ಮಹೀಂದ್ರಾ ಥಾರ್ ಡೀಸೆಲ್ ಎಸ್‍ಯುವಿ ಖರೀದಿಗಾಗಿ ಮುಗಿಬಿದ್ದ ಜನ: ಮಾರುತಿ ಜಿಮ್ನಿಗೆ ಎದೆಬಡಿತ ಶುರು!

ಮಹೀಂದ್ರಾ ಥಾರ್ (Mahindra Thar) ಎಸ್‍ಯುವಿಯು ಬಹಳ ವರ್ಷಗಳಿಂದ ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯ ಆಫ್-ರೋಡರ್ ಎಸ್‍ಯುವಿಯಾಗಿದೆ. ಸದ್ಯ ದೇಶಿಯ ಮಾರುಕಟ್ಟೆಯಲ್ಲಿರುವ ಪ್ರಸ್ತುತ ಜನರೇಷನ್ ಮಹೀಂದ್ರಾ ಥಾರ್ ಮಾದರಿಯು ಬಹುಬೇಡಿಯೊಂದಿಗೆ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಇದರಿಂದ ಬೇಡಿಕೆ ಹೆಚ್ಚಾಗಿರುವುದರಿಂದ ಮಹೀಂದ್ರಾ ಥಾರ್ ಮಾದರಿಗೆ ಕಾಯುವ ಅವಧಿಯನ್ನು ಹೊಂದಿದೆ.

ಮಹೀಂದ್ರಾ ಕಂಪನಿಯು 2024ರ ಜನವರಿ ತಿಂಗಳಿನಲ್ಲಿ ಥಾರ್‌ನ ಒಟ್ಟು 6,059 ಯುನಿಟ್‌ಗಳನ್ನು ಮಾರಾಟ ಮಾಡಿತು, ಅದರಲ್ಲಿ ಡೀಸೆಲ್ ರೂಪಾಂತರಗಳು ಮಾತ್ರ 5,402 ಯುನಿಟ್‌ಗಳು ಅಥವಾ ಶೇಕಡಾ 89 ರಷ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಮಾರಾಟವಾದ ಯುನಿಟ್‌ಗಳಿಗೆ ಹೋಲಿಸಿದರೆ ಇದು ಸಂಖ್ಯೆಯಲ್ಲಿ ಸುಮಾರು 100 ಪ್ರತಿಶತದಷ್ಟು ಹೆಚ್ಚಾಗಿದೆ. ಕಂಪನಿಯು ಕಳೆದ ವರ್ಷ ಡೀಸೆಲ್ ಮಾದರಿಯನ್ನು 4,076 ಯುನಿಟ್‌ಗಳನ್ನು ಮಾರಾಟ ಮಾಡಿತು.

Mahindra Thar Diesel

ಈ ಮಹೀಂದ್ರಾ ಥಾರ್ ಎಸ್‍ಯುವಿಯು ಕಡಿಮೆ ಬಜೆಟ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಎಸ್‍ಯುವಿಯಾಗಿದೆ. ಇದಕ್ಕಾಗಿಯೇ ವಾಹನ ಉತ್ಸಾಹಿಗಳು ಒಂದನ್ನು ಖರೀದಿಸಲು ನಿರಂತರವಾಗಿ ಸರತಿ ಸಾಲಿನಲ್ಲಿ ನಿಲ್ಲುತ್ತಾರೆ. ಇದು ಕೆಲವು ಪ್ರಭಾವಶಾಲಿ ಸ್ಪೆಕ್ಸ್‌ಗಳನ್ನು ಹೊಂದಿದೆ: ಮಹೀಂದ್ರಾ ಥಾರ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದು ಹಲವು ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ.

ಇದರಲ್ಲಿ ಮೊದಲಿಗೆ 2.0 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಆಗಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 2.2 ಲೀಟರ್ ಟರ್ಬೊ-ಡೀಸೆಲ್ ಎಂಜಿನ್ 130 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

Mahindra Thar Diesel

ಇದು ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಈ ಥಾರ್ ಎಸ್‍ಯುವಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿದೆ. ಈ ಎಸ್‍ಯುವಿಯ ವೈಟಿಂಗ್ ಪಿರೇಡ್ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದೆ.

ಈ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಎಸ್‍ಯುವಿಯ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿದೆ. ಇದರೊಂದಿಗೆ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಈ ಥಾರ್ ಎಸ್‍ಯುವಿ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಅನ್ನು ಒಳಗೊಂಡಿದೆ.

Mahindra Thar Diesel

ಈ ಥಾರ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ ಹೊಂದಿದೆ. ಇದರೊಂದಿಗೆ ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್ ಅನ್ನು ಹೊಂದಿದೆ.

ಇದರೊಂದಿಗೆ ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್ ಮತ್ತು ರಿಯರ್ ವ್ಯೂ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಥಾರ್ ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿದೆ. ಈ ಮಹೀಂದ್ರಾ ಥಾರ್ ಎಸ್‍ಯುವಿಯು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, February 13, 2024, 19:56 [IST]
English summary
Mahindra thar diesel variants sales in january 2024 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+