Mahindra: ಸಿಂಹಪಾಲು ಪಡೆದ ಈ ಡೀಸೆಲ್ ಕಾರು.. ಕೂಡು ಕುಟುಂಬಕ್ಕೆ ಸೂಕ್ತ, 17 Km ಮೈಲೇಜ್
ಭಾರತದಲ್ಲಿ ಟಾಟಾ ಮೋಟಾರ್ಸ್‌ನಂತೆ ಮಹೀಂದ್ರಾ (Mahindra) ಕೂಡ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಹಳ್ಳಿಯಿಂದ ದಿಲ್ಲಿವರೆಗೆ ಖ್ಯಾತಿಗಳಿಸಿದೆ. ಕಂಪನಿಯು ಮಾರಾಟಗೊಳಿಸುವ ಎಸ್‍ಯುವಿಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಅದರಲ್ಲೂ ಡೀಸೆಲ್ ಚಾಲಿತ ಕಾರುಗಳು ದಿನದಿಂದ ದಿನಕ್ಕೆ ಭಾರೀ ಬೇಡಿಕೆಯನ್ನು ಪಡೆದುಕೊಳ್ಳುತ್ತಿದ್ದು, ಎಕ್ಸ್‌ಯುವಿ700 (XUV700) ಎಸ್‍ಯುವಿಯನ್ನು ಮನೆಗೆ ತರಲು ಖರೀದಿದಾರರೂ ತುದಿಗಾಲಿನಲ್ಲಿ ನಿಂತಿದ್ದಾರೆ. ಬನ್ನಿ.. ಆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ಕಳೆದ ತಿಂಗಳು (ಮೇ 2024) ಮಹೀಂದ್ರಾ ಕಂಪನಿ ಒಟ್ಟು 5,008 ಯುನಿಟ್ 'ಎಕ್ಸ್‌ಯುವಿ700' ಕಾರುಗಳನ್ನು ಮಾರಾಟ ಮಾಡಿದೆ. ಈ ಅಂಕಿಸಂಖ್ಯೆಯಲ್ಲಿ ಡೀಸೆಲ್ ರೂಪಾಂತರ (ವೇರಿಯೆಂಟ್)ಗಳು 3,845 ಯುನಿಟ್ ಇದ್ದು, ಪೆಟ್ರೋಲ್ ಆವೃತ್ತಿಗಳು 1,163 ಯುನಿಟ್‌ಗೆ ಸೀಮಿತವಾಗಿವೆ. ಅಂದರೆ ಸರಿ ಸುಮಾರು ಶೇಕಡ 77% ಡೀಸೆಲ್ ಮಾದರಿಗಳನ್ನೇ ಮಾರಲಾಗಿದೆ. 2023ರ ಮೇನಲ್ಲಿ ಡೀಸೆಲ್ ಹಾಗೂ ಪೆಟ್ರೋಲ್ ರೂಪಾಂತರಗಳನ್ನು ಕ್ರಮವಾಗಿ 3,739 ಮತ್ತು 1,506 ಯುನಿಟ್ ಮಾರಾಟ ಮಾಡಲಾಗಿತ್ತು.

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಎಸ್‍ಯುವಿ ರೂ.13.99 ಲಕ್ಷದಿಂದ ರೂ.26.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು ಆಕರ್ಷಕವಾದ ವಿನ್ಯಾಸ (ಡಿಸೈನ್)ವನ್ನು ಪಡೆದಿದೆ. ಎಂಎಕ್ಸ್, ಎಎಕ್ಸ್, ಎಎಕ್ಸ್3, ಎಎಕ್ಸ್5 ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಎವರೆಸ್ಟ್ ವೈಟ್, ಮಿಡ್ನೈಟ್ ಬ್ಲಾಕ್, ನಪೋಲಿ ಬ್ಲಾಕ್ ಒಳಗೊಡಂತೆ ಹಲವು ಬಣ್ಣಗಳನ್ನು ಸಹ ಒಳಗೊಂಡಿದೆ.
ಹೊಸ ಮಹೀಂದ್ರಾ ಎಕ್ಸ್‌ಯುವಿ700 ಕಾರು ಎರಡು ಪವರ್‌ಟ್ರೇನ್‌ನೊಂದಿಗೆ ದೊರೆಯುತ್ತದೆ. ಇದರ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 200 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 380 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 2.2-ಲೀಟರ್ ಡೀಸೆಲ್ ಎಂಜಿನ್ 185 ಪಿಎಸ್ ಪವರ್ ಹಾಗೂ 450 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

ಈ ಎಸ್‍ಯುವಿಯು ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೆ ಲಭ್ಯವಿದೆ. FWD (ಫ್ರಂಟ್ ವೀಲ್ ಡ್ರೈವ್) ಮತ್ತು AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದ್ದು, 17 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 5, 6 ಮತ್ತು 7 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಲಭ್ಯವಿದೆ.
ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಯು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6-ವೇ ಪವರ್ ಡ್ರೈವರ್ ಸೀಟ್, 12-ಸ್ಪೀಕರ್ ಆಡಿಯೊ ಸಿಸ್ಟಮ್, ಸನ್‌ರೂಫ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ಬಿಲ್ಟ್-ಇನ್ ಅಲೆಕ್ಸಾ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. 7 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 - ಡಿಗ್ರಿ ಕ್ಯಾಮೆರಾ, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಪಡೆದಿದೆ. ಎಕ್ಸ್‌ಯುವಿ700ಗೆ ಹ್ಯುಂಡೈ ಅಲ್ಕಾಜರ್, ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ, ಟಾಟಾ ಹ್ಯಾರಿಯರ್, ಹ್ಯುಂಡೈ ಕ್ರೆಟಾ ಎಸ್‍ಯುವಿಗಳು ಪ್ರಬಲ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications