂಪದಲ್ಲಿ ಖರೀದಿಗೆ ಲಭ್ಯವಿದೆ.
ಮೊದಲಿಗೆ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಕುರಿತಂತೆ ಮಾತನಾಡೋಣ. ಈ ಎಸ್‌ಯುವಿ ರೂ.13.85 ಲಕ್ಷದಿಂದ ರೂ.24.54 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 2.0-ಲೀಟರ್ ಟರ್ಬೋ ಪೆಟ್ರೋಲ್ ಹಾಗೂ 2.2-ಲೀಟರ್ ಡೀಸೆಲ್ ಎಂಜಿನ್ ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಈ ಸ್ಕಾರ್ಪಿಯೋ ಎನ್ ಎಸ್‌ಯುವಿ 14 ರಿಂದ 18.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಜೊತೆಗೆ 6 ಹಾಗೂ 7 ಆಸನ ವ್ಯವಸ್ಥೆಯನ್ನು ಹೊಂದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic) ಬಗ್ಗೆ ಹೇಳುವುದಾದರೆ, ಈ ಎಸ್‌ಯುವಿ ರೂ.13.62 ಲಕ್ಷದಿಂದ ರೂ.17.42 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಎಸ್ ಹಾಗೂ ಎಸ್11 ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. 7 ಅಥವಾ 9 ಆಸನ ಆಯ್ಕೆಯನ್ನು ಪಡೆದಿದೆ. ಗ್ಯಾಲಕ್ಸಿ ಗ್ರೇ, ಡೈಮಂಡ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ಹೊಸ ಸ್ಕಾರ್ಪಿಯೋ ಕ್ಲಾಸಿಕ್ 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 132 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 300 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಈ ಸ್ಕಾರ್ಪಿಯೋ ಮಾದರಿಗಳಿಗೆ ಹ್ಯುಂಡೈ ಕ್ರೆಟಾ, ಸ್ಕೋಡಾ ಕುಶಾಕ್, ಎಂಜಿ ಆಸ್ಟರ್, ಕಿಯಾ ಸೆಲ್ಟೋಸ್, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಪೋಕ್ಸ್‌ವ್ಯಾಗನ್ ಟೈಗನ್ ಮತ್ತು ಸಿಟ್ರನ್ ಸಿ3 ಏರ್‌ಕ್ರಾಸ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications