ಮಾರುಕಟ್ಟೆ ಶೇಕ್: ಮಹೀಂದ್ರಾ ಥಾರ್ ಮಾರಾಟದಲ್ಲಿ ಹೊಸ ದಾಖಲೆ... ರಾಕ್ಸ್ ಬಂದ ನಂತರ ಬಿರುಗಾಳಿ

ಮಹೀಂದ್ರಾ ಥಾರ್ ಯಾವಾಗಲೂ ಹಾರ್ಡ್‌ಕೋರ್ ಆಫ್-ರೋಡ್ ಎಂದೇ ಜನಪ್ರಿಯತೆಗಳಿಸಿದೆ. ಆಫ್-ರೋಡ್ ವಾಹನ ಎಂದಾಗ ಎಲ್ಲರ ಮನಸ್ಸಿಗೆ ಬರುವುದು ಮಹೀಂದ್ರಾ ಥಾರ್ (Mahindra Thar) ಆಗಿದೆ. ಭಾರತದಲ್ಲಿ ಬಹಳ ವರ್ಷಗಳಿಂದ ಮಾರಾಟವಾಗುತ್ತಿರುವ ಜನಪ್ರಿಯ ಆಫ್ ರೋಡರ್ ಎಸ್‍ಯುವಿ. ಭಾರತದಲ್ಲಿ ಥಾರ್ ಎಸ್‍ಯುವಿಗೆ ದೊಡ್ಡ ಅಭಿಮಾನಿ ಬಳಗವಿದೆ. ಈ ಒರಟಾದ ಲೈಫ್ ಸ್ಟೈಲ್ ಎಸ್‍ಯುವಿಯು ಫ್ಯಾಮಿಲಿ ಎಸ್‌ಯುವಿಯಾಗಿರಲಿಲ್ಲ. ಆದರೆ ಹೊಸ ಮಹೀಂದ್ರಾ ಥಾರ್ 5-ಡೊರಿನ ಆವೃತ್ತಿ ಥಾರ್ ರಾಕ್ಸ್ ಫ್ಯಾಮಿಲಿ ವಾಹನವಾಗಿಯೂ ಖ್ಯಾತಿ ಗಳಿಸಿದೆ.

ಮಹೀಂದ್ರಾ ಥಾರ್ ಇದೀಗ ದೊಡ್ಡ ಮಾರಾಟದ ಮೈಲಿಗಲ್ಲನ್ನು ಸಾಧಿಸಿದೆ. ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (SIAM) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಮಹೀಂದ್ರ ಥಾರ್ ಭಾರತೀಯ ಮಾರುಕಟ್ಟೆಯಲ್ಲಿ 2,00,000-ಯೂನಿಟ್ ಮಾರಾಟದ ಮೈಲಿಗಲ್ಲನ್ನು ಸಾಧಿಸಿದೆ. 5-ಡೋರ್ ರಾಕ್ಸ್ ಮತ್ತು 3-ಡೋರ್ ಮಾದರಿಗಳು ಒಟ್ಟು 2,07,110 ಯುನಿಟ್‌ಗಳು ಮಾರಾಟವಾಗಿವೆ.

Mahindra Thar

ಈ ಪ್ರಸ್ತುತ ಜನರೇಷನ್ ಮಾದರಿಯು ಮಾರುಕಟ್ಟೆ ಪ್ರವೇಶಿಸಿದ 4 ವರ್ಷಗಳಲ್ಲಿ ಈ ಸಾಧನೆಯನ್ನು ಮಾಡಿದೆ. ಈ ಥಾರ್ ರಾಕ್ಸ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭವಾದಗ 60 ನಿಮಿಷಗಳಲ್ಲಿ 1.76 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಪಡೆದುಕೊಂಡು ಹೊಸ ದಾಖಲೆ ಬರೆದಿದೆ. ಇನ್ನು ಮಹೀಂದ್ರಾ ಕಂಪನಿಯು ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಮಹೀಂದ್ರಾ ಥಾರ್ ರೋಕ್ಸ್ ಎಸ್‍ಯುವಿ ಕಾಯುವ ಅವಧಿಯನ್ನು ಕಡಿಮೆ ಮಾಡುತ್ತದೆ.

ಈ ಮಹೀಂದ್ರಾ ಥಾರ್ ರಾಕ್ಸ್‌ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸ (ಡಿಸೈನ್) ಹೊಂದಿದೆ. ಉತ್ತಮವಾಗಿರುವ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಸರ್ಕ್ಯೂಲರ್ ಫಾಗ್ ಲೈಟ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಈ ಹೊಸ ಥಾರ್ ರೋಕ್ಸ್ 4X4 ಪ್ರತ್ಯೇಕವಾಗಿ 2.2-ಲೀಟರ್ ಡೀಸೆಲ್ ಎಂಜಿನ್‌ನಿಂದ ಚಾಲಿತವಾಗಿದ್ದು, ಈ ಎಂಜಿನ್ 175 bhp ಪವರ್ ಮತ್ತು 370 Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಅನ್ನು ಹೊಂದಿದೆ.

Mahindra Thar

ಇನ್ನು ಡೀಸೆಲ್ 4X2 ರೂಪಾಂತರಗಳು, 2.2-ಲೀಟರ್ TGDi ಪೆಟ್ರೋಲ್ ರೂಪಾಂತರವು 152hp ಮತ್ತು 330 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಆಟೋಮ್ಯಾಟಿಕ್ ರೂಪಾಂತರವು 177 hp ಮತ್ತು 380 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಮತ್ತೊಂದೆಡೆ, ಮಹೀಂದ್ರಾ ಥಾರ್ ರೋಕ್ಸ್‌ನಲ್ಲಿರುವ ಬೇಸ್ 2.2-ಲೀಟರ್ ಡೀಸೆಲ್ ಎಂಜಿನ್ 162 hp ಮತ್ತು 330 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಆದರೆ 4X4 ಪವರ್‌ಟ್ರೇನ್‌ಗಳೊಂದಿಗೆ ಟಾಪ್ ಸ್ಪೆಕ್ ಮಾದರಿಗಳು 175hp ಮತ್ತು 370Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಡೀಸೆಲ್ ಪವರ್‌ಟ್ರೇನ್‌ಗಳು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಆಯ್ಕೆಯೊಂದಿಗೆ ಹೊಂದಿದೆ. ಮೈಲೇಜ್ ಅಂಕಿಅಂಶಗಳ ಬಗ್ಗೆ ಹೇಳುವುದಾದರೆ, ಪೆಟ್ರೋಲ್ ಎಂಜಿನ್ 12.40 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

Mahindra Thar

ಇನ್ನು 3-ಡೋರ್ ಥಾರ್ ಎಸ್‍ಯುವಿ ಬಗ್ಗೆ ಹೇಳುವುದಾದರೆ, ಈ ಎಸ್‍ಯುವಿಯ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿದೆ. ಇದರೊಂದಿಗೆ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಈ ಥಾರ್ ಎಸ್‍ಯುವಿ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಅನ್ನು ಹೊಂದಿದೆ.

ಇನ್ನು ಈ ಥಾರ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ ಹೊಂದಿದೆ. ಇದರೊಂದಿಗೆ ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್ ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, November 19, 2024, 16:39 [IST]
English summary
Mahindra thar surpasses 2 lakh unit sales milestone details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+