Mahindra: ಮಹೀಂದ್ರಾ ಥಾರ್ ರಾಕ್ಸ್‌ನಲ್ಲಿ ಈ ಫೀಚರ್ ಖಚಿತ.. ತುದಿಗಾಲಿನಲ್ಲಿ ಕಾಯುತ್ತಿದ್ದಾರೆ ಗ್ರಾಹಕರು!
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಮಹೀಂದ್ರಾ (Mahindra) ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯ ಹೊಂದಿರುವ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಸಹ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಅದರಲ್ಲೂ ಆಫ್-ರೋಡ್ ಎಸ್‌ಯುವಿ 3-ಡೋರ್ 'ಥಾರ್'ಗೆ ಭಾರೀ ಬೇಡಿಕೆಯಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. 5-ಡೋರ್‌ನ ಮಾರುತಿ ಸುಜುಕಿ ಜಿಮ್ನಿ ಮತ್ತು ಫೋರ್ಸ್ ಗೂರ್ಖಾಗೆ ಪ್ರಬಲ ಸ್ಪರ್ಧೆಯೊಡ್ಡಲು 5-ಡೋರ್ ಆಯ್ಕೆಯಲ್ಲಿ ಥಾರ್ ರಾಕ್ಸ್ (Thar Roxx) ಎಸ್‌ಯುವಿಯನ್ನು ಪರಿಚಯಿಸಲು ಕಂಪನಿಯು ಸಾಕಷ್ಟು ತಯಾರಿ ನಡೆಸುತ್ತಿದೆ.
ಮಹೀಂದ್ರಾ ಥಾರ್ ರಾಕ್ಸ್ 5-ಡೋರ್ (Mahindra Thar Roxx 5-Door) ಎಸ್‌ಯುವಿ ಬರುವಿಕೆಗೆ ಗ್ರಾಹಕರು ತುದಿಗಾಲಿನಲ್ಲಿ ಕಾಯುತ್ತಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಆಗಸ್ಟ್ 15ರಂದು ಆದ್ದೂರಿಯಾಗಿ ಬಿಡುಗಡೆಯಾಗಲಿದೆ. ಕಂಪನಿಯು ಕೂಡ ಈ ಕಾರಿನ ಹೊಸ-ಹೊಸ ಟೀಸರ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದು, ಖರೀದಿದಾರರಿಗೆ ನೀರಿಕ್ಷೆಗಳು ಹೆಚ್ಚಾಗುತ್ತಿವೆ.

ಸದ್ಯ, ಥಾರ್ ರಾಕ್ಸ್‌ನ ನೂತನ ಟೀಸರ್ ಫೋಟೋ ಬಹಿರಂಗಗೊಂಡಿದೆ. ಇದರಲ್ಲಿ ಈ ಕಾರು ಪನೋರಮಿಕ್ ಸನ್‌ರೂಫ್ (Panoramic Sunroof) ಹೊಂದಿರುವುದು ಸ್ಪಷ್ಟವಾಗಿ ಗೋಚರವಾಗುತ್ತದೆ. ಜೊತೆಯಲ್ಲಿ ಒಳಭಾಗದಲ್ಲಿ ಬಿಳಿ (ವೈಟ್) ಬಣ್ಣದ ಸೀಟ್‌ಗಳು, ಹೊಂದಾಣಿಕೆ ಮಾಡಬಹುದಾದ ಹೆಡ್‌ರೆಸ್ಟ್‌ಗಳು, ಡ್ಯಾಶ್‌ಬೋರ್ಡ್‌ನ ಮೇಲ್ಭಾಗದಲ್ಲಿ ದೊಡ್ಡದಾದ ಫ್ಲೋಟಿಂಗ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಇರುವುದನ್ನು ನೋಡಬಹುದಾಗಿದ್ದು, ವೃತ್ತಾಕಾರದ ಎಲ್ಇಡಿ ಡಿಆರ್‌ಎಲ್‌ಗಳನ್ನು ಸಹ ಪಡೆದಿದೆ.
ನೂತನ ಥಾರ್ ರಾಕ್ಸ್ ಎಸ್‌ಯುವಿಯು ಸ್ಕಾರ್ಪಿಯೋ ಎನ್ ಹಾಗೂ ಎಕ್ಸ್‌ಯುವಿ700 ಕಾರುಗಳ ರೀತಿಯಲ್ಲಿಯೇ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ. 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಫ್ರಂಟ್ ಸೀಟ್, ವೈರ್‌ಲೆಸ್ ಚಾರ್ಜರ್, ಆಟೋ ಡಿಮ್ಮಿಂಗ್ ಐಆರ್‌ವಿಎಂ, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360-ಡಿಗ್ರಿ ಸರೌಂಡ್ ಕ್ಯಾಮೆರಾ ಒಳಗೊಂಡಿರವ ಸಾಧ್ಯತೆಯಿದೆ.

ಈ ಕಾರು 1.5-ಲೀಟರ್ ಡೀಸೆಲ್, 2.2-ಲೀಟರ್ ಡೀಸೆಲ್ ಮತ್ತು 2.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿರಲಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿರಬಹುದು ಎನ್ನಲಾಗಿದೆ. ರೂ.12.50 ಲಕ್ಷದಿಂದ ರೂ.18.50 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.
ಪ್ರಸ್ತುತ ದೇಶೀಯವಾಗಿ ಸಿಗುವ 3-ಡೋರ್ ಮಹೀಂದ್ರಾ ಥಾರ್, ರೂ.11.35 ದಿಂದ ರೂ.17.60 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 2-ಲೀಟರ್ ಟರ್ಬೊ ಪೆಟ್ರೋಲ್, 2.2-ಲೀಟರ್ ಡೀಸೆಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಪಡೆದಿದೆ. ಆಫ್-ರೋಡ್ ಎಸ್‌ಯುವಿಯಾಗಿರುವುದರಿಂದ 13 ರಿಂದ 15.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಈ 3-ಡೋರ್ ಥಾರ್‌ನಲ್ಲಿ 4 ಜನರು ಓಡಾಟ ನಡೆಸಬಹುದು. ಎವರೆಸ್ಟ್ ವೈಟ್, ಡೆಸರ್ಟ್ ಫ್ಯೂರಿ, ರೆಡ್ ರೇಜ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಲಭ್ಯವಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಮ್ಯಾನುವಲ್ ಎಸಿ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications