ಕೇವಲ 8 ಲಕ್ಷಕ್ಕೆ ಪ್ರೀಮಿಯಂ ಕಾರು: 18 ಕಿ.ಮೀ ಮೈಲೇಜ್, 6 ಏರ್‌ಬ್ಯಾಗ್‌ಗಳು, ಸನ್‌ರೂಫ್!
ಮಹೀಂದ್ರಾ (Mahindra) ಕಂಪನಿಯು ತನ್ನ ಬಹುನಿರೀಕ್ಷಿತ XUV 3XO ಎಸ್‍ಯುವಿಯನ್ನು ಇತ್ತೀಚೆಗಷ್ಟೆ ಬಿಡುಗಡೆಗೊಳಿಸಿದೆ. ಇದು ಸಬ್‌ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು, ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 7.49 ಲಕ್ಷದಿಂದ ಪ್ರಾರಂಭವಾಗುತ್ತದೆ. ಹೊಸ ಮಹೀಂದ್ರಾ XUV 3XO ಎಸ್‌ಯುವಿ ವಿಶೇಷತೆಗಳನ್ನು ಇಲ್ಲಿ ನೋಡೋಣ.
ವೈಶೀಷ್ಟ್ಯಗಳು: ಹೊಸ ಮಹೀಂದ್ರಾ XUV 3XO ಎಸ್‍ಯುವಿ, ವೈರ್‌ಲೆಸ್ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಯೊಂದಿಗೆ 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹೊಸ 7 ಸ್ಪೀಕರ್ ಹರ್ಮನ್ ಕಾರ್ಡನ್ ಮ್ಯೂಸಿಕ್ ಸಿಸ್ಟಮ್, 10.25 ಇಂಚಿನ ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಡ್ಯುಯಲ್ ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಆಂಬಿಯೆಂಟ್ ಸೌಂಡ್ ಮೋಡ್‌ಗಳು, ಹಿಂದಿನ ಎಸಿ ವೆಂಟ್‌ಗಳು, ಎಲೆಕ್ಟ್ರಿಕ್ ಸನ್‌ರೂಫ್, ಮಲ್ಟಿಪಲ್ ಟೈಪ್ ಎ ಮತ್ತು ಟೈಪ್ ಸಿ ಯುಎಸ್‌ಬಿ ಪೋರ್ಟ್‌ಗಳು, ಆಂಬಿಯೆಂಟ್ ಲೈಟಿಂಗ್, 360-ಡಿಗ್ರಿ ಸರೌಂಡ್ ಕ್ಯಾಮೆರಾ ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ.

ಪವರ್‌ಟ್ರೇನ್ ಆಯ್ಕೆಗಳು: ಹೊಸ ಮಹೀಂದ್ರಾ XUV 3XO ಎಸ್‍ಯುವಿ 1.2 ಲೀಟರ್ ಟರ್ಬೊ ಪೆಟ್ರೋಲ್, 1.2 ಟರ್ಬೊ GDi ಪೆಟ್ರೋಲ್ ಎಂಜಿನ್ ಮತ್ತು 1.5 ಡೀಸೆಲ್ ಎಂಜಿನ್ ಎಂಬ ಮೂರು ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 108 bhp ಮತ್ತು 200 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಇದರೊಂದಿಗೆ 1.2 ಟರ್ಬೊ GDi ಪೆಟ್ರೋಲ್ ಎಂಜಿನ್ ಎಂಜಿನ್ 129 bhp ಮತ್ತು 230 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.5-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ 115 bhp ಮತ್ತು 300 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್‌ಗಳೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಮತ್ತು 6-ಸ್ಪೀಡ್ AMT ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಲಭ್ಯವಿದೆ. ಈ ಎಸ್‍ಯುವಿಯು 18.89 ನಿಂದ 20.1 ಕಿ.ಮೀ ಮೈಲೇಜ್ ನೀಡುತ್ತದೆ.

ಸುರಕ್ಷತೆ: ಹೊಸ ಮಹೀಂದ್ರಾ XUV 3XO ಎಸ್‍ಯುವಿಯ ಸುರಕ್ಷತ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ ಲೆವೆಲ್ 2 ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ತಂತ್ರಜ್ಞಾನವನ್ನು ಹೊಂದಿದೆ. ಹೆಚ್ಚುವರಿಯಾಗಿ, ಹೊಸ ಮಹೀಂದ್ರಾ ಸಬ್‌ಕಾಂಪ್ಯಾ ಎಸ್‍ಯುವಿಯಲ್ಲಿ ಆರು ಏರ್‌ಬ್ಯಾಗ್‌ಗಳು, 360-ಡಿಗ್ರಿ ಕ್ಯಾಮೆರಾ, EBD ಜೊತೆಗೆ ABS, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್ ಮತ್ತು ಬ್ರೇಕ್ ಡಿಸ್ಕ್ ವೈಪಿಂಗ್ ಹೊಂದಿದೆ. ಇದರೊಂದಿಗೆ ರೋಲ್ ಓವರ್ ಮಿಟಿಗೇಶನ್, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್, ವೆಹಿಕಲ್ ಡೈನಾಮಿಕ್ಸ್ ಕಂಟ್ರೋಲ್ ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ ಅನ್ನು ಹೊಂದಿದೆ.
ವಿನ್ಯಾಸ: ಹೊಸ ಮಹೀಂದ್ರಾ XUV 3XO ಎಸ್‍ಯುವಿಯು ವಿನ್ಯಾಸವು ಮಹೀಂದ್ರಾದ ಮುಂಬರುವ BE ಎಲೆಕ್ಟ್ರಿಕ್ ಎಸ್‍ಯುವಿಯಿಂದ ಹೆಚ್ಚು ಸ್ಫೂರ್ತಿ ಪಡೆದಿದೆ. ಈ ಹೊಸ ಎಸ್‍ಯುವಿಯಲ್ಲಿ ಮುಂಭಾಗದಲ್ಲಿ, ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್‌ಗಳು (DRL ಗಳು), ಹೊಸದಾಗಿ ವಿನ್ಯಾಸಗೊಳಿಸಲಾದ ಗ್ರಿಲ್, ದೊಡ್ಡ ಸೆಂಟ್ರಲ್ ಏರ್ ಟೆಕ್ ನೊಂದಿಗೆ ಪರಿಷ್ಕೃತ ಬಂಪರ್ ಮತ್ತು LED ಹೆಡ್‌ಲೈಟ್‌ಗಳನ್ನು ಒಳಗೊಂಡಿದೆ.

ಸೈಡ್ ಪ್ರೊಫೈಲ್‌ನಲ್ಲಿ ಡಾರ್ಕ್ ಕ್ರೋಮ್ ಫಿನಿಶ್ ಹೊಂದಿರುವ ಹೊಸ ಅಲಾಯ್ ವ್ಹೀಲ್‌ಗಳು ಹೆಚ್ಚು ಆಕರ್ಷಕವಾಗಿ ಕಾಣುತ್ತವೆ. ಇನ್ನು ಅಗಲದ ಎಲ್ಇಡಿ ಲೈಟ್ ಬಾರ್, ಬಂಪರ್-ಸಂಯೋಜಿತ ನೋಂದಣಿ ಪ್ಲೇಟ್ ಮತ್ತು ಸ್ಲೀಕರ್ ಸಿ-ಆಕಾರದ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿರುವ ನವೀಕರಿಸಿದ ಟೈಲ್‌ಗೇಟ್ ವಿನ್ಯಾಸದೊಂದಿಗೆ ಹಿಂಭಾಗದ ವಿಭಾಗ ಸಂಪೂರ್ಣ ಸ್ಪೋರ್ಟಿಯಾಗಿ ಕಾಣುತ್ತದೆ.
6 ತಿಂಗಳು ಕಾಯಬೇಕು: ಈ ಹೊಸ XUV 3XO ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಸುಮಾರು 50,000 ಕ್ಕೂ ಅಧಿಕ ಬುಕಿಂಗ್ ಅನ್ನು ಪಡೆದುಕೊಂಡಿದೆ. ಈ ಕಾರಿನ ವಿತರಣೆ ಮೇ 26 ರಿಂದ ಆರಂಭವಾಗುತ್ತಿದೆಯಾದರೂ, ಈ ಕಾರಿನ ಕೆಲವು ವೇರಿಯಂಟ್‌ಗಳ ಡೆಲಿವರಿಯನ್ನು ಪಡೆಯಲು ಸುಮಾರು 6 ತಿಂಗಳವರೆಗೂ ಕಾಯಬೇಕಿದೆ. ಈ ಕಾರಿನ ಮಿಡ್ ಸ್ಪೆಕ್ ವೇರಿಯಂಟ್ ಆದ AX5, AX5 L ಗಳಿಗೆ ಹೆಚ್ಚು ಬುಕಿಂಗ್‌ಗಳು ಬಂದಿವೆ ಎಂದು ತಿಳಿದು ಬಂದಿದೆ.


Click it and Unblock the Notifications