Mahindra: ಈ ಫ್ಯಾಮಿಲಿ ಕಾರಿನ ಬೆಲೆ ಭಾರಿ ಇಳಿಕೆ.. 17 ಕಿ.ಮೀ ಮೈಲೇಜ್, 7 ಜನ ಹೋಗಬಹುದು!

ಮಹೀಂದ್ರಾ (Mahindra) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ ಶೈಲಿಯ ವಿನ್ಯಾಸ ಮತ್ತು ಆಕರ್ಷಕ ವೈಶಿಷ್ಟ್ಯ ಹೊಂದಿರುವ ವಿವಿಧ ಎಸ್‍ಯುವಿಗಳನ್ನು (ಸ್ಪೋರ್ಟ್ ಯುಟಿಲಿಟಿ ವೆಹಿಕಲ್) ಮಾರಾಟ ಮಾಡುತ್ತಿದೆ. ಗ್ರಾಹಕರು ಸಹ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ, ಜನಪ್ರಿಯ ಫ್ಯಾಮಿಲಿ ಕಾರಾಗಿರುವ ಎಕ್ಸ್‌ಯುವಿ700ನ ಆಯ್ದ ವಿವಿಧ ರೂಪಾಂತರಗಳ ಬೆಲೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಡಿಮೆ ಮಾಡಿದೆ ಎಂದು ಬುಧವಾರ ವರದಿಯಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ನೂತನ ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಎಸ್‍ಯುವಿಯ ಎಎಕ್ಸ್5 ಡೀಸೆಲ್ ಎಟಿ 7ಎಸ್ ರೂಪಾಂತರದ ಬೆಲೆಯನ್ನು ರೂ.70,000 ಕಡಿತಗೊಳಿಸಲಾಗಿದೆ. ಎಎಕ್ಸ್5 ಪೆಟ್ರೋಲ್ ಎಂಟಿ 7ಎಸ್, ಎಎಕ್ಸ್5 ಪೆಟ್ರೋಲ್ ಎಂಟಿ 7ಎಸ್ ಮತ್ತು ಎಎಕ್ಸ್5 ಡೀಸೆಲ್ ಎಂಟಿ 7ಎಸ್ ರೂಪಾಂತರಗಳ ದರವನ್ನು ರೂ.50,000ರವರೆಗೆ ಇಳಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Mahindra XUV700 Car Price Cut Details

ಎಎಕ್ಸ್3 ಡೀಸೆಲ್ ಎಟಿ 7ಎಸ್ ಮತ್ತು ಎಎಕ್ಸ್5 ಡೀಸೆಲ್ ಎಟಿ 5ಎಸ್ ರೂಪಾಂತರಗಳ (ವೇರಿಯೆಂಟ್) ದರವನ್ನು ರೂ.20,000 ಕಡಿಮೆಗೊಳಿಸಲಾಗಿದೆ ಎನ್ನಲಾಗಿದೆ. ಪ್ರಸ್ತುತ ದೇಶೀಯವಾಗಿ ಖರೀದಿಗೆ ಲಭ್ಯವಿರುವ 'ಎಕ್ಸ್‌ಯುವಿ700' ಎಸ್‍ಯುವಿ ರೂ.13.99 ಲಕ್ಷದಿಂದ ರೂ.26.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಕಳೆದ ತಿಂಗಳು ಗರಿಷ್ಠ ಶ್ರೇಣಿ ರೂಪಾಂತರಗಳಾಗಿರುವ (ಟಾಪ್ ಎಂಡ್ ವೇರಿಯೆಂಟ್) ಎಎಕ್ಸ್7 ಮತ್ತು ಎಎಕ್ಸ್7ಎಲ್ ದರವನ್ನು ರೂ.2.2 ಲಕ್ಷ ಇಳಿಕೆ ಮಾಡಲಾಗಿತ್ತು.

ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿ ಎರಡು ಪವರ್‌ಟ್ರೇನ್‌ ಆಯ್ಕೆಯನ್ನು ಹೊಂದಿದೆ. ಇದರ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 200 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 380 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 2.2-ಲೀಟರ್ ಡೀಸೆಲ್ ಎಂಜಿನ್ 185 ಪಿಎಸ್ ಶಕ್ತಿ ಮತ್ತು 450 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Mahindra XUV700 Car Price Cut Details

ಈ ಕಾರು ರೂಪಾಂತರಗಳಿಗೆ ಅನ್ವಯ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೆ ದೊರೆಯುತ್ತದೆ. ಎಫ್‌ಡಬ್ಲ್ಯೂಡಿ (ಫ್ರಂಟ್ ವೀಲ್ ಡ್ರೈವ್) ಮತ್ತು ಎಡಬ್ಲ್ಯೂಡಿ (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. 17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 5, 6 ಮತ್ತು 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿ ಎವರೆಸ್ಟ್ ವೈಟ್, ಮಿಡ್ನೈಟ್ ಬ್ಲಾಕ್, ನಪೋಲಿ ಬ್ಲಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೆ ಲಭ್ಯವಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 12-ಸ್ಪೀಕರ್‌ ಆಡಿಯೊ ಸಿಸ್ಟಮ್, ಸನ್‌ರೂಫ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ಬಿಲ್ಟ್-ಇನ್ ಅಲೆಕ್ಸಾ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳಿವೆ.

Mahindra XUV700 Car Price Cut Details

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. 7 ಏರ್‌ಬ್ಯಾಗ್‌, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಎಕ್ಸ್‌ಯುವಿ700ಗೆ ಹ್ಯುಂಡೈ ಅಲ್ಕಾಜರ್, ಟಾಟಾ ಸಫಾರಿ, ಟಾಟಾ ಹ್ಯಾರಿಯರ್, ಹ್ಯುಂಡೈ ಕ್ರೆಟಾ ಎಸ್‍ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, August 15, 2024, 9:30 [IST]
English summary
Mahindra xuv700 car price cut details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+