Mahindra: 3 ಲಕ್ಷದವರೆಗೆ ರಿಯಾಯಿತಿ ಘೋಷಣೆ.. ಅತಿಕಡಿಮೆ ಬೆಲೆಗೆ ಹೊಸ ಎಸ್‌ಯುವಿಗಳು ಲಭ್ಯ!
ಮಹೀಂದ್ರಾ (Mahindra) ಪ್ರಖ್ಯಾತ ವಾಹನ ತಯಾರಕ ಕಂಪನಿಯಾಗಿದೆ. ಈ ನವೆಂಬರ್‌ನಲ್ಲಿಯೂ ತನ್ನ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಯ್ದ ಕಾರುಗಳ ಮೇಲೆ ದೊಡ್ಡ ಹಣಕಾಸಿನ ಪ್ರಯೋಜನಗಳನ್ನು ಘೋಷಣೆ ಮಾಡಿದೆ. ಕರ್ನಾಟಕದ ವಿವಿಧ ಡೀಲರ್‌ಶಿಪ್‌ಗಳಲ್ಲಿ ಎಕ್ಸ್‌ಯುವಿ 400 (XUV400) ಎಲೆಕ್ಟ್ರಿಕ್ ಕಾರು ಹಾಗೂ ಥಾರ್ 3-ಡೋರ್ (Thar 3-Door) ಆಫ್-ರೋಡ್ ಎಸ್‌ಯುವಿಗಳು ಭಾರೀ ರಿಯಾಯಿತಿ ಪಡೆದಿವೆ. ಇದರಿಂದ ದಸರಾ ಹಾಗೂ ದೀಪಾವಳಿ ಹಬ್ಬಗಳಿಗೆ ಹೊಸ ಕಾರನ್ನು ಖರೀದಿ ಮಾಡದ ಗ್ರಾಹಕರಿಗೂ ಹೆಚ್ಚಿನ ಅನುಕೂಲವಾಗಲಿದೆ.
ಮಹೀಂದ್ರಾ ಎಕ್ಸ್‌ಯುವಿ400 (Mahindra XUV400) ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿ ಗುರುತಿಸಿಕೊಂಡಿದೆ. ಈ ನವೆಂಬರ್‌ನಲ್ಲಿ ಸರಿ ಸುಮಾರು ರೂ. 3 ಲಕ್ಷದವರೆಗೆ ರಿಯಾಯಿತಿ ಒಳಗೊಂಡಿದೆ. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಈ ಕಾರು ಕನಿಷ್ಠ ರೂ.15.49 ಲಕ್ಷ ಮತ್ತು ಗರಿಷ್ಠ ರೂ.19.39 ಲಕ್ಷ (ಎಕ್ಸ್ ಶೋರೂಂ - ನವದೆಹಲಿ) ಬೆಲೆಯನ್ನು ಹೊಂದಿದೆ.

ಹೊಸ ಮಹೀಂದ್ರಾ ಎಕ್ಸ್‌ಯುವಿ400 ಎಲೆಕ್ಟ್ರಿಕ್ ಕಾರು 2 ವಿಧದ ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಲಭ್ಯವಿದೆ. 34.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಹೊಂದಿರುವ ಮಾದರಿ (ಮಾಡೆಲ್), ಭರ್ತಿ ಚಾರ್ಜ್‌ನಲ್ಲಿ 375 ಕಿಲೋಮೀಟರ್‌ವರೆಗೆ ಓಡುತ್ತದೆ. 39.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಒಳಗೊಂಡಿರುವ ಮಾದರಿ, ಸಂಪೂರ್ಣ ಚಾರ್ಜ್‌ನಲ್ಲಿ 456 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ.
ಈ ಎಕ್ಸ್‌ಯುವಿ400 ಎಸ್‌ಯುವಿಯಲ್ಲಿ 5 ಜನರು ಆರಾಮದಾಯಕವಾಗಿ ಪ್ರಯಾಣಿಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (10.25-ಇಂಚು), ಡುಯಲ್ ಜೋನ್ ಎಸಿ, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

ಮಹೀಂದ್ರಾ ಥಾರ್ 3-ಡೋರ್ (Mahindra Thar 3-Door) ಕೂಡ ಪ್ರಖ್ಯಾತ ಆಫ್-ರೋಡ್ ಎಸ್‌ಯುವಿಯಾಗಿದ್ದು, ಒಟ್ಟು 1.5 ಲಕ್ಷದವರೆಗೆ ಹಣಕಾಸಿನ ಪ್ರಯೋಜನಗಳನ್ನು ಪಡೆದಿದೆ. ಇದರೊಳಗೆ ರೂ.1 ಲಕ್ಷವರೆಗೆ ನಗದು ರಿಯಾಯಿತಿಯೇ ಇದೆ. ಈ ಕಾರು ರೂ.11.35 ರಿಂದ ರೂ.17.60 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ.
ಈ ಥಾರ್ ವಿವಿಧ ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 1.5-ಲೀಟರ್ ಡೀಸೆಲ್ ಎಂಜಿನ್ 119 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 300 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸುತ್ತಿದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 2-ಲೀಟರ್ ಡೀಸೆಲ್ ಎಂಜಿನ್ 132 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 300 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಹೊರಹಾಕುತ್ತದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಮತ್ತೊಂದು 2-ಲೀಟರ್ ಪೆಟ್ರೋಲ್ ಎಂಜಿನ್ 152 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 300 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಥಾರ್ 3-ಡೋರ್ ಎಸ್‌ಯುವಿಯಲ್ಲಿ 4 ಮಂದಿ ಓಡಾಟ ನಡೆಸಬಹುದು.
ನೂತನ ಎಸ್‌ಯುವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಮತ್ತು 4-ಸ್ಪೀಕರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಹೊಂದಿದೆ.
ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನಗಳು ನಗರದಿಂದ ನಗರಕ್ಕೆ ಬೇರೆಯಾಗಿರಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








