ಬೆಚ್ಚಿಬಿದ್ದ ಆನಂದ್ ಮಹೀಂದ್ರಾ ಕಂಪನಿ: 60 ನಿಮಿಷದಲ್ಲಿಯೇ ರೆಕಾರ್ಡ್ ಸಂಖ್ಯೆಯಲ್ಲಿ ಥಾರ್ ರಾಕ್ಸ್‌ ಬುಕ್ಕಿಂಗ್‌!

ಪ್ರಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಒಡೆತನದ ಮಹೀಂದ್ರಾ (Mahindra), ಸುರಕ್ಷಿತ ವಾಹನ ತಯಾರಿಕೆಗೆ ಹೆಸರುವಾಸಿಯಾಗಿದೆ. ಕಳೆದ ಆಗಸ್ಟ್‌ನಲ್ಲಿ ಥಾರ್ ರಾಕ್ಸ್‌ 5-ಡೋರ್ (Thar Roxx 5-Door) ಆಫ್-ರೋಡ್ ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿತ್ತು. 5-ಡೋರ್‌ನ ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ಹಾಗೂ ಫೋರ್ಸ್ ಗೂರ್ಖಾ (Force Gurkha) ಮಾದರಿಗಳಿಗೆ (ಮಾಡೆಲ್) ತೀವ್ರ ಸ್ಪರ್ಧೆಯೊಡ್ಡುವ ಈ ಎಸ್‌ಯುವಿಯನ್ನು ತೆಗೆದುಕೊಳ್ಳಲು ಖರೀದಿದಾರರು ಕೂಡ ತುದಿಗಾಲಲ್ಲಿ ನಿಂತಿದ್ದಾರೆ.

ದೇಶಾದ್ಯಂತ ಮಹೀಂದ್ರಾ ಕಂಪನಿಯು ಇಂದು ಬೆಳಗ್ಗೆ 11 ಗಂಟೆಗೆ ಥಾರ್ ರಾಕ್ಸ್‌ಗಾಗಿ ಬುಕ್ಕಿಂಗ್ ಪಡೆಯುವುದನ್ನು ಶುರು ಮಾಡಿತ್ತು. ಗ್ರಾಹಕರಿಂದಲ್ಲೂ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇವಲ 60 ನಿಮಿಷಗಳಲ್ಲಿ 1,76,218 ಥಾರ್ ರಾಕ್ಸ್‌ ಎಸ್‌ಯುವಿಗಳನ್ನು ಆರ್ಡರ್ ಮಾಡಿದ್ದಾರೆ. ಈ ಮೂಲಕ ಆಟೋಮೊಬೈಲ್ ಮಾರುಕಟ್ಟೆ ಇತಿಹಾಸದಲ್ಲಿ ಮಹೀಂದ್ರಾ ಹೊಸದೊಂದು ದಾಖಲೆ ಬರೆದಿದೆ.

Mahindra Thar Roxx Get 1 76 218 Booking Just 60 Minutes Details

ಕೆಲವೇ ದಿನಗಳ ಹಿಂದೆ, ನೂತನ ಮಹೀಂದ್ರಾ ಥಾರ್ ರಾಕ್ಸ್ ಎಸ್‌ಯುವಿಯ ಮೊದಲ ಯುನಿಟ್‌ ಸರಿ ಸುಮಾರು ರೂ.1.31 ಕೋಟಿಗೆ ಹರಾಜಾಗಿತ್ತು. ಈಗಾಗಲೇ, ಥಾರ್ ರಾಕ್ಸ್‌ನ ಟೆಸ್ಟ್ ಡ್ರೈವ್ ಕೂಡ ಪ್ರಾರಂಭವಾಗಿದ್ದು, ಆಸಕ್ತ ಖರೀದಿದಾರರು ಸಮೀಪದ ಶೋರೂಂಗೆ ಭೇಟಿ ನೀಡಿ, ಈ ಎಸ್‌ಯುವಿಯನ್ನು ಚಾಲನೆ ಮಾಡಿ ಪರೀಕ್ಷಿಸಬಹುದು. ಶೀಘ್ರದಲ್ಲಿಯೇ ವಿತರಣೆಗಳು ಸಹ ಆರಂಭವಾಗಲಿದೆ.

ಬೆಂಗಳೂರಿನಲ್ಲಿ ಹೊಸ ಮಹೀಂದ್ರಾ ಥಾರ್ ರಾಕ್ಸ್‌ನ ಆರಂಭಿಕ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್) ರೂ.12.99 ಲಕ್ಷ ಬೆಲೆಯನ್ನು ಹೊಂದಿದೆ. ಗರಿಷ್ಠ ಶ್ರೇಣಿ ರೂಪಾಂತರ (ಟಾಪ್ ಎಂಡ್ ವೇರಿಯೆಂಟ್) ರೂ.22.49 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಟ್ಯಾಂಗೋ ರೆಡ್ ಮತ್ತು ಎವರೆಸ್ಟ್ ವೈಟ್ ಒಳಗೊಂಡಂತೆ ಅನೇಕ ಅತ್ಯಾಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ.

Mahindra Thar Roxx Get 1 76 218 Booking Just 60 Minutes Details

ಈ ಥಾರ್ ರಾಕ್ಸ್ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸ (ಡಿಸೈನ್) ಒಳಗೊಂಡಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, 'ಸಿ' ಆಕಾರಕ್ಕೆ ಹೋಲಿಕೆಯಾಗುವ ಎಲ್‌ಇಡಿ ಡಿಆರ್‌ಎಲ್‌ಗಳು, ಸರ್ಕ್ಯೂಲರ್ ಫಾಗ್ ಲೈಟ್‌ಗಳು, ಅಲಾಯ್ ವೀಲ್‌ಗಳು ಹಾಗೂ ಎಲ್ಇಡಿ ಟೈಲ್‌ಲೈಟ್‌ಗಳನ್ನು ಹೊಂದಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಸಂಚರಿಸಬಹುದು. ಜೊತೆಗೆ 447 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ ಮಹೀಂದ್ರಾ ಥಾರ್ ರಾಕ್ಸ್ (Mahindra Thar Roxx) ಎಸ್‌ಯುವಿ, 2.0-ಲೀಟರ್ 4-ಸಿಲಿಂಡರ್ ಎಂಸ್ಟಾಲಿಯನ್ ಟರ್ಬೊ ಪೆಟ್ರೋಲ್ ಹಾಗೂ 2-ಲೀಟರ್ 4-ಸಿಲಿಂಡರ್ ಎಂಹಾಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದ್ದು, 12.4 ರಿಂದ 15.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ ಎಂದು ಹೇಳಲಾಗಿದೆ.

Mahindra Thar Roxx Get 1 76 218 Booking Just 60 Minutes Details

ಈ ಥಾರ್ ರಾಕ್ಸ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ಸುರಕ್ಷತೆಗಾಗಿ 6-ಏರ್‌ಬ್ಯಾಗ್‌, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 4 ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, October 3, 2024, 16:22 [IST]
English summary
Mahindra thar roxx get 176218 booking in just 60 minutes details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+