Mahindra: ಮಹೀಂದ್ರಾದಿಂದ ಶಾಕ್.. ಈ ಜನಪ್ರಿಯ ಕಾರಿನ ಬೆಲೆ ದಿಢೀರ್ ಏರಿಕೆ, 5-ಸೀಟರ್.. 21 Km ಮೈಲೇಜ್!

ಆನಂದ್ ಮಹೀಂದ್ರಾ ಒಡೆತನದ ಮಹೀಂದ್ರಾ (Mahindra) ಸುರಕ್ಷಿತ ಕಾರು ತಯಾರಿಕೆಗೆ ಹೆಸರುವಾಸಿಯಾಗಿದೆ. ಕಳೆದ ಏಪ್ರಿಲ್‌ನಲ್ಲಿ ನೂತನ ಎಕ್ಸ್‌ಯುವಿ 3ಎಕ್ಸ್ಒ (XUV 3XO) ಕಾರನ್ನು ಅದ್ದೂರಿಯಾಗಿ ಮಾರಾಟಕ್ಕೆ ತಂದಿತ್ತು. ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಬುಕ್ಕಿಂಗ್‌ನಲ್ಲಿಯೂ ಹೊಸ ದಾಖಲೆ ನಿರ್ಮಿಸಿತ್ತು. ಮೇ.15ರಂದು ಕಂಪನಿಯು ಈ ಕಾರಿಗಾಗಿ ಆರ್ಡರ್ ಪಡೆಯುವುದನ್ನು ಆರಂಭಿಸಿದ 1 ಗಂಟೆಯೊಳಗೆ ಸರಿ ಸುಮಾರು 50,000 ಗ್ರಾಹಕರು ಬುಕ್ ಮಾಡಿದ್ದರು. ಸದ್ಯ, ಮಹೀಂದ್ರಾ ಕಂಪನಿ ದಿಢೀರನೇ ಇದೇ 'ಎಕ್ಸ್‌ಯುವಿ 3ಎಕ್ಸ್ಒ' ಎಸ್‌ಯುವಿ ಬೆಲೆಯನ್ನು ಹೆಚ್ಚಿಸಿದೆ.

ನೂತನ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಎಸ್‌ಯುವಿಯ ವಿವಿಧ ರೂಪಾಂತರಗಳ (ವೇರಿಯೆಂಟ್) ದರವನ್ನು ರೂ.30,000 ವರೆಗೆ ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ 'ಡ್ರೈವ್‌ಸ್ಪಾರ್ಕ್'ಗೆ ಮಹೀಂದ್ರಾದ ಅಧಿಕೃತ ಡೀಲರ್‌ಶಿಪ್ ಸಿಬ್ಬಂದಿಯೊಬ್ಬರು ಮಾಹಿತಿ ನೀಡಿದ್ದಾರೆ. ಹೊಸ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ. ಈ ಕಾರು ಬಿಡುಗಡೆಯಾಗಿ 5 ತಿಂಗಳ ಬಳಿಕ, ಮೊದಲ ಬಾರಿಗೆ ಬೆಲೆ ಏರಿಕೆ ಕಂಡಿದೆ.

Mahindra XUV 3XO Suv Price Rs 30 000 Hike Details

ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿ, ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ದರ ಹೆಚ್ಚಳದ ನಂತರ ರೂ.7.79 ರಿಂದ ರೂ.15.49 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ ಎಂದು ತಿಳಿದುಬಂದಿದೆ. ಡೀಪ್ ಫಾರೆಸ್ಟ್ ಮತ್ತು ಡ್ಯೂನ್ ಬೀಜ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿ ಕೂಡ ಲಭ್ಯವಿದೆ.

ಈ ಕಾರು ಹಲವು ಶಕ್ತಿಯುತ ಪವರ್‌ಟ್ರೇನ್‌ಗಳನ್ನು ಒಳಗೊಂಡಿದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್, 110 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 200 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ಮತ್ತೊಂದು 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್, 130 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 250 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

Mahindra XUV 3XO Suv Price Rs 30 000 Hike Details

ಇನ್ನೊಂದು 1.5-ಲೀಟರ್ ಡೀಸೆಲ್ ಎಂಜಿನ್, 117 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 300 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ನೂತನ ಎಕ್ಸ್‌ಯುವಿ 3ಎಕ್ಸ್ಒ, ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಕಾರು, ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು (ಫೀಚರ್) ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡಿಸ್ಪ್ಲೇಗಳು (10.25-ಇಂಚು), ಡುಯಲ್ ಝೋನ್ ಎಸಿ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್ ಹಾಗೂ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಹೊಂದಿದೆ.

Mahindra XUV 3XO Suv Price Rs 30 000 Hike Details

5-ಆಸನ ಆಯ್ಕೆ ವ್ಯವಸ್ಥೆಯಲ್ಲಿ ದೊರೆಯುವ ಈ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿ ಸಾಲು-ಸಾಲು ಎದುರಾಳಿಗಳನ್ನು ಹೊಂದಿದೆ. ಪ್ರಮುಖವಾಗಿ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza), ಟಾಟಾ ನೆಕ್ಸಾನ್ (Tata Nexon) ಮತ್ತು ಹ್ಯುಂಡೈ ವೆನ್ಯೂ (Hyundai Venue), ಎಸ್‌ಯುವಿಗಳು ತೀವ್ರವಾಗಿ ಸ್ಪರ್ಧೆಯೊಡ್ಡುತ್ತಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, October 8, 2024, 16:58 [IST]
English summary
Mahindra xuv3xo suv price rs 30000 hike details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+