ಪೆಟ್ರೋಲ್ ಕಾರಿಗೆ ದೊಡ್ಡ ಕ್ಯೂ.. ಆನಂದ್ ಮಹೀಂದ್ರಾ ಕಂಪನಿಯ ಈ ಗಾಡಿ ಎಲೆಕ್ಟ್ರಿಕ್ ಅವತಾರದಲ್ಲಿ.. ಕಡಿಮೆ ಬೆಲೆ?

ಭಾರತದ ಕಾರು ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳು ಸಾಕಷ್ಟು ಮುನ್ನೆಲೆಗೆ ಬರುತ್ತಿವೆ. ಅದರಲ್ಲೂ ಈ ವಿಭಾಗದಲ್ಲಿ ಟಾಟಾ ಮೋಟಾರ್ಸ್ (Tata Motors) ಮುಂದಿದೆ. ಕಳೆದ ವರ್ಷ ಆನಂದ್ ಮಹೀಂದ್ರಾ (Anand Mahindra) ಮಾಲೀಕತ್ವದ ಮಹೀಂದ್ರಾ ಕಂಪನಿ 'ಎಕ್ಸ್‌ಯುವಿ 400 ಇವಿ'ಯನ್ನು ಪರಿಚಯಿಸುವ ಮೂಲಕ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿಯೂ ಆರಂಭಿಕ ಹೆಜ್ಜೆಯನ್ನು ಇಟ್ಟಿತ್ತು. ಸದ್ಯ ಕಂಪನಿಯು ಇವಿ (ಎಲೆಕ್ಟ್ರಿಕ್ ವೆಹಿಕಲ್) ಲೈನ್-ಅಪ್ ಬಲಪಡಿಸಲು ಸಾಕಷ್ಟು ಶ್ರಮಿಸುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಏಪ್ರಿಲ್‌ (2024)ನಲ್ಲಿ ಬಿಡುಗಡೆಗೊಳಿಸಿದ್ದ ಇಂಧನ ಚಾಲಿತ ಎಕ್ಸ್‌ಯುವಿ 3ಎಕ್ಸ್ಒ (XUV 3XO) ಕಾರು ಎಲೆಕ್ಟ್ರಿಕ್ ರೂಪದಲ್ಲಿ ಕೂಡ ಮಾರುಕಟ್ಟೆಗೆ ಬರುವ ಸಾಧ್ಯತೆಯಿದೆ.

ಮೂಲಗಳ ಪ್ರಕಾರ, ಮುಂಬರುವ ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರಿಗೆ ಎಸ್240 ಎಂಬ ಕೋಡ್ ನೇಮ್ (ಸಂಕೇತ ನಾಮ) ಇಡಲಾಗಿದೆ. ಈ ವರ್ಷದ ನವೆಂಬರ್‌ನಲ್ಲಿ ಉತ್ಪಾದನೆ ಶುರುವಾಗುವ ನಿರೀಕ್ಷೆಯಿದೆ. ಗ್ರಾಹಕರ ಬೇಡಿಕೆಯನ್ನು ಪೂರೈಸಲು ತಿಂಗಳಿಗೆ ಸುಮಾರು 1,500 ದಿಂದ 1,800 ಯುನಿಟ್‌ ಕಾರುಗಳನ್ನು ತಯಾರಿಸಲು ಮಹೀಂದ್ರಾ ತೀರ್ಮಾನಿಸಿದೆ ಎಂದು ವರದಿಯಾಗಿದೆ. ಆದಾಗ್ಯೂ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.

Mahindra XUV 3XO Electric Car Production Likely Start In November By 2024 Expected Price Details

ನೂತನ ಎಲೆಕ್ಟ್ರಿಕ್ ಕಾರಿನ ವಿನ್ಯಾಸ 'ಎಕ್ಸ್‌ಯುವಿ 3ಎಕ್ಸ್ಒಗೆ ಹೋಲಿಕೆಯಾಗಲಿದೆ ಎನ್ನಲಾಗಿದೆ. ಇಂಧನ (ಫ್ಯೂಯೆಲ್) ತುಂಬುವ ಜಾಗದಲ್ಲಿ ಚಾರ್ಜಿಂಗ್ ಪಾಯಿಂಟ್ ಹೊಂದಿರುವ ಸಾಧ್ಯತೆಯಿದೆ. 34.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಒಳಗೊಂಡಿರಲಿದ್ದು, ಎಕ್ಸ್‌ಯುವಿ400 ಇವಿ ಹೋಲಿಕೆ ಮಾಡಿದರೆ ಕಡಿಮೆ ಶಕ್ತಿ (ಪವರ್) ಹಾಗೂ ರೇಂಜ್ (ಮೈಲೇಜ್) ನೀಡಲಿದೆ. ಜೊತೆಗೆ 15 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ ಎಂದು ಹೇಳಲಾಗಿದೆ.

ದೇಶೀಯ ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (XUV 3XO) ಕಾರು ತೀವ್ರ ಸಂಚಲನ ಮೂಡಿಸುತ್ತಿದ್ದು, ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಮೇನಲ್ಲಿ 10,510 ಯುನಿಟ್‌ ಹಾಗೂ ಜೂನ್ ತಿಂಗಳಲ್ಲಿ 8,834 ಯುನಿಟ್ ಕಾರುಗಳನ್ನು ಮಾರಲಾಗಿದೆ. ಈ ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿ ರೂ.7.49 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

Mahindra XUV 3XO Electric Car Production Likely Start In November By 2024 Expected Price Details

ಈ ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಸಿಗಲಿದ್ದು, 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟವನ್ನು ನಡೆಸಬಹುದು. ಡೀಪ್ ಫಾರೆಸ್ಟ್, ಡ್ಯೂನ್ ಬೀಜ್, ಎವರೆಸ್ಟ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ.

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿ 10.25-ಇಂಚಿನ ಡುಯಲ್ ಡಿಸ್ಪ್ಲೇಗಳು, ಡುಯಲ್-ಝೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್ ಹಾಗೂ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯ (ಫೀಚರ್)ಗಳನ್ನು ಒಳಗೊಂಡಿದೆ. ಸುರಕ್ಷತೆಗೂ ಹೆಸರುವಾಗಿಯಾಗಿದ್ದು, 6-ಏರ್‌ಬ್ಯಾಗ್‌, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Mahindra XUV 3XO Electric Car Production Likely Start In November By 2024 Expected Price Details

ಮಹೀಂದ್ರಾ ಎಕ್ಸ್‌ಯುವಿ 400 ಎಲೆಕ್ಟ್ರಿಕ್ ಕಾರಿನ ಬಗ್ಗೆ ಮಾತನಾಡುವುದಾದರೆ, ಇದು ರೂ.15.49 ಲಕ್ಷದಿಂದ ರೂ.19.39 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 34.5 ಮತ್ತು 39.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಕ್ರಮವಾಗಿ ಭರ್ತಿ ಚಾರ್ಜ್‌ನಲ್ಲಿ 375 ರಿಂದ 456 ಕಿ.ಮೀ ಓಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, July 8, 2024, 19:13 [IST]
English summary
Mahindra xuv 3xo electric car production likely start november 2024 expected price details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+