Mahindra: 8 ಲಕ್ಷದ ಜನಪ್ರಿಯ ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬುಕ್ಕಿಂಗ್ ಸ್ಥಗಿತ.. ಕಾರಣವೇನು?
ಭಾರತದ ಪ್ರಖ್ಯಾತ ವಾಹನ ತಯಾರಕ ಕಂಪನಿ ಮಹೀಂದ್ರಾ (Mahindra), ಎಕ್ಸ್‌ಯುವಿ300 ಕಾರಿನ ಬುಕ್ಕಿಂಗ್‌ನ್ನು ಸ್ಥಗಿತಗೊಳಿಸಿದೆ. ಉಳಿದಿರುವ ಸ್ಟಾಕ್ ಖಾಲಿಯಾಗುವವರೆಗೂ ಈ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಮಾರಾಟಗೊಳಿಸಲಿದ್ದು, ಶೀಘ್ರದಲ್ಲೇ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡಲಿದೆ. ಆ ಕಾರಣಕ್ಕೆ ಆರ್ಡರ್ ಪಡೆಯುವುದನ್ನು ನಿಲ್ಲಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ದೇಶೀಯ ಮಾರುಕಟ್ಟೆಯಲ್ಲಿ ಬಹಳಷ್ಟು ನವೀಕರಣದೊಂದಿಗೆ ಈ ವರ್ಷವೇ ಎಕ್ಸ್‌ಯುವಿ300 (XUV 300) ಎಸ್‌ಯುವಿಯನ್ನು ಪರಿಚಯಿಸುವ ನಿರೀಕ್ಷೆಯಿದೆ. ವಿನ್ಯಾಸ, ವೈಶಿಷ್ಟ್ಯ ಹಾಗೂ ಕಾರ್ಯಕ್ಷಮತೆ ವಿಚಾರದಲ್ಲಿ ಹಲವು ಬದಲಾವಣೆಗಳನ್ನು ಪಡೆದಿರಲಿದೆ ಎನ್ನಲಾಗಿದೆ. ಮೊದಲಿಗೆ ಹೊರಭಾಗದಲ್ಲಿ ಈ ಕಾರು ಏನೆಲ್ಲಾ ಪರಿವರ್ತನೆಯನ್ನು ಹೊಂದಿರುತ್ತದೆ ಎಂಬುದನ್ನು ತಿಳಿಯುವುದಾದರೆ, ಮುಂಭಾಗ (ಫ್ರಂಟ್) ನವೀನವಾದ ಗ್ರಿಲ್, ಮರುವಿನ್ಯಾಸಗೊಳಿಸಲಾದ ಬಂಪರ್ ಪಡೆದಿರುವ ಸಾಧ್ಯತೆಯಿದೆ.

ಇದಿಷ್ಟೇ ಅಲ್ಲದೆ, ಮಹೀಂದ್ರಾ ಎಕ್ಸ್‌ಯುವಿ300 ಫೇಸ್‌ಲಿಫ್ಟ್ ಕಾರು ಸ್ಪ್ಲಿಟ್ ಎಲ್‌ಇಡಿ ಹೆಡ್‌ಲೈಟ್‌ಗಳು, ಆಕರ್ಷಕ ಡಿಆರ್‌ಎಲ್‌ನ್ನು ಹೊಂದಿರಬಹುದು. ಹಿಂಭಾಗವು ಅತ್ಯುತ್ತಮ ವಿನ್ಯಾಸವನ್ನು ಹೊಂದಿದ್ದು, ಹೊಚ್ಚ ಹೊಸ ಎಲ್ಇಡಿ ಟೈಲ್‌ಲೈಟ್‌ಗಳನ್ನು ಪಡೆಯುವುದರೊಂದಿಗೆ ನೂತನ ಬಂಪರ್ ಅನ್ನು ಒಳಗೊಂಡಿರಬಹುದು. ಬದಿಗಳ (ಸೈಡ್) ವಿನ್ಯಾಸ ಅಷ್ಟಾಗಿ ಬದಲಾಗುವುದಿಲ್ಲ ಎನ್ನಲಾಗಿದೆ. ಆದರೂ 16-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್ಸ್ ಹೊಂದಿರಬಹುದು.
ಮುಂಬರುವ ಮಹೀಂದ್ರಾ ಎಕ್ಸ್‌ಯುವಿ300 ಫೇಸ್‌ಲಿಫ್ಟ್ ಎಸ್‌ಯುವಿ, ಎಕ್ಸ್‌ಯುವಿ400 ಎಲೆಕ್ಟ್ರಿಕ್ ಕಾರಿನ ಇಎಲ್ ರೂಪಾಂತರದಂತೆ ಒಳಭಾಗದ ವಿನ್ಯಾಸವನ್ನು ಒಳಗೊಂಡಿರಬಹುದು. ಪ್ರಮುಖವಾಗಿ 10.25-ಇಂಚಿನ ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಡುಯಲ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್ಸ್, ಎಲೆಕ್ಟ್ರಿಕ್ ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ.

ಮುಂಬರಲಿರುವ ಎಕ್ಸ್‌ಯುವಿ300 ಕಾರು, 1.5-ಲೀಟರ್ ಟರ್ಬೊ ಡೀಸೆಲ್, 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದಿರಬಹುದು. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಹಾಗೂ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಸಿಗಬಹುದು. ಸುರಕ್ಷತೆಯ ವಿಚಾರದಲ್ಲಿಯೂ ಈ ಕಾರು ಅತ್ಯುತ್ತಮವಾಗಿರಲಿದ್ದು, 6 ಏರ್‌ಬ್ಯಾಗ್, 4 ಡಿಸ್ಕ್ ಬ್ರೇಕ್ಸ್, TPMS (ಟ್ರೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿರುವ ನಿರೀಕ್ಷೆಯಿದೆ.
ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ300 (Mahindra XUV300) ಕಾರು ರೂ.7.99 ಲಕ್ಷದಿಂದ ರೂ.14.76 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಡಬ್ಲ್ಯೂ2, ಡಬ್ಲ್ಯೂ4, ಡಬ್ಲ್ಯೂ6 ಒಳಗೊಂಡಂತೆ 5 ರೂಪಾಂತರ ಹಾಗೂ ಆಕರ್ಷಕ ಬಣ್ಣಗಳೊಂದಿಗೆ ದೊರೆಯುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಎಕ್ಸ್‌ಯುವಿ300 ಕಾರು, 1.2-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಟಿಜಿಡಿಐ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನ್ವಯ 6-ಸ್ವೀಡ್ ಮ್ಯಾನುವಲ್ ಮತ್ತು ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಪಡೆದಿದ್ದು, 20.1 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ. ಜೊತೆಗೆ 2WD (ಟೂ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ.
ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿ, 7- ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸಿಂಗಲ್ ಪೇನ್ ಸನ್‌ರೂಫ್, ಕ್ರೂಸ್ ಕಂಟ್ರೋಲ್, ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಕಾರ್ನರ್ ಬ್ರೇಕಿಂಗ್ ಕಂಟ್ರೋಲ್ ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications