Mahindra: ಹೊಸ ಮಹೀಂದ್ರಾ ಥಾರ್ ರಾಕ್ಸ್ ಮನೆಗೆ ತರಬೇಕೇ.. ಈ ವಿವರಗಳು ಖಂಡಿತ ತಿಳಿದಿರಲಿ!
ಮಹೀಂದ್ರಾ (Mahindra) ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಆಗಸ್ಟ್ 14ರ ತಡರಾತ್ರಿ ಬಹುನಿರೀಕ್ಷಿತ ಥಾರ್ ರಾಕ್ಸ್ (Thar Roxx) ಎಸ್‌ಯುವಿಯನ್ನು 5-ಡೋರ್ (ಬಾಗಿಲು) ಆಯ್ಕೆಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಿತ್ತು. ಈ ನೂತನ ಆಫ್-ರೋಡ್ ಕಾರು, ರೂ.12.99 ಲಕ್ಷದಿಂದ ರೂ.18.99 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಎಂಎಕ್ಸ್1, ಎಂಎಕ್ಸ್3, ಎಎಕ್ಸ್3ಎಲ್, ಎಂಎಕ್ಸ್5, ಎಎಕ್ಸ್5ಎಲ್ ಮತ್ತು ಎಎಕ್ಸ್7ಎಲ್ ಹೆಸರಿನ 6 ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಇಲ್ಲಿ ಯಾವ ರೂಪಾಂತರ ಏನೆಲ್ಲಾ ವೈಶಿಷ್ಟ್ಯಗಳನ್ನು (ಫೀಚರ್) ಪಡೆದಿದೆ ಎಂಬುದರ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಮಹೀಂದ್ರಾ ಥಾರ್ ರಾಕ್ಸ್ ಎಂಎಕ್ಸ್1 ರೂಪಾಂತರದ (Mahindra Thar Roxx MX1 Variant) ಬಗ್ಗೆ ಮಾತನಾಡೋಣ. ಇದು 18-ಇಂಚಿನ ಸ್ಟೀಲ್ ವೀಲ್‌ಗಳು, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್ಇಡಿ ಹೈ-ಮೌಂಟೆಡ್ ಸ್ಟಾಪ್ ಲ್ಯಾಂಪ್, ಸ್ಕಿಡ್ ಪ್ಲೇಟ್‌ಗಳು, 10.25-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಬ್ರೇಕ್-ಲಾಕಿಂಗ್ ಡಿಫರೆನ್ಷಿಯಲ್, 6-ಏರ್‌ಬ್ಯಾಗ್ ಹಾಗೂ ಸೀಟ್ ಬೆಲ್ಟ್ ರಿಮೈಂಡರ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಎಂಎಕ್ಸ್3 ರೂಪಾಂತರ (MX3 Variant) ಕೂಡ ಸಾಕಷ್ಟು ಅತ್ಯಾಧುನಿಕವಾಗಿದೆ. ಆಟೋ ಡಿಮ್ಮಿಂಗ್ ಐಆರ್‌ವಿಎಂ, ಹೆಚ್ಡಿ ಡಿಸ್ಪ್ಲೇಯೊಂದಿರುವ ಇನ್ಫೋಟೈನ್ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ರೇರ್ (ಹಿಂಬದಿ) ಡಿಸ್ಕ್ ಬ್ರೇಕ್‌ಗಳು, ರೇರ್ ಕಪ್ ಹೋಲ್ಡರ್ & ಆರ್ಮ್‌ರೆಸ್ಟ್, ರೇರ್ ವೈಪರ್ & ವಾಷರ್, ರೇರ್ ಡಿಫಾಗರ್, ಯುಎಸ್‌ಬಿ ಟೈಪ್-ಸಿ/ಟೈಪ್-ಎ ಚಾರ್ಜಿಂಗ್ ಪೋರ್ಟ್‌ಗಳು, ಕ್ರೂಸ್ ಕಂಟ್ರೋಲ್ ಮತ್ತು ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.
ಎಎಕ್ಸ್3ಎಲ್ ರೂಪಾಂತರವು (AX3L Variant) ವಿವಿಧ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್‌ಗಳು, ರೇರ್ ಸೆನ್ಸಿಂಗ್ ವೈಪರ್‌ಗಳು, ಟೈಪ್-ಎ ಚಾರ್ಜಿಂಗ್ ಪೋರ್ಟ್‌ಗಳು, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಹಾಗೂ ಸ್ಮಾರ್ಟ್ ಪೈಲಟ್ ಅಸಿಸ್ಟ್ ಅನ್ನು ತನ್ನದಾಗಿಸಿಕೊಂಡಿದೆ.

ಎಂಎಕ್ಸ್5 ರೂಪಾಂತರವು (MX5 Variant) ಸಹ ಗ್ರಾಹಕರನ್ನು ಸೆಳೆಯುವ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ನವೀನವಾಗಿರುವ ಸ್ಟೀರಿಂಗ್ ವೀಲ್, 18-ಇಂಚಿನ ಅಲಾಯ್ ವೀಲ್‌ಗಳು, ಫೆಂಡರ್‌ಗಳ ಮೇಲೆ ಎಲ್ಇಡಿ ಇಂಡಿಕೇಟರ್, ಎಲ್ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಸಿಂಗಲ್-ಪೇನ್ ಸನ್‌ರೂಫ್ ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಎಎಕ್ಸ್5ಎಲ್ ರೂಪಾಂತರವು (AX5L Variant) ಕ್ರಾಲ್ ಸ್ಮಾರ್ಟ್ ಫಂಕ್ಷನ್, ಇಂಟೆಲಿಟರ್ನ್ ಫಂಕ್ಷನ್ ಹಾಗೂ ಎಲೆಕ್ಟ್ರಿಕ್ ಲಾಕಿಂಗ್ ಡಿಫರೆನ್ಷಿಯಲ್ ಅನ್ನು ಪಡೆದಿದೆ. ಎಎಕ್ಸ್7ಎಲ್ (AX7L variant) ರೂಪಾಂತರ ಕೂಡ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. 19-ಇಂಚಿನ ಅಲಾಯ್ ವೀಲ್‌ಗಳು, ಪನೊರೊಮಿಕ್ ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 6-ಸ್ಪೀಕರ್ ಆಡಿಯೋ ಸಿಸ್ಟಮ್, ಬ್ಲೈಂಡ್ ಸ್ಪಾಟ್ ಮಾನಿಟರ್ ಹಾಗೂ ಸರೌಂಡ್ ವ್ಯೂ ಕ್ಯಾಮೆರಾವನ್ನು ಒಳಗೊಂಡಿದೆ.

ಈ ಮಹೀಂದ್ರಾ ಥಾರ್ ರಾಕ್ಸ್ ಎಸ್‌ಯುವಿ ಟ್ಯಾಂಗೋ ರೆಡ್, ಎವರೆಸ್ಟ್ ವೈಟ್, ಫಾರೆಸ್ಟ್ ಗ್ರೀನ್, ನೆಬುಲಾ ಬ್ಲ್ಯೂ ಸೇರಿದಂತೆ 7 ಬಣ್ಣಗಳೊಂದಿಗೂ ಸಿಗುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 2.0-ಲೀಟರ್ 4-ಸಿಲಿಂಡರ್ ಟರ್ಬೊ ಪೆಟ್ರೋಲ್ ಮತ್ತು 2-ಲೀಟರ್ 4-ಸಿಲಿಂಡರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications