ಬಹುಬೇಡಿಕೆಯ ಥಾರ್ ಖರೀದಿಗಾಗಿ ಕ್ಯೂ ನಿಲ್ಲುವಾಗಲೇ ಗ್ರಾಹಕರಿಗೆ ಶಾಕ್ ಕೊಟ್ಟ ಮಹೀಂದ್ರಾ!
ಮಹೀಂದ್ರಾ ಥಾರ್ (Mahindra Thar) ಎಸ್‍ಯುವಿಯು ಬಹಳ ವರ್ಷಗಳಿಂದ ಭಾರತದಲ್ಲಿ ಜನಪ್ರಿಯ ಆಫ್-ರೋಡರ್ ಎಸ್‍ಯುವಿಯಾಗಿದೆ. ಸದ್ಯ ದೇಶಿಯ ಮಾರುಕಟ್ಟೆಯಲ್ಲಿರುವ ಪ್ರಸ್ತುತ ಜನರೇಷನ್ ಮಹೀಂದ್ರಾ ಥಾರ್ ಮಾದರಿಯು ಬಹುಬೇಡಿಯೊಂದಿಗೆ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಈ ಲೈಫ್‌ಸ್ಟೈಲ್ ಎಸ್‌ಯುವಿ ಬಿಡುಗಡೆಗೊಂಡು ಮೂರು ವರ್ಷಗಳ ನಂತರವೂ ಅದೇ ಬೇಡಿಕೆಯನ್ನು ಉಳಿಸಿಕೊಂಡಿದೆ.
ಈ ನಡುವೆ ಮಹೀಂದ್ರಾ ಕಂಪನಿಯು ತನ್ನ ಆಯ್ದ ಕಾರುಗಳ ಬೆಲೆಗಳನ್ನು ಪರಿಷ್ಕರಿಸಿದೆ. ಮಹೀಂದ್ರಾ ಥಾರ್ ಎಸ್‍ಯುವಿಯ ಆಯ್ದ ರೂಪಾಂತರಗಳ ಬೆಲೆಯನ್ನು ರೂ.10,000 ವರೆಗೆ ಹೆಚ್ಚಿಸಿದೆ. ಈ ಬೆಲೆ ಏರಿಕೆಯು ಥಾರ್ ಬೇಸ್-ಸ್ಪೆಕ್ LX ಹಾರ್ಡ್-ಟಾಪ್ ಪೆಟ್ರೋಲ್ AT RWD, AX(O) ಹಾರ್ಡ್-ಟಾಪ್ ಡೀಸೆಲ್ MT RWD, ಮತ್ತು LX ಹಾರ್ಡ್-ಟಾಪ್ ಡೀಸೆಲ್ MT RWD ರೂಪಾಂತರಗಳಿಗೆ ಅನ್ವಯಿಸುತ್ತದೆ. ಉಳಿದ ರೂಪಾಂತರಗಳ ಬೆಲೆಗಳು ಬದಲಾಗದೆ ಉಳಿಯುತ್ತವೆ.

ಬೆಲೆ ಏರಿಕೆಯ ಬಳಿಕ, ಮಹೀಂದ್ರಾ ಥಾರ್ ಬೆಲೆಯು ಈಗ ರೂ.11.35 ಲಕ್ಷದಿಂದ ರೂ.17.60 ಲಕ್ಷವಾಗಿದೆ. ಈ ಬೆಲೆಗಳು ಎಕ್ಸ್ ಶೋ ರೂಂ ಪ್ರಕಾರವಾಗಿದೆ. ಮಹೀಂದ್ರಾ ಥಾರ್ ಮಾದರಿಯ ಮಾರಾಟವು ಮಾರುತಿ ಜಿಮ್ನಿ ಗಿಂತ 24 ಪಟ್ಟು ಹೆಚ್ಚಾಗಿದೆ. ಕಳೆದ ತಿಂಗಳು ಮಹೀಂದ್ರಾ ಥಾರ್ ಮಾದರಿಯ 6,160 ಯುನಿಟ್‌ಗಳು ಮಾರಾಟವಾಗಿವೆ.
ಕಳೆದ ವರ್ಷ ಇದೇ ತಿಂಗಳಲ್ಲಿ ಥಾರ್ ಎಸ್‍ಯುವಿಯ 5,302 ಯುನಿಟ್‌ಗಳ ಮಾರಾಟವಾಗಿತ್ತು. ಇದು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ 16 ಪ್ರತಿಶತದಷ್ಟು ವಾರ್ಷಿಕ ಮಾರಾಟದ ಬೆಳವಣಿಗೆಯನ್ನು ಸಾಧಿಸಿದೆ. ಈ ಮಹೀಂದ್ರಾ ಥಾರ್ ಎಸ್‍ಯುವಿಯು ಕಡಿಮೆ ಬಜೆಟ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಎಸ್‍ಯುವಿಯಾಗಿದೆ. ಇದಕ್ಕಾಗಿಯೇ ವಾಹನ ಉತ್ಸಾಹಿಗಳು ಒಂದನ್ನು ಖರೀದಿಸಲು ನಿರಂತರವಾಗಿ ಸರತಿ ಸಾಲಿನಲ್ಲಿ ನಿಲ್ಲುತ್ತಾರೆ.

ಮಹೀಂದ್ರಾ ಥಾರ್ ದೊಡ್ಡ ಪ್ಲಸ್ ಪಾಯಿಂಟ್ ಅದರ ರಗಡ್ ವಿನ್ಯಾಸವಾಗಿದೆ. ಈ ಮಹೀಂದ್ರಾ ಥಾರ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದು ಹಲವು ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಇದರಲ್ಲಿ ಮೊದಲಿಗೆ 2.0 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಆಗಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಇನ್ನು 2.2 ಲೀಟರ್ ಟರ್ಬೊ-ಡೀಸೆಲ್ ಎಂಜಿನ್ 130 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದು ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಈ ಥಾರ್ ಎಸ್‍ಯುವಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿದೆ.

ಈ ಎಸ್‍ಯುವಿಯ ವೈಟಿಂಗ್ ಪಿರೇಡ್ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದೆ. ಈ ಥಾರ್ ಎಸ್‍ಯುವಿಯ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿದೆ. ಇದರೊಂದಿಗೆ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಈ ಥಾರ್ ಎಸ್‍ಯುವಿ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಅನ್ನು ಒಳಗೊಂಡಿದೆ.
ಇನ್ನು ಈ ಥಾರ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ ಹೊಂದಿದೆ. ಇದರೊಂದಿಗೆ ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್ ಅನ್ನು ಹೊಂದಿದೆ.

ಇನ್ನು ಈ ಎಸ್‍ಯುವಿಯು ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್ ಮತ್ತು ರಿಯರ್ ವ್ಯೂ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಥಾರ್ ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿದೆ. ಈ ಮಹೀಂದ್ರಾ ಥಾರ್ ಎಸ್‍ಯುವಿಯು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತಕ್ಕೆ ಹೋಗಿದೆ.


Click it and Unblock the Notifications








