Scorpio: ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಮಹೀಂದ್ರಾ (Mahindra) ಕೂಡ ಖ್ಯಾತಿಗಳಿಸಿದೆ. ಕಂಪನಿಯು ದಶಕಗಳಿಂದ ಮಾರಾಟಗೊಳಿಸುತ್ತಿರುವ ಸ್ಕಾರ್ಪಿಯೋ ಎಸ್‌ಯುವಿಯು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದೆ. ನೀವು ಈ ಕಾರಿನ 'ಕ್ಲಾಸಿಕ್' ಮಾದರಿಯನ್ನು ಖರೀದಿಸಲು ಯೋಜಿಸುತ್ತಿದ್ದರೆ, ಇಲ್ಲಿ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ತಿಳಿಸಿಕೊಟ್ಟಿದ್ದೇವೆ.
ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic) ಎಸ್‌ಯುವಿಯು ಡೀಸೆಲ್ ಪವರ್‌ಟ್ರೇನ್‌ನೊಂದಿಗೆ ಮಾತ್ರ ದೊರೆಯುತ್ತದೆ. ಬೆಂಗಳೂರಿನಲ್ಲಿ ಇದರ ಬೇಸ್ ಮಾಡೆಲ್ (ಆರಂಭಿಕ ಆವೃತ್ತಿ) ಆಗಿರುವ ಎಸ್ ರೂ.17.06 ಲಕ್ಷ, ಎಸ್ (9 ಸೀಟರ್) ರೂ.17.36 ಲಕ್ಷ, ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಎಸ್ 11 ರೂ.21.69 ಲಕ್ಷ ಹಾಗೂ ಎಸ್ 11 (7ಸಿಸಿ) ರೂಪಾಂತರವು ರೂ.21.76 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ.

ನೀವು ಈ ಕಾರನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, ಐದು ವರ್ಷದ ಅವಧಿಗೆ ಶೇಕಡ 9.8% ಬಡ್ಡಿದರದಲ್ಲಿ ಮಾಸಿಕ ರೂ.31,844 ಇಎಂಐ ಕಟ್ಟಬೇಕು. ಅತ್ಯಾಧುನಿಕ ವಿನ್ಯಾಸವನ್ನು ಹೊಂದಿರುವ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿ, ರೂಪಾಂತರ(ವೇರಿಯೆಂಟ್)ಗಳಿಗೆ ಅನುಗುಣವಾಗಿ 7 ಅಥವಾ 9 ಆಸನ (ಸೀಟ್) ಆಯ್ಕೆಯಲ್ಲಿಯೂ ಲಭ್ಯವಿದೆ.
ನೂತನ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಕಾರು 2.2 - ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 132 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 300 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಿವ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ 6 - ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್‌ನ್ನು ಪಡೆದಿದ್ದು, 16 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಈ ಕಾರು ಗ್ಯಾಲಕ್ಸಿ ಗ್ರೇ, ರೆಡ್ ರೇಜ್, ಎವರೆಸ್ಟ್ ವೈಟ್, ಡೈಮಂಡ್ ವೈಟ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಸಿಗಲಿದ್ದು, ಬೆಲೆಗೆ ತಕ್ಕಂತೆ ಸಾಕಷ್ಟು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್ ಹಾಗೂ ಆಟೋ ಕ್ಲೇಮೇಟ್ ಕಂಟ್ರೋಲ್ ಅನ್ನು ಪಡೆದಿದೆ.
ಹೊಸ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic) ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್, ರೇರ್ ಪಾರ್ಕಿಂಗ್ ಸೇನಾರ್ಸ್ ಒಳಗೊಂಡಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಈ ಕಾರಿಗೆ ಹ್ಯುಂಡೈ ಕ್ರೆಟಾ, ಸ್ಕೋಡಾ ಕುಶಾಕ್, ಕಿಯಾ ಸೆಲ್ಟೋಸ್, ಟೊಯೊಟಾ ಫಾರ್ಚುನರ್, ಮಾರುತಿ ಸುಜುಕಿ ಗ್ರಾಂಡ್ ವಿಟಾರಾ ಹಾಗೂ ಪೋಕ್ಸ್‌ವ್ಯಾಗನ್ ಟೈಗನ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಎಸ್‌ಯುವಿ ಸಹ ಖರೀದಿಗೆ ಸಿಗಲಿದ್ದು, ರೂ.13.60 ಲಕ್ಷದಿಂದ ರೂ.24.54 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 6 ಅಥವಾ 7 ಆಸನದೊಂದಿಗೆ ದೊರೆಯುವ ಈ ಕಾರು, ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 14 ರಿಂದ 18.5 ಕೆಎಂಪಿಎಲ್ ಮೈಲೇಜ್ ನೀಡಲಿದ್ದು, ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ನಿಮ್ಮ ಗಮನಕ್ಕೆ.. ಇಲ್ಲಿ ವಿವರಿಸಲಾಗಿರುವ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಸಂಪರ್ಕಿಸಿರಿ. ಈ ಕಾರು ಬಹಳಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ದಶಕಗಳಿಂದ ಬಹುತೇಕರ ಆಯ್ಕೆಯ ವಾಹನವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications