Mahindra: ಆನಂದ್ ಮಹೀಂದ್ರಾ ಕಂಪನಿ ತಾಕತ್ತು.. ಕಲ್ಲು ಬಂಡೆಯಂತಿರುವ 'ಥಾರ್ ರಾಕ್ಸ್'ಗೆ 5-ಸ್ಟಾರ್ ಸೇಫ್ಟಿ ರೇಟಿಂಗ್!

ಮಹೀಂದ್ರಾ & ಮಹೀಂದ್ರಾ (Mahindra & Mahindra) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿದೆ. ಎದುರಾಳಿಗಳಿಗೆ ಪ್ರಬಲವಾದ ಸ್ಪರ್ಧೆಯೊಡ್ಡಲು ಆಗಸ್ಟ್‌ನಲ್ಲಿ ಕಂಪನಿಯು ಥಾರ್ ರಾಕ್ಸ್‌ 5-ಡೋರ್ (Thar Roxx 5-Door) ಆಫ್-ರೋಡ್ ಎಸ್‌ಯುವಿಯನ್ನು ಮಾರಾಟಕ್ಕೆ ತಂದಿತ್ತು. ಸದ್ಯ, ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP) ಈ 'ಥಾರ್ ರಾಕ್ಸ್'ನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮಹೀಂದ್ರಾ ಥಾರ್ ರಾಕ್ಸ್ (Mahindra Thar Roxx) ಎಸ್‌ಯುವಿ, ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 31.09 ಅಂಕಗಳು ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 45 ಅಂಕಗಳನ್ನು ಪಡೆದಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ.

Mahindra Thar Roxx Get 5 Star Safety Rating In Bharat Ncap Test Details

ಭಾರತ್ ಎನ್‌ಸಿಎಪಿ ಮಹೀಂದ್ರಾ ಥಾರ್ ರಾಕ್ಸ್ ಎಸ್‌ಯುವಿಯ ಎಎಕ್ಸ್5ಎಲ್ (AX5L) ಹಾಗೂ ಎಂಎಕ್ಸ್3 (MX3) ರೂಪಾಂತರಗಳನ್ನು (ವೇರಿಯೆಂಟ್) ತಪಾಸಣೆಗೆ ಒಳಪಡಿಸಿತ್ತು. ಎಲ್ಲ ವಿಧದ ಪರೀಕ್ಷೆಗಳಲ್ಲಿಯೂ 'ಥಾರ್ ರಾಕ್ಸ್' ಗಟ್ಟಿಮುಟ್ಟಾದ ಕಾರೆಂದು ಸಾಬೀತಾಗಿದೆ. ಇವೆರಡು ರೂಪಾಂತರಗಳನ್ನು ತಪಾಸಣೆಗೆ ಮಾಡಲಾದರೂ ಈ ಪರೀಕ್ಷೆ ಫಲಿತಾಂಶಗಳು ಥಾರ್ ರಾಕ್ಸ್ ಎಸ್‌ಯುವಿಯ ಎಲ್ಲ ರೂಪಾಂತರಗಳಿಗೂ ಅನ್ವಯಿಸುತ್ತದೆ.

ನೂತನ ಮಹೀಂದ್ರಾ ಥಾರ್ ರಾಕ್ಸ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಈ ಕಾರಿನ ಪ್ರತಿಯೊಂದು ರೂಪಾಂತರಗಳು (ವೇರಿಯೆಂಟ್) 6 ಏರ್‌ಬ್ಯಾಗ್‌ಗಳು, 3-ಪಾಯಿಂಟ್ ಸೀಟ್‌ ಬೆಲ್ಟ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಸೀಟ್‌ ಬೆಲ್ಟ್ ರಿಮೈಂಡರ್‌ಗಳನ್ನು ಒಳಗೊಂಡಿವೆ.

Mahindra Thar Roxx Get 5 Star Safety Rating In Bharat Ncap Test Details

ಇದರೊಟ್ಟಿಗೆ ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 4 ಡಿಸ್ಕ್ ಬ್ರೇಕ್‌ಗಳನ್ನು ಹೊಂದಿವೆ. ಜೊತೆಗೆ ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ವೈಶಿಷ್ಟ್ಯಗಳಾದ ಆಟೋಮೆಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಡಿಪಾರ್ಚರ್ ವಾರ್ನಿಂಗ್, ಲೇನ್ ಕೀಪ್ ಅಸಿಸ್ಟ್, ಬ್ಲೈಂಡ್ ವ್ಯೂ ಮಾನಿಟರ್‌ ಮತ್ತು 360-ಡಿಗ್ರಿ ಸರೌಂಡ್ ವ್ಯೂ ಸಿಸ್ಟಮ್‌ಗಳನ್ನು ಪಡೆದಿವೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಹೀಂದ್ರಾ ಥಾರ್ ರಾಕ್ಸ್ ಎಸ್‌ಯುವಿ, ರೂ.12.99 ಲಕ್ಷದಿಂದ ರೂ.22.49 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 2.0-ಲೀಟರ್ 4-ಸಿಲಿಂಡರ್ ಟರ್ಬೊ ಪೆಟ್ರೋಲ್ ಮತ್ತು 2-ಲೀಟರ್ 4-ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

Mahindra Thar Roxx Get 5 Star Safety Rating In Bharat Ncap Test Details

ಈ ಥಾರ್ ರಾಕ್ಸ್ ಎಸ್‌ಯುವಿಯಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಎವರೆಸ್ಟ್ ವೈಟ್, ಫಾರೆಸ್ಟ್ ಗ್ರೀನ್ & ನೆಬುಲಾ ಬ್ಲ್ಯೂ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಇನ್ನು, ಮಹೀಂದ್ರಾ ಥಾರ್ ರಾಕ್ಸ್ ಎಸ್‌ಯುವಿ 'ಭಾರತ್ ಎನ್‌ಸಿಎಪಿ' ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ ಪಡೆದುಕೊಂಡಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಮುಂಬರುವ ದಿನಗಳಲ್ಲಿ ಈ ಕಾರಿನ ಮಾರಾಟ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಥಾರ್ ರಾಕ್ಸ್ ಮಾತ್ರವಲ್ಲದೆ, ಎಕ್ಸ್‌ಯುವಿ400 ಇವಿ ಹಾಗೂ ಎಕ್ಸ್‌ಯುವಿ 3ಎಕ್ಸ್ಒ ಕಾರುಗಳು ಕೂಡ 5-ಸ್ಟಾರ್ ರೇಟಿಂಗ್ ಗಳಿಸಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, November 14, 2024, 13:20 [IST]
English summary
Mahindra thar roxx get 5 star safety rating in bharat ncap test details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+