ಮಾರುಕಟ್ಟೆ ಶೇಕ್: ಹೊಸ ಮಹೀಂದ್ರಾ ಥಾರ್ ರೋಕ್ಸ್ 4X4 ಬೆಲೆಗಳು ಬಹಿರಂಗ

ಮಹೀಂದ್ರಾ ಥಾರ್ ಯಾವಾಗಲೂ ಹಾರ್ಡ್‌ಕೋರ್ ಆಫ್-ರೋಡ್ ಡಿಎನ್‌ಎ, ಗೋ-ಎನಿವೇರ್ ಸಾಮರ್ಥ್ಯ ಮತ್ತು ಒರಟಾದ ಲೈಫ್ ಸ್ಟೈಲ್ ಎಸ್‍ಯುವಿಯಾಗಿದೆ. ಆಫ್-ರೋಡ್ ವಾಹನ ಎಂದಾಗ ಎಲ್ಲರ ಮನಸ್ಸಿಗೆ ಬರುವುದು ಮಹೀಂದ್ರಾ ಥಾರ್ (Mahindra Thar). ಭಾರತದಲ್ಲಿ ಬಹಳ ವರ್ಷಗಳಿಂದ ಮಾರಾಟವಾಗುತ್ತಿರುವ ಜನಪ್ರಿಯ ಆಫ್ ರೋಡರ್ ಎಸ್‍ಯುವಿ ಮಾದರಿಯಾಗಿದೆ. ಈ ಥಾರ್ ಎಸ್‍ಯುವಿಗೆ ದೊಡ್ಡ ಅಭಿಮಾನಿ ಬಳಗವಿದೆ. ಆದರೆ ಇದು ಎಂದಿಗೂ ಫ್ಯಾಮಿಲಿ ಎಸ್‌ಯುವಿಯಾಗಿರಲಿಲ್ಲ. ಇದಕ್ಕೆ ಹೊರತಾಗಿರಲಿಲ್ಲ 2020ರ ಬಿಡುಗಡೆಗೊಂಡ 3-ಡೋರ್ ಥಾರ್. ಇನ್ನು ಮಹೀಂದ್ರಾ ಕಂಪನಿಯು ಹೊಸ ಥಾರ್ 5-ಡೊರಿನ ಆವೃತ್ತಿ ಥಾರ್ ರೋಕ್ಸ್ ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ

ಇದೀಗ ಮಹೀಂದ್ರಾ & ಮಹೀಂದ್ರಾ ಕಂಪನಿಯು ಕೊನೆಗೂ ಥಾರ್ ರೋಕ್ಸ್ 4X4 (Mahindra Thar Roxx 4X4) ಬೆಲೆಗಳನ್ನು ಬಹಿರಂಗಪಡಿಸಿದೆ. ಈ ಮಹೀಂದ್ರಾ ಥಾರ್ ರೋಕ್ಸ್ 4X4 ಎಸ್‍ಯುವಿಯು MX5, AX5L, AX7L ಮತ್ತು MX5 4X4 ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ಮೊದಲಿಗೆ ಥಾರ್ ರೋಕ್ಸ್ 4X4 ಎಸ್‍ಯುವಿಯ ಲೋ-ಸ್ಪೆಕ್ MX5 ರೂಪಾಂತರದ ಬೆಲೆಯು 18.79 ಲಕ್ಷವಾಗಾಗಿದೆ.

Mahindra Thar Roxx

ಇನ್ನು AX5L 4X4 ಡೀಸೆಲ್ ಆಟೋಮ್ಯಾಟಿಕ್ ಬೆಲೆಯು ರೂ. 20.99 ಲಕ್ಷ ರೂ.ಗಳಾಗಿದ್ದು, AX7L 4X4 ಡೀಸೆಲ್ ಅನ್ನು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗಳೊಂದಿಗೆ ನೀಡಲಾಗಿದ್ದು, ಕ್ರಮವಾಗಿ ರೂ.20.99 ಲಕ್ಷ ಮತ್ತು ರೂ.22.49 ಲಕ್ಷ ಬೆಲೆಗಳನ್ನು ಹೊಂದಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ. 4X2 ವೇರಿಯಂಟ್‌ಗಳಿಗೆ ಹೋಲಿಸಿದರ , ಥಾರ್ ರೋಕ್ಸ್ 4X4 ಮಾದರಿಗಳು ಅಂದಾಜು 1.8 ಲಕ್ಷದಿಂದ 2 ಲಕ್ಷ ರೂಪಾಯಿಗಳಷ್ಟು ದುಬಾರಿಯಾಗಿದೆ.

ಮಹೀಂದ್ರಾ ಥಾರ್ ರೋಕ್ಸ್ 4X4 ಪ್ರತ್ಯೇಕವಾಗಿ 2.2-ಲೀಟರ್ ಡೀಸೆಲ್ ಎಂಜಿನ್‌ನಿಂದ ಚಾಲಿತವಾಗಿದ್ದು, ಈ ಎಂಜಿನ್ 175 bhp ಪವರ್ ಮತ್ತು 370 Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಅನ್ನು ಹೊಂದಿದೆ. ಇನ್ನು ಡೀಸೆಲ್ 4X2 ರೂಪಾಂತರಗಳು, 2.2-ಲೀಟರ್ TGDi ಪೆಟ್ರೋಲ್ ರೂಪಾಂತರವು 152hp ಮತ್ತು 330 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

Mahindra Thar Roxx

ಆಟೋಮ್ಯಾಟಿಕ್ ರೂಪಾಂತರವು 177 hp ಮತ್ತು 380 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಮತ್ತೊಂದೆಡೆ, ಮಹೀಂದ್ರಾ ಥಾರ್ ರೋಕ್ಸ್‌ನಲ್ಲಿರುವ ಬೇಸ್ 2.2-ಲೀಟರ್ ಡೀಸೆಲ್ ಎಂಜಿನ್ 162 hp ಮತ್ತು 330 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಆದರೆ 4X4 ಪವರ್‌ಟ್ರೇನ್‌ಗಳೊಂದಿಗೆ ಟಾಪ್ ಸ್ಪೆಕ್ ಮಾದರಿಗಳು 175hp ಮತ್ತು 370Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಡೀಸೆಲ್ ಪವರ್‌ಟ್ರೇನ್‌ಗಳು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಆಯ್ಕೆಯೊಂದಿಗೆ ಹೊಂದಿದೆ. ಮೈಲೇಜ್ ಅಂಕಿಅಂಶಗಳ ಬಗ್ಗೆ ಹೇಳುವುದಾದರೆ, ಪೆಟ್ರೋಲ್ ಎಂಜಿನ್ 12.40 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಮತ್ತೊಂದೆಡೆ, ಡೀಸೆಲ್ ಎಂಜಿನ್ 15.20 ಕಿ.ಮೀ ನಷ್ಟು ಮೈಲೇಜ್ ನೀಡುತ್ತದೆ ಎಂದು ಹೇಳಲಾಗುತ್ತದೆ. ಇಲ್ಲಿ ಉಲ್ಲೇಖಿಸಲಾದ ಅಂಕಿಅಂಶಗಳು ARAI- ಪ್ರಮಾಣೀಕೃತವಾಗಿವೆ ಎಂಬುದನ್ನು ಗಮನಿಸಿ.

Mahindra Thar Roxx

ಥಾರ್ ರೋಕ್ಸ್ ನಗರ ಮತ್ತು ಹೆದ್ದಾರಿಯಲ್ಲಿ ಕ್ರಮವಾಗಿ 10.82 ಕಿ.ಮೀ ಮತ್ತು 15.44 ಕಿ.ಮೀ ಮೈಲೇಜ್ ಅನ್ನು ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. 3-ಡೋರ್ ಥಾರ್‌ನ ಸಂಪೂರ್ಣ ಕಪ್ಪು ಕ್ಯಾಬಿನ್ ಅನ್ನು ಬಳಸಲು ಸುಲಭವಾಗಿತ್ತು. ಬಿಳಿ ಬಣ್ಣವಾಗಿರುವುದರಿಂದ ಸ್ವಚ್ಛವಾಗಿಡುವುದು ದೊಡ್ಡ ಸವಾಲು. ರೋಕ್ಸ್ ಫಿಚರ್ಸ್ ವಿಷಯದಲ್ಲಿ, ಪನರೊಮಿಕ್ ಸನ್‌ರೂಫ್, ಪವರ್ಡ್ ಮತ್ತು ವೆಂಟಿಲೆಟೆಡ್ ಸೀಟುಗಳು ಮತ್ತು ಪ್ರೀಮಿಯಂ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್ ಸೇರಿವೆ.

ಇನ್ನು ಡಿಜಿಟಲ್ ಕಾಕ್‌ಪಿಟ್ ಅನ್ನು ಟ್ವಿನ್ 26.03 ಸೆಂ ಸ್ಕ್ರೀನ್‌ಗಳೊಂದಿಗೆ ಅಪ್‌ಗ್ರೇಡ್ ಮಾಡಲಾಗಿದೆ ಮತ್ತು ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇಯನ್ನು ಸಂಪೂರ್ಟ್ ಮಾಡುತ್ತದೆ. ಇನ್ನು ಲೆವೆಲ್-2 ADAS ಅನ್ನು ಹೊಂದಿದೆ. ಇನ್ನು ಥಾರ್‌ಗೆ ಐದು ಬಣ್ಣಗಳಿಗೆ ಹೋಲಿಸಿದರೆ ರೋಕ್ಸ್ ಮಾದರಿಯು ಏಳು ಬಣ್ಣ ಆಯ್ಕೆಗಳಲ್ಲಿ ಲಭ್ಯವಿದೆ.

Article Published On: Wednesday, September 25, 2024, 19:26 [IST]
English summary
Mahindra thar roxx 4x4 prices revealed details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+