Mahindra: ಸ್ಕಾರ್ಪಿಯೋ ಎಕ್ಸ್ ಹೆಸರನ್ನು ಟ್ರೇಡ್‌ಮಾರ್ಕ್ ಮಾಡಿದ ಮಹೀಂದ್ರಾ.. ಯಾವುದಕ್ಕೆ?
ಭಾರತದ ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಮಹೀಂದ್ರಾ (Mahindra) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಪ್ರತಿಸ್ಪರ್ಧಿಗಳಿಗೆ ಪ್ರಬಲ ಪೈಪೋಟಿ ನೀಡಲು ಕಂಪನಿಯು ಸ್ಕಾರ್ಪಿಯೋ ಎಕ್ಸ್ (Scorpio X) ಎಂಬ ಹೆಸರನ್ನು ಟ್ರೇಡ್‌ಮಾರ್ಕ್ ಮಾಡಿದೆ. ಕಳೆದ ವರ್ಷ ಜಾಗತಿಕವಾಗಿ ಅನಾವರಣಗೊಂಡ ಪಿಕ್ಅಪ್ ಕಾನ್ಸೆಪ್ಟ್ ಟ್ರಕ್‍ಗೆ ಈ ಹೆಸರಿಡಬಹುದು ಎನ್ನಲಾಗಿದೆ.
ಮಹೀಂದ್ರಾ ಕಂಪನಿಯು ಪಿಕ್ಅಪ್ ಕಾನ್ಸೆಪ್ಟ್ (concept) ಟ್ರಕ್‍ನ್ನು ಹೋದ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಿತ್ತು. ಈ ಪಿಕ್ಅಪ್ ಟ್ರಕ್ 2025ರಲ್ಲಿ ಉತ್ಪಾದನೆ ಸಿದ್ಧವಾಗಲಿದೆ ಎಂದು ಹೇಳಲಾಗಿದ್ದು, ಪ್ರಾಯೋಗಿಕ ಸಂಚಾರವನ್ನು ನಡೆಸುವ ವೇಳೆಯಲ್ಲಿಯೂ ಕಂಡುಬಂದಿತ್ತು. ಇದರ ವಿನ್ಯಾಸ ಸ್ಕಾರ್ಪಿಯೋ ಎನ್ ಎಸ್‌ಯುವಿಗೆ ಹೋಲಿಕೆಯಾಗುತ್ತಿತ್ತು. ಟೈಲ್‌ಲೈಟ್ ಮೊದಲ ತಲೆಮಾರಿನ ಸ್ಕಾರ್ಪಿಯೋವನ್ನು ನೆನಪಿಸುತ್ತಿತ್ತು.

ಸ್ಕಾರ್ಪಿಯೋ ಎಕ್ಸ್ ಹೆಸರಿನೊಂದಿಗೆ ಬರಬಹುದಾದ ಈ ಪಿಕ್ಅಪ್ ಟ್ರಕ್, ಹೊಸ ರೀತಿಯ ಡೀಸೆಲ್ ಎಂಜಿನ್‌ನೊಂದಿಗೆ 6-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿರಬಹುದು. ಜೊತೆಗೆ 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿರಬಹುದು. ಮುಂಬರುವ ದಿನಗಳಲ್ಲಿ ನೂತನ ಪಿಕ್ಅಪ್ ಟ್ರಕ್ ವಿನ್ಯಾಸ ಮತ್ತು ವೈಶಿಷ್ಟ್ಯಗಳ ಬಗ್ಗೆ ಮಾಹಿತಿ ದೊರೆಯಲಿದೆ.
ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) ಸರಣಿ ಎಸ್‌ಯುವಿಗಳ ಬಗ್ಗೆ ತಿಳಿಯೋಣ. ಸ್ಕಾರ್ಪಿಯೋ ಎನ್ ರೂ.13.60 ಲಕ್ಷದಿಂದ ರೂ.24.54 ಎಕ್ಸ್ ಶೋರೂಂ ದರವನ್ನು ಹೊಂದಿದೆ. ಝಡ್2, ಝಡ್4 ಸೇರಿದಂತೆ ವಿವಿಧ ರೂಪಾಂತರ ಹಾಗೂ ಆಕರ್ಷಕ ಬಣ್ಣಗಳೊಂದಿಗೆ ಸಿಗುತ್ತದೆ. ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯಾಧುನಿಕವಾಗಿದ್ದು, 6, 7 ಆಸನದೊಂದಿಗೂ ಲಭ್ಯವಿದೆ.

ಸ್ಕಾರ್ಪಿಯೋ ಎನ್, 2.2-ಲೀಟರ್ ಡೀಸೆಲ್ ಮತ್ತು 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 6-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್‌ನೊಂದಿಗೆ ಸಿಗುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ.
ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic) ಎಸ್‌ಯುವಿ, ರೂ.13.59 ಲಕ್ಷದಿಂದ ರೂ.17.35 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಎಸ್ ಹಾಗೂ ಎಸ್11 ರೂಪಾಂತರ ಆಯ್ಕೆಯಲ್ಲಿ ಸಿಗುವ ಈ ಕಾರು, 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು 6-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಒಳಗೊಂಡಿದೆ.
ಸ್ಕಾರ್ಪಿಯೋ ಕ್ಲಾಸಿಕ್ 7, 9 ಆನಸ ವ್ಯವಸ್ಥೆಯಲ್ಲಿ ದೊರೆಯಲಿದ್ದು, RWD (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲ್‌ಇಡಿ, ಡಿಆರ್‌ಎಲ್, ಪ್ರೊಜೆಕ್ಟರ್ ಹೆಡ್‌ಲೈಟ್, ಕ್ರೂಸ್ ಕಂಟ್ರೋಲ್, ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಿರಿ.


Click it and Unblock the Notifications