Mahindra: ಬೆಂಗಳೂರಿನಲ್ಲಿ ಕಾಣಿಸಿಕೊಂಡಿತು ಹೊಸ ಮಹೀಂದ್ರಾ ಕಾರು.. ಯಾವುದು, ವಿಶೇಷತೆಗಳೇನು?

ಭಾರತದಲ್ಲಿ ಟಾಟಾದಂತೆ ಮಹೀಂದ್ರಾ ಕೂಡ ವಿಶ್ವಾಸಾರ್ಹ (Mahindra) ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಸದ್ಯ ಕಂಪನಿಯ ಜನಪ್ರಿಯ 'ಎಕ್ಸ್‌ಯುವಿ700' ಎಸ್‌ಯುವಿಗೆ ಭಾರೀ ಬೇಡಿಕೆಯಿದ್ದು, ಟಾಟಾ ಸಫಾರಿ ಹಾಗೂ ಜೀಪ್ ಕಂಪಾಸ್‌ಗಳಿಗೆ ಪ್ರಬಲ ಸ್ಪರ್ಧೆಯೊಡ್ಡಲು ಈ ಕಾರನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಫೇಸ್‌ಲಿಫ್ಟ್ ಮಾಡೆಲ್ (ನವೀಕರಣ ಮಾದರಿ) ಪ್ರಾಯೋಗಿಕ ಸಂಚಾರವನ್ನು ನಡೆಸುವ ಕಂಡುಬಂದಿದ್ದು, ಆ ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ.

ಪರೀಕ್ಷಾರ್ಥ ಓಡಾಟದ ವೇಳೆ ಕ್ಯಾಮೆರಾ ಕಣ್ಣಿಗೆ ಬಿದ್ದ ನೂತನ ಕಾರಿನ ಚಿತ್ರಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಇದು ಎಲೆಕ್ಟ್ರಿಕ್ ಎಸ್‌ಯುವಿಯಲ್ಲ ಎಂದು ಸುಲಭವಾಗಿ ಅರ್ಥವಾಗುತ್ತದೆ. ಹೊಸ ಕಾರು ಮಹೀಂದ್ರಾ ಎಕ್ಸ್‌ಯುವಿ700ನ 'ಫೇಸ್‌ಲಿಫ್ಟ್' ಆವೃತ್ತಿಯಾಗಿದೆ ಎಂಬುದು ಗೊತ್ತಾಗುತ್ತದೆ. ವರ್ಷಗಳಿಂದ ಖರೀದಿಗೆ ಸಿಗುವ 'ಎಕ್ಸ್‌ಯುವಿ700' ನಿರೀಕ್ಷೆಗೂ ಮೀರಿದ ಭರಪೂರ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Mahindra Xuv700 Facelift Car Spotted In Bengaluru Expected Features

ಈ ಕಾರು ಲೆವೆಲ್-2 ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಪನೋರಮಿಕ್ ಸನ್‌ರೂಫ್, ವೆಂಟಿಲೇಟೆಡ್ ಸೀಟ್ಸ್, ಕನೆಕ್ಟ್ದ್ ಕಾರ್ ಟೆಕ್ ಸೇರಿದಂತೆ ಹತ್ತಾರು ವೈಶಿಷ್ಟ್ಯ (ಫೀಚರ್)ಗಳನ್ನು ಹೊಂದಿದೆ. 'ಫೇಸ್‌ಲಿಫ್ಟ್' ಮಾದರಿಯು ಇದಕ್ಕಿಂತ ಅತ್ಯುತ್ತಮವಾಗಿರಲಿದೆ ಎಂದು ಅಂದಾಜಿಸಲಾಗಿದೆ. ವಿಶೇಷವಾಗಿ ADAS (ಎಡಿಎಎಸ್) ವೈಶಿಷ್ಟ್ಯವು ಮತ್ತಷ್ಟು ಬಲವಾಗಿರಲಿದೆ ಎನ್ನಲಾಗಿದೆ. ಜೊತೆಯಲ್ಲಿ ಹೊಸದಾದ ಸ್ಟೀರಿಂಗ್ ವೀಲ್ ಮತ್ತು ಎಸಿ ಕಂಟ್ರೋಲ್ ಪಡೆದಿರುವ ಸಾಧ್ಯತೆಯಿದೆ.

ನೂತನ ಮಹೀಂದ್ರಾ ಎಕ್ಸ್‌ಯುವಿ700 ಫೇಸ್‌ಲಿಫ್ಟ್ (Mahindra XUV700 Facelift) ಎಸ್‌ಯುವಿಯು ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರಬಹುದು. ಬಹುತೇಕ ಹಬ್ಬದ ಋತುವಿನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದ್ದು, ಸ್ಪರ್ಧಾತ್ಮಕ ಬೆಲೆಯನ್ನು ಪಡೆದಿರಲಿದೆ ಎನ್ನಲಾಗಿದೆ. ಆದಾಗ್ಯೂ ಕಂಪನಿ ಕಡೆಯಿಂದ ಹೊಸ ಕಾರಿನ ಕುರಿತಂತೆ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.

ಪ್ರಸ್ತುತ ದೇಶೀಯವಾಗಿ ಸಿಗುವ ಮಹೀಂದ್ರಾ ಎಕ್ಸ್‌ಯುವಿ700 ಕಾರು, ರೂ.13.99 ರಿಂದ ರೂ.26.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. FWD (ಫ್ರಂಟ್ ವೀಲ್ ಡ್ರೈವ್) ಮತ್ತು AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದ್ದು, 17 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಈ ಎಕ್ಸ್‌ಯುವಿ700 ಎಸ್‌ಯುವಿ 5, 6 ಹಾಗೂ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ದೊರೆಯುತ್ತದೆ. ಎವರೆಸ್ಟ್ ವೈಟ್, ಮಿಡ್ನೈಟ್ ಬ್ಲಾಕ್, ನಪೋಲಿ ಬ್ಲಾಕ್ ಬಣ್ಣಗಳನ್ನು ಹೊಂದಿದ್ದು, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6-ವೇ ಪವರ್ ಡ್ರೈವರ್ ಸೀಟ್, 12-ಸ್ಪೀಕರ್‌, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಮಹೀಂದ್ರಾ ಎಕ್ಸ್‌ಯುವಿ700 ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 7 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 - ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಕಾರಿಗೆ ಹ್ಯುಂಡೈ ಅಲ್ಕಾಜರ್, ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ, ಟಾಟಾ ಹ್ಯಾರಿಯರ್, ಹ್ಯುಂಡೈ ಕ್ರೆಟಾ ದೊಡ್ಡ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, June 11, 2024, 19:40 [IST]
English summary
Mahindra xuv700 facelift car spotted bengaluru expected features
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+