Mahindra: ನಾಳೆಯಿಂದ ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಬುಕ್ಕಿಂಗ್ ಆರಂಭ.. 7 ಲಕ್ಷ ಬೆಲೆ, 21 Km ಮೈಲೇಜ್

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಮಹೀಂದ್ರಾ (Mahindra) ಗುರುತಿಸಿಕೊಂಡಿದೆ. ಇತ್ತೀಚಿಗೆ ಹೊಚ್ಚ ಹೊಸ ಎಕ್ಸ್‌ಯುವಿ 3ಎಕ್ಸ್ಒ (XUV 3XO) ಎಸ್‌ಯುವಿಯನ್ನು ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ನಾಳೆ (ಮೇ.15)ಯಿಂದ ಈ ಕಾರಿನ ಬುಕ್ಕಿಂಗ್ ಆರಂಭವಾಗಲಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ನೂತನ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಕಾರನ್ನು ಖರೀದಿಸಲು ಇಚ್ಚಿಸುವ ಗ್ರಾಹಕರು, ಕಂಪನಿಯ ಅಧಿಕೃತ ವೆಬ್‌ಸೈಟ್‌ ಅಥವಾ ಸಮೀಪದ ಡೀಲರ್‌ಶಿಪ್‌ಗೆ ಭೇಟಿ ನೀಡಿ ಬುಕ್ಕಿಂಗ್ ಮಾಡಬಹುದು. ಈ ಎಸ್‌ಯುವಿಯನ್ನು ಕಾಯ್ದಿರಿಸಲು ಖರೀದಿದಾರರು ರೂ.21,000 ಮುಂಗಡ ಹಣವನ್ನು ಪಾವತಿಸಬೇಕು ಎಂದು ತಿಳಿದುಬಂದಿದೆ. ನೂತನ ಕಾರು ಎಕ್ಸ್‌ಯುವಿ300ನ ಫೇಸ್‌ಲಿಫ್ಟ್ ಆವೃತ್ತಿಯಾಗಿದ್ದು, ಹಲವು ನವೀನ ವೈಶಿಷ್ಟ್ಯಗಳನ್ನು ಪಡೆದಿದೆ.

Mahindra XUV 3XO Car Booking Began Tomorrow Rs 7 Lakh Price 21 Km Mileage

ದೇಶೀಯವಾಗಿ ಖರೀದಿಗೆ ದೊರೆಯುವ ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ರೂ.7.49 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಂಎಕ್ಸ್1, ಎಂಎಕ್ಸ್2, ಎಂಎಕ್ಸ್2 ಪ್ರೊ, ಎಂಎಕ್ಸ್3, ಎಂಎಕ್ಸ್3 ಪ್ರೊ ಸೇರಿದಂತೆ 9 ರೂಪಾಂತರ (ವೇರಿಯೆಂಟ್)ಗಳು ಹಾಗೂ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ನೂತನ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಕಾರು ಅತ್ಯಾಧುನಿಕ ವಿನ್ಯಾಸ (ಡಿಸೈನ್)ವನ್ನು ಪಡೆದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್‌ಗಳು (DRLs), ನವೀನಕೃತ ಬಂಪರ್, ಹೊಸತನದಿಂದ ಕೂಡಿರುವ ಅಲಾಯ್ ವೀಲ್‌ಗಳು, ಸಿ-ಆಕಾರಕ್ಕೆ ಹೋಲುವ ಟೈಲ್‌ಲ್ಯಾಂಪ್‌ಗಳನ್ನು ತನ್ನದಾಗಿಸಿಕೊಂಡಿದೆ. ಈ ಕಾರಿನಲ್ಲಿ 5 ಮಂದಿ ದೂರದ ಊರುಗಳಿಗೆ ಆರಾಮದಾಯಕವಾಗಿ ಕುಳಿತುಕೊಂಡು ಹೋಗಬಹುದು.

Mahindra XUV 3XO Car Booking Began Tomorrow Rs 7 Lakh Price 21 Km Mileage

ಹೊಸ ಎಕ್ಸ್‌ಯುವಿ 3ಎಕ್ಸ್ಒ ಕಾರು ಪೆಟ್ರೋಲ್ ಮತ್ತು ಡೀಸೆಲ್ ಪವರ್‌ಟ್ರೇನ್‌ನೊಂದಿಗೆ ಸಿಗುತ್ತದೆ. ಇದರ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 110 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 200 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್ 130 ಪಿಎಸ್ ಪವರ್ ಮತ್ತು 250 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 117 ಪಿಎಸ್ ಪವರ್ ಹಾಗೂ 300 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಲು ಶಕ್ತವಾಗಿದೆ. ರೂಪಾಂತರಗಳ ಅನ್ವಯ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ ಬಾಕ್ಸ್‌ನ್ನು ಪಡೆದಿದೆ. ಮೈಲೇಜ್ ವಿಚಾರವಾಗಿ ಹೇಳುವುದಾದರೆ, ಪೆಟ್ರೋಲ್ ಮಾದರಿಗಳು 17.96 ರಿಂದ 20.1 ಕೆಎಂಪಿಎಲ್, ಡೀಸೆಲ್ ರೂಪಾಂತರಗಳು 20.6 ರಿಂದ 21.2 ಕೆಎಂಪಿಎಲ್ ಇಂಧನ ದಕ್ಷತೆ (Fuel Efficiency)ಯನ್ನು ಹೊಂದಿವೆ.

Mahindra XUV 3XO Car Booking Began Tomorrow Rs 7 Lakh Price 21 Km Mileage

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಡಿಸ್ಪ್ಲೇಗಳು, ಕ್ರೂಸ್ ಕಂಟ್ರೋಲ್, ಡುಯಲ್ ಜೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಒಳಗೊಂಡಿದೆ. ಈ ಕಾರಿಗೆ ನಿಸ್ಸಾನ್ ಮ್ಯಾಗ್ನೈಟ್, ಹ್ಯುಂಡೈ ವೆನ್ಯೂ, ರೆನಾಲ್ಟ್ ಕಿಗರ್, ಟಾಟಾ ನೆಕ್ಸಾನ್ ದೊಡ್ಡ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, May 14, 2024, 18:16 [IST]
English summary
Mahindra xuv 3xo car booking began tomorrow rs 7 lakh price 21 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+