Mahindra Thar Roxx: ಮಹೀಂದ್ರಾ ಥಾರ್ ರಾಕ್ಸ್ ರಿವ್ಯೂ ವಿಡಿಯೋ.. ಹೇಗಿದೆ.. ನೀವೇ ನೋಡಿ
ದೇಶದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಮಹೀಂದ್ರಾ (Mahindra) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ 5-ಡೋರ್‌ನ ಮಾರುತಿ ಸುಜುಕಿ ಜಿಮ್ನಿ ಹಾಗೂ ಫೋರ್ಸ್ ಗೂರ್ಖಾಗೆ ಪ್ರಬಲವಾದ ಸ್ಪರ್ಧೆಯೊಡ್ಡಲು ಥಾರ್ ರಾಕ್ಸ್ (Thar Roxx) ಎಸ್‌ಯುವಿಯನ್ನು 5-ಡೋರ್ ಆಯ್ಕೆಯಲ್ಲಿ ಬುಧವಾರ ಮಾರಾಟಕ್ಕೆ ತಂದಿದೆ. ನಮಗೆ ಕೇರಳದ ಕೊಚ್ಚಿಯಲ್ಲಿ ಈ ಹೊಚ್ಚ ಹೊಸ ಎಸ್‌ಯುವಿಯನ್ನು ಟೆಸ್ಟ್ ಡ್ರೈವ್ ಮಾಡಲು ಅವಕಾಶ ದೊರೆಯಿತು. ನೂತನ ಥಾರ್ ರಾಕ್ಸ್ ಕುರಿತಂತೆ ವಿಡಿಯೋ ರಿವ್ಯೂ (ವಿಮರ್ಶೆ) ಇಲ್ಲಿದೆ. ನೀವೇ ನೋಡಿ..
ಮಹೀಂದ್ರಾ ಥಾರ್ ರಾಕ್ಸ್ 5-ಡೋರ್ ರೂ.12.99 ಲಕ್ಷದಿಂದ ರೂ.18.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಅಕ್ಟೋಬರ್ 3ರಿಂದ ಈ ಕಾರಿನ ಬುಕ್ಕಿಂಗ್ ಶುರುವಾಗಲಿದ್ದು, ದಸರಾ ವೇಳೆಗೆ ವಿತರಣೆಗಳು ಆರಂಭವಾಗುವ ಸಾಧ್ಯತೆಯಿದೆ. ಈ ಕಾರು ಎಂಎಕ್ಸ್1, ಎಂಎಕ್ಸ್3, ಎಎಕ್ಸ್3ಎಲ್ ಹಾಗೂ ಎಂಎಕ್ಸ್5 ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಜೊತೆಗೆ ಟ್ಯಾಂಗೋ ರೆಡ್, ಎವರೆಸ್ಟ್ ವೈಟ್, ಫಾರೆಸ್ಟ್ ಗ್ರೀನ್, ನೆಬುಲಾ ಬ್ಲ್ಯೂ ಸೇರಿದಂತೆ 7 ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಥಾರ್ ರಾಕ್ಸ್ 2.0-ಲೀಟರ್ 4-ಸಿಲಿಂಡರ್ ಟರ್ಬೊ ಪೆಟ್ರೋಲ್ ಮತ್ತು 2-ಲೀಟರ್ 4-ಸಿಲಿಂಡರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ತಕ್ಕಂತೆ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಈ ಕಾರಿನಲ್ಲಿ 5 ಮಂದಿ ಪ್ರಯಾಣಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 447 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ನೂತಾ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್- ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ, ಆಪಲ್ ಕಾರ್ ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್, ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ರೇರ್ ಎಸಿ ವೆಂಟ್‌ಗಳನ್ನು ಹೊಂದಿದೆ.

ಮಹೀಂದ್ರಾ ಥಾರ್ ರಾಕ್ಸ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. 6 ಏರ್‌ಬ್ಯಾಗ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಸೀಟ್ ಬೆಲ್ಟ್ ರಿಮೈಂಡರ್‌ಗಳು, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್ ಹಾಗೂ 4 ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications