Mahindra: ಒಂದೇ ದಿನ 1,500 ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಕಾರುಗಳು ವಿತರಣೆ.. ರೂ.7.49 ಲಕ್ಷ ಬೆಲೆ

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಮಹೀಂದ್ರಾ (Mahindra) ಖ್ಯಾತಿಗಳಿಸಿದೆ. ಏಪ್ರಿಲ್ ಕೊನೆಯಲ್ಲಿ ನೂತನ ಎಕ್ಸ್‌ಯುವಿ 3ಎಕ್ಸ್ಒ (XUV 3XO) ಎಸ್‌ಯುವಿಯನ್ನು ದೇಶೀಯ ಮಾರುಕಟ್ಟೆಯಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಮೇ.26 ರಿಂದ ಈ ಕಾರಿನ ವಿತರಣೆಗಳು ಕೂಡ ಶುರುವಾಗಿವೆ.

ಸದ್ಯ ಮಹೀಂದ್ರಾ ಕಂಪನಿಯು ಒಂದೇ ದಿನ 1,500 ಯುನಿಟ್ 'ಎಕ್ಸ್‌ಯುವಿ 3ಎಕ್ಸ್ಒ' ಎಸ್‌ಯುವಿಗಳನ್ನು ಗ್ರಾಹಕರಿಗೆ ಡೆಲಿವರಿ ಮಾಡುವ ಮೂಲಕ ಐತಿಹಾಸಿಕ ದಾಖಲೆಯನ್ನು ನಿರ್ಮಾಣ ಮಾಡಿದೆ. ಇದಕ್ಕೂ ಮುನ್ನ ಮೇ.15 ರಂದು ಬುಕ್ಕಿಂಗ್ ಆರಂಭಿಸಿದ 1 ತಾಸಿನೊಳಗೆ ಈ ಕಾರನ್ನು ಬರೊಬ್ಬರಿ 50,000 ಖರೀದಿದಾರರು ಆರ್ಡರ್ ಮಾಡಿದ್ದರು.

Mahindra XUV 3XO 1500 Units Cars Delivered To Customers Within One Day

ದೇಶೀಯವಾಗಿ ಲಭ್ಯವಿರುವ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಕಾರು, ರೂ.7.49 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಂಎಕ್ಸ್1, ಎಂಎಕ್ಸ್2, ಎಂಎಕ್ಸ್2 ಪ್ರೊ, ಎಂಎಕ್ಸ್3, ಎಂಎಕ್ಸ್3 ಪ್ರೊ ಸೇರಿದಂತೆ ಅತ್ಯಾಧುನಿಕವಾಗಿರುವ 9 ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಎಸ್‌ಯುವಿಯ ವಿನ್ಯಾಸ (ಡಿಸೈನ್)ವು ನೋಡುಗರ ಕಣ್ಣು ಕುಕ್ಕುವಂತೆ ಇದ್ದು, ಎಲ್ಇಡಿ ಹೆಡ್‌ಲೈಟ್‌ಗಳು, ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್‌ಗಳು (ಡಿಆರ್‌ಎಲ್ಎಸ್), ನವೀನಕೃತ ಬಂಪರ್, ಅಲಾಯ್ ವೀಲ್‌ಗಳು ಹಾಗೂ ಸಿ-ಆಕಾರಕ್ಕೆ ಹೋಲುವ ಟೈಲ್‌ಲ್ಯಾಂಪ್‌ಗಳನ್ನು ಹೊಂದಿದೆ. ಜೊತೆಗೆ ಸಿಟ್ರಿನ್ ಯೆಲ್ಲೋ, ಡೀಪ್ ಫಾರೆಸ್ಟ್, ಡ್ಯೂನ್ ಬೀಜ್, ಎವರೆಸ್ಟ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದ್ದು, ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಬಹುದು.

Mahindra XUV 3XO 1500 Units Cars Delivered To Customers Within One Day

ಹೊಸ ಎಕ್ಸ್‌ಯುವಿ 3ಎಕ್ಸ್ಒ ಕಾರು ಪೆಟ್ರೋಲ್ ಮತ್ತು ಡೀಸೆಲ್ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದರ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 110 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 200 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್ 130 ಪಿಎಸ್ ಪವರ್ ಮತ್ತು 250 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 117 ಪಿಎಸ್ ಪವರ್ ಹಾಗೂ 300 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ ಬಾಕ್ಸ್‌ನ್ನು ಒಳಗೊಂಡಿದೆ. ಪೆಟ್ರೋಲ್ ಮಾದರಿಗಳು 17.96 ರಿಂದ 20.1 ಕೆಎಂಪಿಎಲ್, ಡೀಸೆಲ್ ಆವೃತ್ತಿಗಳು 20.6 ರಿಂದ 21.2 ಕೆಎಂಪಿಎಲ್ ಮೈಲೇಜ್ ನೀಡುತ್ತವೆ.

Mahindra XUV 3XO 1500 Units Cars Delivered To Customers Within One Day

ನೂತನ ಕಾರು ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಡಿಸ್ಪ್ಲೇಗಳು, ಕ್ರೂಸ್ ಕಂಟ್ರೋಲ್, ಡುಯಲ್-ಝೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, ಕನೆಕ್ಟ್ದ್ ಕಾರ್ ಟೆಕ್, ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ವ್ಯೂ ಕ್ಯಾಮೆರಾ, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾದಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಕಾರಿಗೆ ನಿಸ್ಸಾನ್ ಮ್ಯಾಗ್ನೈಟ್, ಹ್ಯುಂಡೈ ವೆನ್ಯೂ, ರೆನಾಲ್ಟ್ ಕಿಗರ್, ಟಾಟಾ ನೆಕ್ಸಾನ್ ಎಸ್‌ಯುವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, May 28, 2024, 16:04 [IST]
English summary
Mahindra xuv 3xo 1500 units cars delivered customers within one day details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+