ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
ಮಹೀಂದ್ರಾ ಕಂಪನಿಯ ಕಾರುಗಳೆಂದರೆ ಭಾರತೀಯರಿಗೆ ತುಂಬಾನೇ ಅಚ್ಚುಮೆಚ್ಚು. ಈ ಕಾರುಗಳು ಯಾವಾಗಲೂ ಬೇಡಿಕೆಯಲ್ಲಿರುತ್ತವೆ. ಇದೇ ಕಾರಣಕ್ಕಾಗಿಯೇ ಮಹೀಂದ್ರಾ ಕಂಪನಿಯ ಕಾರುಗಳಿಗೆ ವೇಟಿಂಗ್ ಪಿರಿಯಡ್ ಹೆಚ್ಚಾಗಿರುತ್ತದೆ. ಆದರೆ ಇದೀಗ ಅದೇ ಮಹೀಂದ್ರಾ ಪ್ರೀಯರಿಗೆ ಕಂಪನಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಇಂದಿನ ಲೇಖನದಲ್ಲಿ ಆ ಕುರಿತಾಗಿ ನೋಡೋಣ.
ಮಹೀಂದ್ರಾ ಕಂಪನಿಯ ಪ್ರಸಿದ್ದ ಕಾರು ಮಾದರಿಗಳಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಮತ್ತು ಮಹೀಂದ್ರಾ ಸ್ಕಾರ್ಪಿಯೋ ಎನ್, ಪ್ರಸಿದ್ದವಾದುದು. ಭಾರತದಲ್ಲಿ ಮಹೀಂದ್ರಾ ಕಂಪನಿ ಇಷ್ಟೊಂದು ಪ್ರಭಾವಯುತವಾಗಿ ಬೆಳೆಯಲು ಸ್ಕಾರ್ಪಿಯೋ (Mahindra Scorpio) ಕಾರು ಮಾದರಿಯು ಪ್ರಮುಖ ಪಾತ್ರವನ್ನು ವಹಿಸಿದೆ. ಈ ಕಾರು ಮಾದರಿ ಲಾಂಚ್ ಆದಾಗಿನಿಂದಲೂ ಭಾರತೀಯ ಹೆದ್ದಾರಿಗಳಲ್ಲಿ ತನ್ನ ಹವಾ ಸೃಷ್ಟಿಸುತ್ತಲೇ ಇದೆ.

ಇದೀಗ ಬಂದ ಮಾಹಿತಿಗಳ ಪ್ರಕಾರ ಭಾರತೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಮತ್ತು ಮಹೀಂದ್ರಾ ಸ್ಕಾರ್ಪಿಯೋ ಎನ್ ಕಾರು ಮಾದರಿಯ ವೇಟಿಂಗ್ ಪಿರಿಯಡ್‌ನ ಅವಧಿ ಕೊಂಚ ಇಳಿಕೆಯಾಗಿದೆ. ಈ ಮೂಲಕ ಸ್ಕಾರ್ಪಿಯೋ ಕಾರು ಮಾದರಿಯನ್ನು ಖರೀದಿಸಬೇಕು ಎಂದುಕೊಂಡಿದ್ದವರಿಗೆ ಸಿಹಿ ಸುದ್ದಿ ದೊರೆತಂದಾಗಿದೆ. ಸ್ಕಾರ್ಪಿಯೋ ಎನ್ ವೇಟಿಂಗ್ ಪಿರಿಯಡ್ 4-5 ತಿಂಗಳಿದ್ದರೆ, ಮಹೀಂದ್ರಾ ಕ್ಲಾಸಿಕ್ ನ ಅವಧಿಯೂ ಸಹ ಇಷ್ಟೇ ಇದೆ.
ಇನ್ನು ಕ್ಲಾಸಿಕ್‌ನ ಎಂಟ್ರಿ ಲೆವೆಲ್ ಆವೃತ್ತಿಯು ೨ ತಿಂಗಳ ಕಾಯುವಿಕೆತ ಅವಧಿಯಲ್ಲಿ ಸಿಗುತ್ತದೆ ಎಂದು ತಿಳಿದು ಬಂದಿದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಅಬ್ಬರಿಸುತ್ತಿರುವ ಮಹೀಂದ್ರಾ ಸ್ಕಾರ್ಪಿಯೋ ಎನ್ ಬಗ್ಗೆ ನೋಡುವುದಾದರೆ, ಈ ಎಸ್‌ಯುವಿ ಆರಂಭಿಕ ಬೆಲೆ ರೂ.13.05 ಲಕ್ಷವಾಗಿದೆ (ಎಕ್ಸ್ ಶೋರೂಂ). ಡೀಸೆಲ್ ಪವರ್‌ಟ್ರೇನ್, 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನ ಹಾಗೂ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರುವ Z8L ರೂಪಾಂತರದ ಬೆಲೆ ರೂ.24.51 ಲಕ್ಷ ಆಗಿದೆ.

ಮಹೀಂದ್ರಾ ಸ್ಕಾರ್ಪಿಯೋ ಎನ್ ಎರಡು ಪವರ್‌ಟ್ರೇನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. 2.0 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 200 bhp ಗರಿಷ್ಠ ಪವರ್ ಹಾಗೂ 380 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 6 ಸ್ವೀಡ್ ಆಟೋಮೆಟಿಕ್ ಅಥವಾ 6 ಸ್ವೀಡ್ ಮ್ಯಾನುವಲ್ ಟ್ರಾಸ್ಮಿಷನ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗಲಿದೆ.
ಮತ್ತೊಂದು ಪವರ್‌ಟ್ರೇನ್ ಆಯ್ಕೆ ಬಗ್ಗೆ ಮಾತನಾಡುವುದರೆ, 2.2 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಹೊಂದಿರುವ ಸ್ಕಾರ್ಪಿಯೋ ಎನ್, 172 bhp ಗರಿಷ್ಠ ಪವರ್ ಹಾಗೂ 370 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಅಲ್ಲದೆ, 6 ಸ್ವೀಡ್ ಅಟೋಮೆಟಿಕ್ ಟ್ರಾಸ್ಮಿಷನ್ ಆಯ್ಕೆ ಹೊಂದಿರುವ ಕಾರು, 400 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ.

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಕುರಿತಾಗಿ ನೊಡುವುದಾದರೆ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಎಸ್‌ಯುವಿ ರೂ.13.60 ಲಕ್ಷದಿಂದ ರೂ.24.54 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಝಡ್2, ಝಡ್4, ಝಡ್6, ಝಡ್8 ರೂಪಾಂತರ ಮತ್ತು ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ನಾಪೋಲಿ ಬ್ಲ್ಯಾಕ್ ಸೇರಿದಂತೆ ಹಲವು ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ.
ಈ ಮಹೀಂದ್ರಾ ಸ್ಕಾರ್ಪಿಯೋ ಎನ್ 2.2-ಲೀಟರ್ ಡೀಸೆಲ್ ಮತ್ತು 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಸಿಗುತ್ತದೆ. 6-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್‌ನ್ನು ಪಡೆದಿದ್ದು, 2WD (ಟೂ ವೀಲ್ ಡ್ರೈವ್) 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. ವಿನ್ಯಾಸದಲ್ಲಿಯೂ ಅತ್ಯುತ್ತಮವಾಗಿದ್ದು, 6, 7 ಆಸನ (ಸೀಟ್)ದೊಂದಿಗೆ ದೊರೆಯುತ್ತದೆ.

ಈ ಸ್ಕಾರ್ಪಿಯೋ ಕ್ಲಾಸಿಕ್ ಕಾರು ಕೇವಲ 2.2-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 132 ಪಿಎಸ್ ಗರಿಷ್ಠ ಪವರ್ ಮತ್ತು 300 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. ಜೊತೆಗೆ RWD (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications