ಎದುರಾಳಿಗಳಿಗೆ ನಡುಕ.. ಮಹೀಂದ್ರಾ ಥಾರ್ ಅರ್ಮಾಡಾ ಉತ್ಪಾದನೆ ಶುರು?, ಪ್ರವಾಸ ಹೋಗುವುದು ಇನ್ನೂ ಸುಲಭ!
ದೇಶದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಮಹೀಂದ್ರಾ (Mahindra) ಖ್ಯಾತಿ ಗಳಿಸಿದೆ. ಕಂಪನಿಯು ಮಾರಾಟಗೊಳಿಸುವ ಆಫ್-ರೋಡ್ ಎಸ್‌ಯುವಿ 'ಥಾರ್ 3-ಡೋರ್'ಗೆ ಭಾರೀ ಬೇಡಿಕೆಯಿದ್ದು, ಹೆಚ್ಚಿನ ಸಂಖ್ಯೆ ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳುತ್ತಿದ್ದಾರೆ. ಮಾರುತಿ ಸುಜುಕಿ ಜಿಮ್ನಿ ಹಾಗೂ ಫೋರ್ಸ್ ಗೂರ್ಖಾ 5-ಡೋರ್‌ಗಳಿಗೆ ಪ್ರಬಲ ಸ್ಪರ್ಧೆಯೊಡ್ಡಲು ಥಾರ್ 5-ಡೋರ್ (Thar 5-door) ಶೀಘ್ರದಲ್ಲಿಯೇ ದೇಶೀಯ ಮಾರುಕಟ್ಟೆಗೆ ಬರಲಿದ್ದು, ಈಗಾಗಲೇ ಹಲವು ಬಾರಿ ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಂಡುಬಂದಿದೆ. ಈ ಥಾರ್‌ಗೆ 'ಅರ್ಮಾಡಾ' ಎಂಬ ಹೆಸರನ್ನು ಇಡಬಹುದು ಎನ್ನಲಾಗಿದೆ.
ಸದ್ಯ ಮಹೀಂದ್ರಾ ಕಂಪನಿಯು ಮಹಾರಾಷ್ಟ್ರದ ಚಕನ್‌ನಲ್ಲಿರುವ ತನ್ನ ಉತ್ಪಾದನಾ ಘಟಕದಲ್ಲಿ 'ಥಾರ್ 5-ಡೋರ್' ತಯಾರಿಕೆ ಪ್ರಾರಂಭಿಸಿದೆ ಎಂದು ಮೂಲಗಳು ಹೇಳಿವೆ. ತಿಂಗಳಿಗೆ ಸುಮಾರು 6,000 ಯುನಿಟ್ ಉತ್ಪಾದಿಸಲು ನಿರ್ಧರಿಸಿದ್ದು, ಒಟ್ಟಾರೆ ವಾರ್ಷಿಕ 70,000 ಯುನಿಟ್ ತಯಾರಿಸಲು ಉದ್ದೇಶಿಸಿದೆ ಎಂದು ಹೇಳಲಾಗಿದೆ. ಈಗಾಗಲೇ ದೇಶಾದ್ಯಂತ ಕೆಲವೊಂದು ಮಹೀಂದ್ರಾ ಡೀಲರ್‌ಶಿಪ್‌ಗಳು 'ಥಾರ್ 5-ಡೋರ್' ಬುಕ್ಕಿಂಗ್‌ನ್ನು ಅನಧಿಕೃತವಾಗಿ ಶುರು ಮಾಡಿವೆ ಎಂದು ತಿಳಿದುಬಂದಿದೆ.

ನೂತನ ಮಹೀಂದ್ರಾ ಥಾರ್ 5-ಡೋರ್ (Mahindra Thar 5-door), ಭಾರತೀಯ ಕುಟುಂಬಗಳಿಗೆ ಸೂಕ್ತ ಕಾರಾಗಿದ್ದು, ದೈನಂದಿನ ಬಳಕೆ ಹಾಗೂ ಪ್ರವಾಸಕ್ಕೆ ಹೋಗಲು ಹೆಚ್ಚು ಉಪಯುಕ್ತವಾಗುತ್ತದೆ. ಈ ಥಾರ್ 5-ಡೋರ್ ಎಸ್‌ಯುವಿಯು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿರಲಿದ್ದು, ಮಲ್ಟಿ-ಸ್ಪೋಕ್ ಅಲಾಯ್ ವೀಲ್‌ಗಳು, ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಹಾಗೂ ಡಿಆರ್‌ಎಲ್‌ಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ.
ಹೊಸ ಥಾರ್ 5-ಡೋರ್ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿರಲಿದೆ ಎನ್ನಲಾಗಿದೆ. ದೊಡ್ಡದಾದ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಂಟರ್ ಆರ್ಮ್‌ರೆಸ್ಟ್, ಹೈಟ್, ಸನ್‌ರೂಫ್, ರೇರ್ ಎಸಿ ವೆಂಟ್, ಪ್ರೀಮಿಯಂ ಸೌಂಡ್ ಸಿಸ್ಟಮ್, ಕೀಲೆಸ್ ಎಂಟ್ರಿ, ವೈರ್‌ಲೆಸ್ ಚಾರ್ಜಿಂಗ್ ಲೆವೆಲ್-2 ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹೊಂದಿರುವ ಸಾಧ್ಯತೆಯಿದೆ.
ಪ್ರಸ್ತುತ ಖರೀದಿಗೆ ದೊರೆಯುವ ಥಾರ್ 3-ಡೋರ್ (Thar 3-door) ಎಸ್‌ಯುವಿಯಂತೆ ಥಾರ್ 5-ಡೋರ್ ಸಹ 2.0-ಲೀಟರ್ ಪೆಟ್ರೋಲ್ ಹಾಗೂ 2.2-ಲೀಟರ್ ಡೀಸೆಲ್ ಎಂಜಿನ್ ಪಡೆದಿರುವ ನೀರಿಕ್ಷೆಯಿದೆ. ಸರಿ ಸುಮಾರು ರೂ.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಆದಾಗ್ಯೂ ಯಾವುದೇ ಖಚಿತ ವಿವರಗಳು ಲಭ್ಯವಿಲ್ಲ.
ದೇಶೀಯವಾಗಿ ಲಭ್ಯವಿರುವ ಮಹೀಂದ್ರಾ ಥಾರ್ 3-ಡೋರ್, ರೂ.11.35 ಲಕ್ಷದಿಂದ ರೂ.17.60 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 2-ಲೀಟರ್ ಟರ್ಬೊ ಪೆಟ್ರೋಲ್, 2.2-ಲೀಟರ್ ಡೀಸೆಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 13 ರಿಂದ 15.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 4 ಜನರು ಸುಲಭವಾಗಿ ಓಡಾಟವನ್ನು ನಡೆಸಬಹುದು.
ಈ ಥಾರ್ 3-ಡೋರ್ ಎವರೆಸ್ಟ್ ವೈಟ್, ಡೆಸರ್ಟ್ ಫ್ಯೂರಿ, ರೆಡ್ ರೇಜ್ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೆ ಸಿಗುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಮ್ಯಾನುವಲ್ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, ಹಿಲ್ ಡಿಸೆಂಟ್ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್ ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications