ಈ ಕಾರಿಗೆ ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಫಿದಾ: 13 ಲಕ್ಷ ಬೆಲೆ, 7 ಜನ ಹೋಗಬಹುದು!
ದೇಶದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಮಹೀಂದ್ರಾ (Mahindra) ಖ್ಯಾತಿ ಗಳಿಸಿದೆ. ಕಂಪನಿಯು ಮಾರಾಟಗೊಳಿಸುವ ಎಸ್‌ಯುವಿಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿದ್ದು, ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಈಚೆಗೆ ಮಹೀಂದ್ರಾ ಜೂನ್ ತಿಂಗಳ (2024) ಮಾರಾಟದ ಅಂಕಿಅಂಶಗಳನ್ನು ಪ್ರಕಟಿಸಿದೆ. ಜನಪ್ರಿಯ 'ಸ್ಕಾರ್ಪಿಯೋ' ಎಸ್‌ಯುವಿ ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿದ್ದು, ನಿರೀಕ್ಷೆಗೂ ಮೀರಿದ ಪ್ರಗತಿ ಸಾಧಿಸಲಾಗಿದೆ. ಆ ಕುರಿತಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಮಹೀಂದ್ರಾ ಕಂಪನಿಯು ಜೂನ್‌ನಲ್ಲಿ 12,307 ಯುನಿಟ್ ಸ್ಕಾರ್ಪಿಯೋ ಕಾರುಗಳನ್ನು ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಿದ 8,648 ಯುನಿಟ್‌ಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ ಶೇಕಡ 42% ಬೆಳವಣಿಗೆ ಕಂಡಿದೆ. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಸ್ಕಾರ್ಪಿಯೋ ಎನ್ ಹಾಗೂ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿಗಳು ಖರೀದಿಗೆ ಲಭ್ಯವಿವೆ.

ಮೊದಲಿಗೆ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಬಗ್ಗೆ ಮಾತನಾಡೋಣ. ಈ ಕಾರು ರೂ.13.85 ಲಕ್ಷದಿಂದ ರೂ.24.54 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಆಕರ್ಷಕವಾದ ವಿನ್ಯಾಸವನ್ನು ಪಡೆದಿದ್ದು, ಝಡ್2, ಝಡ್4, ಝಡ್6, ಝಡ್8 ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಕೂಡ ಸಿಗುತ್ತದೆ. ಜೊತೆಗೆ 6 ಹಾಗೂ 7 ಆಸನ ವ್ಯವಸ್ಥೆಯನ್ನು ಒಳಗೊಂಡಿದೆ.
ಈ ಸ್ಕಾರ್ಪಿಯೋ ಎನ್ ಎಸ್‌ಯುವಿ 2 ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. 2.0-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್ ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 2WD (ಟೂ ವೀಲ್ ಡ್ರೈವ್) ಹಾಗೂ 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ. 14 ರಿಂದ 18.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಸ್ಕಾರ್ಪಿಯೋ ಎನ್ ಕಾರು ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ನಾಪೋಲಿ ಬ್ಲ್ಯಾಕ್ ಒಳಗೊಂಡಂತೆ 5 ಆಕರ್ಷಕ ಬಣ್ಣಗಳಗೊಂದಿಗೆ ಸಿಗುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸಿಂಗಲ್-ಪೇನ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ನ್ನು ಹೊಂದಿದೆ.
ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic) ಕುರಿತಂತೆ ಹೇಳುವುದಾದರೆ, ಈ ಎಸ್‌ಯುವಿ ರೂ.13.62 ಲಕ್ಷದಿಂದ ರೂ.17.42 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಸ್ ಹಾಗೂ ಎಸ್11 ರೂಪಾಂತರಗಳ ಆಯ್ಕೆಯಲ್ಲಿ ಸಿಗಲಿದ್ದು, 7 ಅಥವಾ 9 ಆಸನ ಆಯ್ಕೆಯನ್ನು ಪಡೆದಿದೆ. ಗ್ಯಾಲಕ್ಸಿ ಗ್ರೇ, ಡೈಮಂಡ್ ವೈಟ್ ಸೇರಿದಂತೆ ಹಲವು ಬಣ್ಣಗಳನ್ನು ಒಳಗೊಂಡಿದೆ.

ಸ್ಕಾರ್ಪಿಯೋ ಕ್ಲಾಸಿಕ್ 2.2-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 132 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 300 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಿವ ಸಾಮರ್ಥ್ಯವನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 16 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications