Mahindra: ನಾಳೆ ಮಹೀಂದ್ರಾ ಥಾರ್ ರಾಕ್ಸ್ ಅದ್ದೂರಿಯಾಗಿ ಬಿಡುಗಡೆ.. ಬೆಲೆ ಎಷ್ಟಿರಲಿದೆ.. ವಿಶೇಷತೆಗಳೇನು?
ಮಹೀಂದ್ರಾ (Mahindra) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ವಿಶೇಷವಾಗಿ ಪ್ರಖ್ಯಾತ ಆಫ್-ರೋಡ್ ಎಸ್‌ಯುವಿ 3-ಡೋರ್ 'ಥಾರ್'ಗೆ ದೊಡ್ಡಮಟ್ಟದಲ್ಲಿ ಬೇಡಿಕೆ ಇದ್ದು, ಉತ್ತಮವಾಗಿ ಮಾರಾಟವಾಗುತ್ತಿದೆ. 5-ಡೋರ್‌ನ ಮಾರುತಿ ಸುಜುಕಿ ಜಿಮ್ನಿ ಮತ್ತು ಫೋರ್ಸ್ ಗೂರ್ಖಾಗೆ ತೀವ್ರ ಸ್ಪರ್ಧೆಯೊಡ್ಡಲು, ನಾಳೆ (ಆಗಸ್ಟ್ 15) ಥಾರ್ ರಾಕ್ಸ್ (Thar Roxx) ಎಸ್‌ಯುವಿಯನ್ನು 5-ಡೋರ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಲಿದೆ. ಬನ್ನಿ.. ಈ ಕಾರಿನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ವಿನ್ಯಾಸ (Design): ನೂತನ ಮಹೀಂದ್ರಾ ಥಾರ್ ರಾಕ್ಸ್ 5-ಡೋರ್ (ಬಾಗಿಲು) ಎಸ್‌ಯುವಿ ವಿನ್ಯಾಸವು ಹೇಗಿರಲಿದೆ ಎಂಬ ಬಗ್ಗೆ ಹಲವು ಟೀಸರ್‌ಗಳಿಂದ ಬಹುತೇಕ ವಿವರಗಳು ಬಹಿರಂಗಗೊಂಡಿವೆ. ಈ ಥಾರ್, 6-ಸ್ಲ್ಯಾಟ್ ಗ್ರಿಲ್, ಹೊಸದಾದ ಸರ್ಕ್ಯೂಲರ್ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಅತ್ಯಾಧುನಿಕ ಬಂಪರ್ ಹಾಗೂ ನವೀನ ಶೈಲಿಯ ಡೈಮಂಡ್-ಕಟ್ ಅಲಾಯ್ ವೀಲ್‌ಗಳನ್ನು ಒಳಗೊಂಡಿರಲಿದೆ. ಒಳಭಾಗದ ವಿನ್ಯಾಸ ಕೂಡ ವಿನೂತನವಾಗಿರಲಿದೆ.

ಬಣ್ಣಗಳು & ಆಸನ ಆಯ್ಕೆ (Color & Seat Capacity): ಹೊಚ್ಚ ಹೊಸ ಮಹೀಂದ್ರಾ ಥಾರ್ ರಾಕ್ಸ್ ಕಪ್ಪು (ಬ್ಲ್ಯಾಕ್) ಹಾಗೂ ಬಿಳಿ (ವೈಟ್) ಬಣ್ಣದ ಆಯ್ಕೆಯಲ್ಲಿ ಮಾರುಕಟ್ಟೆಗೆ ಬರುವುದು ಖಚಿತವಾಗಿದೆ. ಆದಾಗ್ಯೂ ವಿವಿಧ ಬಣ್ಣಗಳೊಂದಿಗೂ ಪರಿಚಯಿಸಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ ಈ ಆಫ್-ರೋಡ್ ಎಸ್‌ಯುವಿಯಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.
ಕಾರ್ಯಕ್ಷಮತೆ (Performance): ಈ ಥಾರ್ ರಾಕ್ಸ್‌ನ ಎಂಜಿನ್ ಮತ್ತು ಗೇರ್‌ಬಾಕ್ಸ್ ಕುರಿತಂತೆ ಯಾವುದೇ ಅಧಿಕೃತ ಮಾಹಿತಿ ಬಹಿರಂಗಗೊಂಡಿಲ್ಲ. ಮೂಲಗಳ ಪ್ರಕಾರ, ಥಾರ್ 3-ಡೋರ್‌ನಂತೆ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ನ್ನು ಪಡೆದುಕೊಂಡಿರಲಿದೆ. ನೂತನ ಎಸ್‌ಯುವಿ 1.5-ಲೀಟರ್ ಡೀಸೆಲ್, 2.2-ಲೀಟರ್ ಡೀಸೆಲ್ ಹಾಗೂ 2.0-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿರಲಿದ್ದು, 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಬಹುದು ಎನ್ನಲಾಗಿದೆ.

ವೈಶಿಷ್ಟ್ಯಗಳು (Features): ಹೊಸ ಮಹೀಂದ್ರಾ ಥಾರ್ ರಾಕ್ಸ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿರಲಿದೆ. ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ 10.25-ಇಂಚಿನ ಡುಯಲ್ ಡಿಜಿಟಲ್ ಡಿಸ್‌ಪ್ಲೇಯನ್ನು ಪಡೆದಿರಲಿದೆ ಎಂಬುದು ಬಹುತೇಕ ದೃಢಪಟ್ಟಿದೆ. ಇದರೊಟ್ಟಿಗೆ ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ವೈರ್‌ಲೆಸ್ ಫೋನ್ ಚಾರ್ಜಿಂಗ್ ಅನ್ನು ಪಡೆದಿರುವ ನಿರೀಕ್ಷೆಯೂ ಇದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features): ನೂತನ ಥಾರ್ ರಾಕ್ಸ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲಿದೆ ಎಂದು ಹೇಳಲಾಗಿದೆ. ಈ ಕಾರು 6 ಏರ್‌ಬ್ಯಾಗ್, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360 - ಡಿಗ್ರಿ ಕ್ಯಾಮೆರಾ ಹೊಂದಿರುವ ಸಾಧ್ಯತೆಯಿದೆ.
ಬೆಲೆ (Price): ಮಹೀಂದ್ರಾ ಥಾರ್ ರಾಕ್ಸ್ ಆಫ್-ರೋಡ್ ಎಸ್‌ಯುವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ ಎಂದು ಅಂದಾಜಿಸಲಾಗಿದೆ. ಇದು ರೂ.12.50 ಲಕ್ಷದಿಂದ ರೂ.19 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರಲಿದೆ ಎನ್ನಲಾಗಿದೆ. ಮುಂದಿನ ಕೆಲವೇ ಗಂಟೆಗಳಲ್ಲಿ ಈ ಕಾರು ಬಿಡುಗಡೆಯಾಗಲಿದ್ದು, ಖರೀದಿದಾರರ ಎಲ್ಲ ಕುತೂಹಲಗಳಿಗೂ ತೆರೆಬೀಳಲಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications