ಗಮನಿಸಿ.. ನೂತನ ಮಹೀಂದ್ರಾ ಥಾರ್ ರಾಕ್ಸ್ ಕುರಿತ ಪ್ರಮುಖಾಂಶಗಳು: ಬುಕ್ಕಿಂಗ್ ಯಾವಾಗ?.. ದುಡ್ಡು ಕೂಡಿಡಿ!
ಮಹೀಂದ್ರಾ (Mahindra) ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ 5-ಡೋರ್‌ನ ಮಾರುತಿ ಸುಜುಕಿ ಜಿಮ್ನಿ ಮತ್ತು ಫೋರ್ಸ್ ಗೂರ್ಖಾಗೆ ಭಾರಿ ಪೈಪೋಟಿ ನೀಡಲು ಥಾರ್ ರಾಕ್ಸ್ (Thar Roxx) ಎಸ್‌ಯುವಿಯನ್ನು 5-ಡೋರ್ ಆಯ್ಕೆಯಲ್ಲಿ ಬುಧವಾರ ಬಿಡುಗಡೆ ಮಾಡಿದೆ. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಇಲ್ಲಿ ನೂತನ ಥಾರ್ ರಾಕ್ಸ್‌ನ ಪ್ರಮುಖ ವಿಶೇಷತೆಗಳ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಬೆಲೆ & ರೂಪಾಂತರಗಳು: ಹೊಚ್ಚ ಹೊಸ ಮಹೀಂದ್ರಾ ಥಾರ್ ರಾಕ್ಸ್ 5-ಡೋರ್ (Mahindra Thar Roxx 5-Door) ಎಸ್‌ಯುವಿ ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂ.12.99 ಲಕ್ಷದಿಂದ ರೂ.18.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಅಕ್ಟೋಬರ್ 3ರಿಂದ ಈ ಕಾರಿನ ಬುಕ್ಕಿಂಗ್ ಶುರುವಾಗಲಿದ್ದು, ದಸರಾ ವೇಳೆಗೆ ವಿತರಣೆಗಳು ಆರಂಭವಾಗುವ ನಿರೀಕ್ಷೆಯಿದೆ. ಎಂಎಕ್ಸ್1, ಎಂಎಕ್ಸ್3, ಎಎಕ್ಸ್3ಎಲ್ ಹಾಗೂ ಎಂಎಕ್ಸ್5 ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ.

ವಿನ್ಯಾಸ: ನೂತನ ಥಾರ್ ರಾಕ್ಸ್ ಆಕರ್ಷಕವಾದ ವಿನ್ಯಾಸ (ಡಿಸೈನ್) ಒಳಗೊಂಡಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಸರ್ಕ್ಯೂಲರ್ ಫಾಗ್ ಲೈಟ್‌ಗಳು, ಅತ್ಯಾಧುನಿಕ ಬಂಪರ್ ಮತ್ತು ಗ್ರಿಲ್‌ನ್ನು ಹೊಂದಿದೆ. ಜೊತೆಗೆ ಡುಯಲ್-ಟೋನ್ ಅಲಾಯ್ ವೀಲ್‌ಗಳು, ಟೈಲ್‌ಗೇಟ್-ಮೌಂಟೆಡ್ ಸ್ಪೇರ್ ವೀಲ್ ಹಾಗೂ ಎಲ್ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ.
ಈ ಮಹೀಂದ್ರಾ ಥಾರ್ ರಾಕ್ಸ್ 4,428 ಎಂಎಂ ಉದ್ದ, 1,870 ಎಂಎಂ ಅಗಲ ಮತ್ತು 1,923 ಎಂಎಂ ಎತ್ತರವನ್ನು ಹೊಂದಿದೆ. ವೀಲ್‌ಬೇಸ್ 2,850 ಎಂಎಂ ಇದ್ದು, ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಇರುವ ವೀಲ್ ಟ್ರ್ಯಾಕ್ 1,580 ಎಂಎಂ ಅಳತೆಯಲ್ಲಿದೆ. 57 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಪಡೆದಿದೆ.

ಬಣ್ಣಗಳು & ಆಸನ ಆಯ್ಕೆ: ಹೊಸ ಮಹೀಂದ್ರಾ ಥಾರ್ ರಾಕ್ಸ್ 5-ಡೋರ್ ಎಸ್‌ಯುವಿಯು ಟ್ಯಾಂಗೋ ರೆಡ್, ಎವರೆಸ್ಟ್ ವೈಟ್, ಫಾರೆಸ್ಟ್ ಗ್ರೀನ್, ನೆಬುಲಾ ಬ್ಲ್ಯೂ ಸೇರಿದಂತೆ 7 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 447 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ: ನೂತನ ಥಾರ್ ರಾಕ್ಸ್ ಶಕ್ತಿಯುತ ಪವರ್‌ಟ್ರೇನ್‌ಗಳನ್ನು ಹೊಂದಿದೆ. 2.0-ಲೀಟರ್ 4-ಸಿಲಿಂಡರ್ ಟರ್ಬೊ ಪೆಟ್ರೋಲ್ ಮತ್ತು 2-ಲೀಟರ್ 4-ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಆರ್‌ಡಬ್ಲ್ಯೂಡಿ (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ.

ವೈಶಿಷ್ಟ್ಯಗಳು: ಈ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 4 ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications