Mahindra: ಮಹೀಂದ್ರಾದ ಈ ಕಾರು 2,00,000 ಯುನಿಟ್ ತಯಾರಿಕೆ.. 33 ತಿಂಗಳಲ್ಲಿ ದೊಡ್ಡ ದಾಖಲೆ

ಭಾರತದ ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಮಹೀಂದ್ರಾ (Mahindra) ಮನೆ ಮಾತಾಗಿದೆ. ಕಂಪನಿ ಮಾರಾಟಗೊಳಿಸುವ ಸ್ಕಾರ್ಪಿಯೋ, ಎಕ್ಸ್‌ಯುವಿ700, ಬೊಲೆರೊ, ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿಗಳು ದೊಡ್ಡಮಟ್ಟದಲ್ಲಿ ಜನಪ್ರಿಯತೆ ಗಳಿಸಿವೆ. ಸದ್ಯ 'ಎಕ್ಸ್‌ಯುವಿ700' ಕಾರಿನ ತಯಾರಿಕೆಯಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಈ ಎಸ್‌ಯುವಿ ಬಿಡುಗಡೆಗೊಂಡು 33 ತಿಂಗಳಾಗಿದೆ. ಕಂಪನಿಯು ಬರೋಬ್ಬರಿ 2 ಲಕ್ಷ ಯುನಿಟ್ ಕಾರುಗಳನ್ನು ಉತ್ಪಾದಿಸಿದೆ. ಅದೇ 1 ಲಕ್ಷ ಯುನಿಟ್ ತಯಾರಿಸಲು 21 ತಿಂಗಳು ತೆಗೆದುಕೊಂಡಿತ್ತು.

ಡೀಸೆಲ್ ಕಾರುಗಳಿಗೆ ಭಾರೀ ಬೇಡಿಕೆ: ಮಹೀಂದ್ರಾ ಕಂಪನಿ ಮೇ ತಿಂಗಳು ಒಟ್ಟು 5,008 ಯುನಿಟ್ ಎಕ್ಸ್‌ಯುವಿ700 (XUV700) ಕಾರುಗಳನ್ನು ಮಾರಾಟಗೊಳಿಸಿದೆ. ಇದರಲ್ಲಿ ಡೀಸೆಲ್ ರೂಪಾಂತರ (ವೇರಿಯೆಂಟ್)ಗಳು 3,845 ಯುನಿಟ್ ಹಾಗೂ ಪೆಟ್ರೋಲ್ ರೂಪಾಂತರಗಳು 1,163 ಯುನಿಟ್‌ ಇದ್ದು, ಶೇಕಡ 77% ಡೀಸೆಲ್ ಕಾರುಗಳನ್ನೇ ಮಾರಾಟ ಮಾಡಲಾಗಿದೆ.

Mahindra XUV700 Car Production 2 Lakh Units In 33 Months Details

ಬೆಲೆ, ರೂಪಾಂತರಗಳು ಹಾಗೂ ಬಣ್ಣಗಳು: ನೂತನ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿ ರೂ.13.99 ಲಕ್ಷದಿಂದ ರೂ.26.99 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಎಂಎಕ್ಸ್, ಎಎಕ್ಸ್, ಎಎಕ್ಸ್3, ಎಎಕ್ಸ್5 ಸೇರಿದಂತೆ ಹಲವು ರೂಪಾಂತರಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಎವರೆಸ್ಟ್ ವೈಟ್, ಮಿಡ್ನೈಟ್ ಬ್ಲಾಕ್, ನಪೋಲಿ ಬ್ಲಾಕ್ ಒಳಗೊಡಂತೆ ಹಲವು ಬಣ್ಣಗಳನ್ನು ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ700 ಕಾರ್ಯಕ್ಷಮತೆ: ಈ ಕಾರು ಪೆಟ್ರೋಲ್ ಮತ್ತು ಡೀಸೆಲ್ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದರ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 200 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 380 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 2.2-ಲೀಟರ್ ಡೀಸೆಲ್ ಎಂಜಿನ್ 185 ಪಿಎಸ್ ಪವರ್ ಮತ್ತು 450 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Mahindra XUV700 Car Production 2 Lakh Units In 33 Months Details

ಹೊಚ್ಚ ಹೊಸ ಎಕ್ಸ್‌ಯುವಿ700 ಎಸ್‍ಯುವಿ ರೂಪಾಂತರಗಳಿಗೆ ತಕ್ಕಂತೆ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. AWD (ಆಲ್ ವೀಲ್ ಡ್ರೈವ್) ಹಾಗೂ FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದ್ದು, 17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 5, 6 ಮತ್ತು 7 ಆಸನ ವ್ಯವಸ್ಥೆಯಲ್ಲಿಯೂ ದೊರೆಯುತ್ತದೆ.

ವೈಶಿಷ್ಟ್ಯಗಳು: ಈ ಕಾರು ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 12-ಸ್ಪೀಕರ್‌ ಆಡಿಯೊ ಸಿಸ್ಟಮ್, 6-ವೇ ಪವರ್ ಡ್ರೈವರ್ ಸೀಟ್, ಸನ್‌ರೂಫ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್ ಹಾಗೂ ಅಲೆಕ್ಸಾ ಕನೆಕ್ಟಿವಿಟಿಯನ್ನು ಹೊಂದಿದೆ.

ಸುರಕ್ಷತಾ ವೈಶಿಷ್ಟ್ಯಗಳು: ನೂತನ ಮಹೀಂದ್ರಾ ಎಕ್ಸ್‌ಯುವಿ700 ಗ್ಲೋಬಲ್ ಎನ್‌ಸಿಎಪಿಯಿಂದ 5-ಸ್ಟಾರ್ ರೇಟಿಂಗ್ ಪಡೆದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸಲು 7 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಈ ಎಕ್ಸ್‌ಯುವಿ700ಗೆ ಹ್ಯುಂಡೈ ಕ್ರೆಟಾ, ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ, ಟಾಟಾ ಹ್ಯಾರಿಯರ್ ಎಸ್‍ಯುವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, June 27, 2024, 19:43 [IST]
English summary
Mahindra xuv700 car sales 2 lakh units 33 months details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+