Mahindra: ಮಹೀಂದ್ರಾದ ಏಕೈಕ ಎಲೆಕ್ಟ್ರಿಕ್ ಕಾರಿಗೆ 3 ಲಕ್ಷ ಡಿಸ್ಕೌಂಟ್.. 456 Km ರೇಂಜ್.. 5 ಸೀಟರ್
ಭಾರತದ ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಮಹೀಂದ್ರಾ (Mahindra) ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಸ್ಕಾರ್ಪಿಯೋ ಎಕ್ಸ್‌ಯುವಿ700, ಥಾರ್, ಎಕ್ಸ್‌ಯುವಿ 3 ಎಕ್ಸ್ಒ ಸೇರಿದಂತೆ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವುಗಳು ನವೀನ ಶೈಲಿಯ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಈ ಸೆಪ್ಟೆಂಬರ್‌ನಲ್ಲಿ (2024) ಬೆಂಗಳೂರಿನ ಆಯ್ದ ಡೀಲರ್‌ಶಿಪ್‌ಗಳಲ್ಲಿ ಕಂಪನಿಯ ಏಕೈಕ ಎಲೆಕ್ಟ್ರಿಕ್ ಕಾರು ಎಕ್ಸ್‌ಯುವಿ400 (Xuv400) ಅತಿ ಹೆಚ್ಚಿನ ಡಿಸ್ಕೌಂಟ್ ಆಫರ್ ಹೊಂದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮಹೀಂದ್ರಾ ಎಕ್ಸ್‌ಯುವಿ400 ಇವಿ (Mahindra XUV400 EV) ಬರೋಬ್ಬರಿ 3 ಲಕ್ಷದವರೆಗೆ ರಿಯಾಯಿತಿಯನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಕಾರು ಅತ್ಯಂತ ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ರೂ.15.49 ಲಕ್ಷದಿಂದ ರೂ.19.39 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಇಸಿ ಪ್ರೊ (EC Pro) ಹಾಗೂ ಇಎಲ್ ಪ್ರೊ (EL Pro) ಎಂಬ 2 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಎಲೆಕ್ಟ್ರಿಕ್ ಕಾರಿನಲ್ಲಿ 5 ಜನರು ಸಂಚರಿಸಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 378 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. ಆರ್ಕ್ಟಿಕ್ ಬ್ಲೂ, ಎವರೆಸ್ಟ್ ವೈಟ್, ಗ್ಯಾಲಕ್ಸಿ ಗ್ರೇ, ನಾಪೋಲಿ ಬ್ಲಾಕ್ ಮತ್ತು ನೆಬ್ಯುಲಾ ಬ್ಲೂ ಸೇರಿದಂತೆ ಹಲವು ಬಣ್ಣಗಳೊಂದಿಗೂ (ಕಲರ್) ಲಭ್ಯವಿದೆ.
ನೂತನ ಮಹೀಂದ್ರಾ ಎಕ್ಸ್‌ಯುವಿ400 ಇವಿ 34.5 ಕೆಡಬ್ಲ್ಯೂಹೆಚ್ ಹಾಗೂ 39.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ ಕ್ರಮವಾಗಿ 375 ರಿಂದ 456 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಈ ಕಾರಿನಲ್ಲಿರುವ ಬ್ಯಾಟರಿ 50 ಕೆಡಬ್ಲ್ಯೂ ಡಿಸಿ ಫಾಸ್ಟ್ ಚಾರ್ಜರ್ ಬಳಕೆಯಲ್ಲಿ 50 ನಿಮಿಷಗಳಲ್ಲಿ ಪೂರ್ತಿಯಾಗಿ ಚಾರ್ಜ್ ಆಗುತ್ತದೆ.

ಈ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಡುಯಲ್ ಜೋನ್ ಎಸಿ, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮಹೀಂದ್ರಾ ಎಕ್ಸ್‌ಯುವಿ400 ಇವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ಟಾಟಾ ನೆಕ್ಸಾನ್ ಇವಿ (Tata Nexon EV) ನೇರ ಪ್ರತಿಸ್ಪರ್ಧಿಯಾಗಿದೆ.
ಮಹೀಂದ್ರಾ ಥಾರ್ 3-ಡೋರ್ (Mahindra Thar 3-Door) ಆಫ್-ರೋಡ್ ಎಸ್‌ಯುವಿ ಕೂಡ ರೂ.1.5 ಲಕ್ಷವರೆಗೆ ರಿಯಾಯಿತಿಯನ್ನು ಪಡೆದಿದೆ. ಈ ಕಾರು ರೂ.11.35 ಲಕ್ಷದಿಂದ ರೂ.17.60 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಹೊಂದಿದೆ. ವಿಶೇಷ ಸೂಚನೆ: ಈ ರಿಯಾಯಿತಿ ಪ್ರಯೋಜನಗಳು ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ, ನಗರದಿಂದ ನಗರಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications