Mahindra: ಮಹೀಂದ್ರಾದ ಈ ಹೊಸ ಕಾರಿನಿಂದ ಬುಕ್ಕಿಂಗ್‌ನಲ್ಲಿ ಸುನಾಮಿ.. 7 ಲಕ್ಷ ಬೆಲೆ, 21 Km ಮೈಲೇಜ್!

ಮಹೀಂದ್ರಾ (Mahindra) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದ್ದು, ಏಪ್ರಿಲ್‌ (2024)ನಲ್ಲಿ ಹೊಚ್ಚ ಹೊಸ ಎಕ್ಸ್‌ಯುವಿ 3ಎಕ್ಸ್ಒ (XUV 3XO) ಕಾರನ್ನು ಬಿಡುಗಡೆಗೊಳಿಸಿತ್ತು. ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದ್ದು, ಈ ವಿಭಾಗದಲ್ಲಿ ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಕಿಯಾ ಸೋನೆಟ್ ಮತ್ತು ಫ್ರಾಂಕ್ಸ್‌ ಕಾರುಗಳಿಗೆ ಪ್ರಬಲವಾದ ಸ್ಪರ್ಧೆಯೊಡ್ಡುತ್ತಿದೆ. ಮೇ.15ರಂದು 'ಎಕ್ಸ್‌ಯುವಿ 3ಎಕ್ಸ್ಒ' ಕಾರಿನ ಬುಕ್ಕಿಂಗ್ ಕೂಡ ಶುರುವಾಗಿತ್ತು. ಕೇವಲ 1 ಗಂಟೆಯೊಳಗೆ 50,000 ಗ್ರಾಹಕರು ಕಾಯ್ದಿರಿಸಿದ್ದರು.

ಈಗಲೂ ನೂತನ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಎಸ್‌ಯುವಿ ಹೆಚ್ಚಿನ ಸಂಖ್ಯೆಯಲ್ಲಿ ಬುಕ್ಕಿಂಗ್ ಪಡೆದುಕೊಳ್ಳುತ್ತಿದೆ. ಜುಲೈ 2024ಕ್ಕೆ ಅನ್ವಯವಾಗುವಂತೆ ಪ್ರತಿ ತಿಂಗಳು ಸರಾಸರಿ 20,000 ಗ್ರಾಹಕರು ಈ ಕಾರನ್ನು ಆರ್ಡರ್ ಮಾಡುತ್ತಿದ್ದಾರೆ. ದೇಶೀಯವಾಗಿ ಹೊಚ್ಚ ಹೊಸ ಎಕ್ಸ್‌ಯುವಿ 3ಎಕ್ಸ್ಒ ರೂ.7.49 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

Mahindra XUV 3XO Car Gets Every Month 20 000 New Booking Rs 7 Lakh Price 21 Km Mileage

ಈ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಉತ್ತಮವಾದ ವಿನ್ಯಾಸ (ಡಿಸೈನ್) ಹೊಂದಿದ್ದು, ನೋಡುಗರನ್ನು ಸೆಳೆಯುತ್ತದೆ. ಆಕರ್ಷಕ ಎಲ್ಇಡಿ ಹೆಡ್‌ಲೈಟ್‌ಗಳು, ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್‌ಗಳನ್ನು ಒಳಗೊಂಡಿದೆ. ನೂತನ ಕಾರು ಎಂಎಕ್ಸ್1, ಎಂಎಕ್ಸ್2, ಎಂಎಕ್ಸ್3 ಮತ್ತು ಎಎಕ್ಸ್5 ಸೇರಿದಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಹೊಸ ಎಕ್ಸ್‌ಯುವಿ 3ಎಕ್ಸ್ಒ ಮೂರು ಶಕ್ತಿಯುತ ಪವರ್‌ಟ್ರೇನ್‌ ಆಯ್ಕೆಯನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ 110 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 200 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್ 130 ಪಿಎಸ್ ಶಕ್ತಿ ಮತ್ತು 250 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯ ಹೊಂದಿದೆ.

Mahindra XUV 3XO Car Gets Every Month 20 000 New Booking Rs 7 Lakh Price 21 Km Mileage

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 117 ಪಿಎಸ್ ಶಕ್ತಿ (ಪವರ್) ಹಾಗೂ 300 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ಚಾಲಿತ ರೂಪಾಂತರಗಳು 17.96 ರಿಂದ 20.1 ಕೆಎಂಪಿಎಲ್, ಡೀಸೆಲ್ ಚಾಲಿತ ರೂಪಾಂತರಗಳು 20.6 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತವೆ.

ಈ ಕಾರಿನಲ್ಲಿ 5 ಮಂದಿ ಸುಲಭವಾಗಿ ಸಂಚಾರ ನಡೆಸಬಹುದು. ಪ್ರವಾಸ ಅಥವಾ ದೂರದ ಊರುಗಳಿಗೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಲು ಸಾಧ್ಯವಾಗುವಂತೆ 295 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. ಜೊತೆಗೆ ಡೀಪ್ ಫಾರೆಸ್ಟ್, ಡ್ಯೂನ್ ಬೀಜ್, ಎವರೆಸ್ಟ್ ವೈಟ್ ಸೇರಿದಂತೆ ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ಲಭ್ಯವಿದೆ.

ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್ಪ್ಲೇಗಳು, ಡುಯಲ್-ಝೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, August 22, 2024, 16:43 [IST]
English summary
Mahindra xuv 3xo car gets every month 20000 new booking rs 7 lakh price 21 km mileage
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+