Mahindra: ದೇಶೀಯ ಬ್ರಾಂಡ್‌ಗೆ ಸಾಥ್ ಕೊಟ್ಟ ಗ್ರಾಹಕರು: ಏಪ್ರಿಲ್‌ನಲ್ಲಿ ಭರ್ಜರಿ ಮಾರಾಟ!

ಭಾರತದ ಪ್ರಮುಖ ಎಸ್‌ಯುವಿ ತಯಾರಕರಾದ ಮಹೀಂದ್ರಾ ಲಿಮಿಟೆಡ್, ಏಪ್ರಿಲ್ 2024 ರಲ್ಲಿ ಅದರ ಒಟ್ಟಾರೆ ವಾಹನ ಮಾರಾಟವನ್ನು ಪ್ರಕಟಿಸಿದೆ. ರಫ್ತು ಸೇರಿದಂತೆ ಪ್ರಯಾಣಿಕ ಹಾಗೂ ವಾಣಿಜ್ಯ ವಾಹನಗಳ ಒಟ್ಟಾರೆ 70,471 ವಾಹನಗಳು ಮಾರಾಟವಾಗಿರುವುದಾಗಿ ಮಹೀಂದ್ರಾ ಘೋಷಿಸಿದೆ. ಈ ಅಂಕಿಅಂಶಗಳ ಪ್ರಕಾರ ರಫ್ತು ಸೇರಿದಂತೆ ಶೇ13 ವಾರ್ಷಿಕ ಬೆಳವಣಿಗೆ ಸಾಧಿಸಿದೆ.

ಯುಟಿಲಿಟಿ ವೆಹಿಕಲ್ಸ್ ವಿಭಾಗದಲ್ಲಿ, ಮಹೀಂದ್ರಾ ದೇಶೀಯ ಮಾರುಕಟ್ಟೆಯಲ್ಲಿ 41,008 ವಾಹನಗಳನ್ನು ಮಾರಾಟ ಮಾಡಿದೆ. ರಫ್ತು ಸೇರಿದಂತೆ ಒಟ್ಟಾರೆ 41,542 ವಾಹನಗಳ ಬೆಳವಣಿಗೆ ಆಗಿದೆ. ಹಾಗೆಯೇ ವಾಣಿಜ್ಯ ವಾಹನಗಳ ದೇಶೀಯ ಮಾರಾಟವು 22,102 ರಷ್ಟಿದೆ. ಮಹೀಂದ್ರಾ ಆಟೋಮೋಟಿವ್ ವಿಭಾಗದ ಅಧ್ಯಕ್ಷ ವೀಜಯ್ ನಕ್ರಾ ಮಾತನಾಡಿ, "ನಾವು ಏಪ್ರಿಲ್‌ನಲ್ಲಿ ಒಟ್ಟು 41,008 SUV ಗಳನ್ನು ಮಾರಾಟ ಮಾಡಿ ಶೇ18 ರಷ್ಟು ವಾರ್ಷಿಕ ಬೆಳವಣಿಗೆ ಸಾಧಿಸಿದ್ದೇವೆ. ಒಟ್ಟಾರೆ 70,471 ಒಟ್ಟು ವಾಹನಗಳ ಮಾರಾಟವಾಗಿದ್ದು, ಇದನ್ನು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ13 ರಷ್ಟು ಬೆಳವಣಿಗೆಯಾಗಿದೆ ಎಂದು ಹೇಳಿದರು.

mahindra-suv-sales-report-april-2024-details

ಹೊಸ XUV 3XO ಬಿಡುಗಡೆ: ಕಂಪನಿಯು ಏಪ್ರಿಲ್‌ನಲ್ಲಿ ಹೊಸ ಮಹೀಂದ್ರಾ XUV 3XO ಅನ್ನು ಬಿಡುಗಡೆ ಮಾಡಿದೆ, ಈ ಕಾರಿನ ಬೆಲೆಯು ರೂ. 7.49 ಲಕ್ಷಗಳಿಂದ ಪ್ರಾರಂಭವಾಗುತ್ತದೆ. ನಾವೀನ್ಯತೆ, ಸುರಕ್ಷತೆ, ಸೌಕರ್ಯ, ಕಾರ್ಯಕ್ಷಮತೆ ಮತ್ತು ಬೆಲೆಯ ವಿಶಿಷ್ಟ ಮಿಶ್ರಣದೊಂದಿಗೆ, XUV 3XO ಕಾಂಪ್ಯಾಕ್ಟ್ SUV ಜಾಗದಲ್ಲಿ ಹೊಸ ಅಲೆ ಎಬ್ಬಿಸಲಿದೆ ಎಂದು ಕಂಪನಿ ಹೇಳಿಕೊಂಡಿದೆ.

ಹೊಸ ಮಹೀಂದ್ರಾ XUV 3XO (Mahindra XUV 3XO) ಎಸ್‍ಯುವಿ MX, AX, AX5 ಮತ್ತು AX7 ಎಂಬ ನಾಲ್ಕು ಟ್ರಿಮ್‌ಗಳಲ್ಲಿ ಲಭ್ಯವಿದೆ. ಈ ಹೊಸ ಎಸ್‍ಯುವಿಯ ಖರೀದಿಗಾಗಿ ಬುಕ್ಕಿಂಗ್ ಅನ್ನು ಮೇ ತಿಂಗಳ 15 ರಂದು ಪ್ರಾರಂಭವಾಗುತ್ತವೆ. ಇನ್ನು ಈ ಹೊಸ ಎಸ್‍ಯುವಿಯು ವಿತರಣೆಯು ಮೇ 26 ರಂದು ಪ್ರಾರಂಭವಾಗುತ್ತದೆ.

mahindra-suv-sales-report-april-2024-details

ಮಹೀಂದ್ರಾದಿಂದ ಮುಂಬರುವ BE ಎಲೆಕ್ಟ್ರಿಕ್ ಎಸ್‍ಯುವಿಯಿಂದ ಹೆಚ್ಚು ಸ್ಫೂರ್ತಿ ಪಡೆದಿರುವ ಮಹೀಂದ್ರಾ XUV 3XO ಎಸ್‍ಯುವಿ, ವೈರ್‌ಲೆಸ್ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಯೊಂದಿಗೆ 10.25 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ನವೀಕರಿಸಿದ 7 - ಸ್ಪೀಕರ್ ಹರ್ಮನ್ ಕಾರ್ಡನ್ ಮ್ಯೂಸಿಕ್ ಸಿಸ್ಟಮ್, 10.25 - ಇಂಚಿನ ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಡ್ಯುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಆಂಬಿಯೆಂಟ್ ಸೌಂಡ್ ಮೋಡ್‌ಗಳು, ಹಿಂದಿನ ಎಸಿ ವೆಂಟ್‌ಗಳು ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ಇನ್ನಷ್ಟು ಫಿಚರ್ಸ್ ಗಳನ್ನು ಹೊಂದಿದೆ.

ಮಹೀಂದ್ರಾ XUV 3XO ಎಸ್‍ಯುವಿಯ ಸುರಕ್ಷತ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ ಲೆವೆಲ್ 2 ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ತಂತ್ರಜ್ಞಾನವನ್ನು ಹೊಂದಿದೆ. ಹೆಚ್ಚುವರಿಯಾಗಿ, ಹೊಸ ಮಹೀಂದ್ರಾ ಸಬ್‌ಕಾಂಪ್ಯಾ ಎಸ್‍ಯುವಿಯಲ್ಲಿ ಆರು ಏರ್‌ಬ್ಯಾಗ್‌ಗಳು, 360-ಡಿಗ್ರಿ ಕ್ಯಾಮೆರಾ, EBD ಜೊತೆಗೆ ABS, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್ ಮತ್ತು ಬ್ರೇಕ್ ಡಿಸ್ಕ್ ವೈಪಿಂಗ್ ಹೊಂದಿದೆ.

mahindra-suv-sales-report-april-2024-details

ಇದರೊಂದಿಗೆ ರೋಲ್ ಓವರ್ ಮಿಟಿಗೇಶನ್, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್, ವೆಹಿಕಲ್ ಡೈನಾಮಿಕ್ಸ್ ಕಂಟ್ರೋಲ್ ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ ಅನ್ನು ಹೊಂದಿದೆ. ಹೊಸ ಮಹೀಂದ್ರಾ ಸಬ್‌ಕಾಂಪ್ಯಾಕ್ಟ್ ಎಸ್‍ಯುವಿ 350mm ವಾಟರ್ ವೇಡಿಂಗ್ ಡೆಪ್ತ್ ಮತ್ತು 2600mm ಲಾಂಗ್ ವ್ಹೀಲ್ ಬೇಸ್ ಅನ್ನು ಹೊಂದಿದೆ. XUV 3XO 23.7 ಡಿಗ್ರಿಗಳಷ್ಟು ಉತ್ತಮ-ವರ್ಗದ ಫಾರ್ವರ್ಡ್ ಗೋಚರತೆಯನ್ನು ನೀಡುತ್ತದೆ ಎಂದು ಹೇಳಲಾಗಿದೆ.

ಈ ಮಹೀಂದ್ರಾ XUV 3XO ಎಸ್‍ಯುವಿ 1.2 ಲೀಟರ್ ಟರ್ಬೊ ಪೆಟ್ರೋಲ್, 1.2 ಟರ್ಬೊ GDi ಪೆಟ್ರೋಲ್ ಎಂಜಿನ್ ಮತ್ತು 1.5 ಡೀಸೆಲ್ ಎಂಜಿನ್ ಎಂಬ ಮೂರು ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 108 bhp ಮತ್ತು 200 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

mahindra-suv-sales-report-april-2024-details

ಇದರೊಂದಿಗೆ 1.2 ಟರ್ಬೊ GDi ಪೆಟ್ರೋಲ್ ಎಂಜಿನ್ ಎಂಜಿನ್ 129 bhp ಮತ್ತು 230 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.5-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ 115 bhp ಮತ್ತು 300 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಮತ್ತು 6-ಸ್ಪೀಡ್ AMT ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಲಭ್ಯವಿದೆ.ಈ ಎಸ್‍ಯುವಿಯು 18.89 ಕಿ.ಮೀ ಮತ್ತು 20.1 ಕಿ.ಮೀ ಮೈಲೇಜ್ ನೀಡುತ್ತದೆ.

Article Published On: Friday, May 3, 2024, 8:30 [IST]
English summary
Mahindra suv sales report april 2024 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+