Mahindra: ಮಹೀಂದ್ರಾದ ಈ ಕಾರಿಗೆ ಬೃಹತ್ ರಿಯಾಯಿತಿ.. ರೂ.7.99 ಲಕ್ಷ, 20 ಕಿ.ಮೀ ಮೈಲೇಜ್
ಭಾರತದ ಪ್ರಖ್ಯಾತ ವಾಹನ ತಯಾರಕ ಸಂಸ್ಥೆಯಾಗಿ ಮಹೀಂದ್ರಾ (Mahindra) ಖ್ಯಾತಿಗಳಿಸಿದೆ. ಕಂಪನಿಯು ಮಾರಾಟಗೊಳಿಸುವ ಕಾರುಗಳಿಗೆ ಭಾರೀ ಬೇಡಿಕೆಯಿದ್ದು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದುಕೊಂಡಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಖರೀದಿಸುತ್ತಿದ್ದಾರೆ. ಸದ್ಯ ಈ ಜೂನ್ ತಿಂಗಳಲ್ಲಿ ಕೈಗೆಟುಕುವ ಬೆಲೆಯಲ್ಲಿ ಸಿಗುವ 'ಎಕ್ಸ್‌ಯುವಿ300' ಎಸ್‌ಯುವಿ ಮೇಲೆ ದೊಡ್ಡಮಟ್ಟದ ರಿಯಾಯಿತಿಯನ್ನು ಘೋಷಣೆ ಮಾಡಿದೆ. ಆ ಕುರಿತಂತೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ.
ದೇಶೀಯ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ300 ಕಾರಿನ ಜಾಗಕ್ಕೆ ಎಕ್ಸ್‌ಯುವಿ 3ಎಕ್ಸ್ಒ ಬಂದಿದೆ. ಆದಾಗ್ಯೂ ಹಲವು ಮಹೀಂದ್ರಾ ಡೀಲರ್‌ಶಿಪ್‌ಗಳಲ್ಲಿ ಈ ಎಸ್‌ಯುವಿಯ ಸ್ಟಾಕ್ ಮಾರಾಟವಾಗದೆ ಹಾಗೆಯೇ ಉಳಿದಿದ್ದು, ಬೇಗನೆ ಅದನ್ನು ಖಾಲಿ ಮಾಡಲು ಭರ್ಜರಿ ಡಿಸ್ಕೌಂಟ್ ಆಫರ್‌ನ್ನು ನೀಡಲಾಗುತ್ತಿದೆ. ಡೀಸೆಲ್ ರೂಪಾಂತರ (ವೇರಿಯೆಂಟ್)ಗಳು ರೂ.1.79 ಲಕ್ಷ, ಟರ್ಬೊ-ಪೆಟ್ರೋಲ್ ಮಾದರಿಗಳು ರೂ.1.59 ಲಕ್ಷ ಹಾಗೂ ಟಿಜಿಡಿಐ ಟರ್ಬೊ-ಪೆಟ್ರೋಲ್ ಆವೃತ್ತಿಗಳು ರೂ.1.50 ಲಕ್ಷ ರಿಯಾಯಿತಿಯನ್ನು ಹೊಂದಿವೆ.

ಸದ್ಯ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ300 (Mahindra XUV300) ರೂ.7.99 ಲಕ್ಷದಿಂದ ರೂ.14.76 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಡಬ್ಲ್ಯೂ2, ಡಬ್ಲ್ಯೂ4, ಡಬ್ಲ್ಯೂ6, ಡಬ್ಲ್ಯೂ8 ಸೇರಿದಂತೆ ವಿವಿಧ ರೂಪಾಂತರಗಳೊಂದಿಗೆ ಸಿಗಲಿದ್ದು, ಆಕರ್ಷಕ ವಿನ್ಯಾಸವನ್ನು ಹೊಂದಿದೆ. ರೆಡ್ ರೇಜ್, ಅಕ್ವಾಮರೀನ್ ಒಳಗೊಂಡಂತೆ 3-ಡುಯಲ್ ಟೋನ್ ಮತ್ತು 7-ಮೊನೊಟೋನ್ ಬಣ್ಣಗಳನ್ನು ಸಹ ಪಡೆದಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.
ಈ ಎಕ್ಸ್‌ಯುವಿ300 ಪೆಟ್ರೋಲ್ ಹಾಗೂ ಡೀಸೆಲ್ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 110 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 200 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್ 130 ಪಿಎಸ್ ಪವರ್ ಹಾಗೂ 250 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 117 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 300 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 2WD (ಟೂ ವೀಲ್ ಡ್ರೈವ್) ತಂತ್ರಜ್ಞಾವನ್ನು ಪಡೆದಿದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 20.1 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ನೂತನ ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿಯು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸಿಂಗಲ್ ಪೇನ್ ಸನ್‌ರೂಫ್, ಕ್ರೂಸ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 6 ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಒಳಗೊಂಡಿದೆ.
ಈ ಎಕ್ಸ್‌ಯುವಿ300ಗೆ ನಿಸ್ಸಾನ್ ಮ್ಯಾಗ್ನೈಟ್, ಹ್ಯುಂಡೈ ವೆನ್ಯೂ, ರೆನಾಲ್ಟ್ ಕಿಗರ್, ಟಾಟಾ ನೆಕ್ಸಾನ್, ಕಿಯಾ ಸೋನೆಟ್, ಮಾರುತಿ ಸುಜುಕಿ ಬ್ರೆಝಾ ಒಳಗೊಂಡಂತೆ ಹಲವು ಕಾರುಗಳು ಪ್ರಬಲ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications