ಜನಪ್ರಿಯ ಮಹೀಂದ್ರಾ XUV700 ಎಸ್‍ಯುವಿ ಮೇಲೆ ಭರ್ಜರಿ ಡಿಸ್ಕೌಂಟ್: ಈಗ ಬಿಟ್ಟರೆ ಮತ್ತೆ ಸಿಗಲ್ಲ!

ಭಾರತದಲ್ಲಿ ಟಾಟಾದಂತೆ ಮಹೀಂದ್ರಾ ಕೂಡ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದ್ದು, ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಸದ್ಯ, ಕಂಪನಿಯ ಜನಪ್ರಿಯ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಇದೀಗ ಮಹೀಂದ್ರಾ XUV700 ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಸಫಾರಿ ಮತ್ತು MG ಹೆಕ್ಟರ್ ಪ್ಲಸ್‌ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ. 2023ರ ಮಹೀಂದ್ರಾ XUV700 ಎಸ್‍ಯುವಿಯ ಡೀಸೆಲ್-MT, ಡೀಸೆಲ್-AT, ಮತ್ತು ಪೆಟ್ರೋಲ್-MT ನಲ್ಲಿ AX5 7-ಸೀಟರ್ ಹೊರತುಪಡಿಸಿ ಎಲ್ಲಾ ರೂಪಾಂತರಗಳ ಮೇಲೆ ರೂ. 1.5 ಲಕ್ಷದ ಫ್ಲಾಟ್ ನಗದು ರಿಯಾಯಿತಿಯನ್ನು ಘೋಷಿಸಿದೆ.

ಇನ್ನು ಮಹೀಂದ್ರಾ XUV700 (Mahindra XUV700) ಎಸ್‍ಯುವಿಯು X5 ರೂಪಾಂತರದ ಮೇಲೆ ರೂ 1.3 ಲಕ್ಷ ರಿಯಾಯಿತಿಯನ್ನು ಹೊಂದಿವೆ. ಈ ಮಹೀಂದ್ರಾ XUV700 ಎಸ್‍ಯುವಿ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.13.99 ಲಕ್ಷ ಮತ್ತು ರೂ 27.14 ಲಕ್ಷವಾಗಿದೆ. ಇತ್ತೀಚೆಗೆ, ಮಹೀಂದ್ರಾ XUV700 ಸರಣಿಯನ್ನ್ನು AX5 ಸೆಲೆಕ್ಟ್ 7-ಸೀಟರ್ ಮತ್ತು MX 7-ಸೀಟರ್‌ಗಳಂತಹ ಹೊಸ ರೂಪಾಂತರಗಳೊಂದಿಗೆ ವಿಸ್ತರಿಸಿದೆ.

Mahindra XUV700

ಈ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ 2 ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದ್ದು, ಇದರಲ್ಲಿ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 200 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 380 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 2.2-ಲೀಟರ್ ಡೀಸೆಲ್ ಎಂಜಿನ್ 185 ಪಿಎಸ್ ಪವರ್ ಮತ್ತು 450 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಈ ಕಾರು, ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಯೂ ಲಭ್ಯವಿದೆ. FWD (ಫ್ರಂಟ್ ವೀಲ್ ಡ್ರೈವ್) ಹಾಗೂ AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದ್ದು, 17 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. ಜೊತೆಗೆ 5, 6 ಹಾಗೂ 7 ಆಸನ ಆಯ್ಕೆಯಲ್ಲಿಯೂ ಕೂಡ ಸಿಗುತ್ತದೆ.

Mahindra XUV700

ಮಹೀಂದ್ರಾ ಎಕ್ಸ್‌ಯುವಿ700 ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, ಎವರೆಸ್ಟ್ ವೈಟ್, ಮಿಡ್ನೈಟ್ ಬ್ಲಾಕ್, ನಪೋಲಿ ಬ್ಲಾಕ್ ಬಣ್ಣಗಳೊಂದಿಗೂ ದೊರೆಯುತ್ತದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25 ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6 - ವೇ ಪವರ್ ಡ್ರೈವರ್ ಸೀಟ್, 12 ಸ್ಪೀಕರ್‌, ಸನ್‌ರೂಫ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ಫೀಚರ್ಸ್ ಗಳನ್ನು ಒಳಗೊಂಡಿದೆ.

ಈ ಮಹೀಂದ್ರಾ ಎಕ್ಸ್‌ಯುವಿ700 ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 - ಡಿಗ್ರಿ ಕ್ಯಾಮೆರಾ, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಹೊಂದಿದ್ದು, ನಿರ್ಭಿತಿಯಿಂದ ಪ್ರಯಾಣಿಸಲು ನೆರವಾಗುತ್ತದೆ.

Mahindra XUV700

ಇನ್ನು ಎಸ್‌ಯುವಿಗೆ ಹ್ಯುಂಡೈ ಅಲ್ಕಾಜರ್, ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ, ಟಾಟಾ ಹ್ಯಾರಿಯರ್, ಹ್ಯುಂಡೈ ಕ್ರೆಟಾ ಮಾದರಿಗಳು ಪ್ರಬಲ ಎದುರಾಳಿಯಾಗಿವೆ. ಪ್ರಸ್ತುತ ಎಕ್ಸ್‌ಯುವಿ700 ಕಾರನ್ನು ಬೇಗನೇ ಮನೆಗೆ ತರಬಹುದಾಗಿರುವುದರಿಂದ ಬಹುತೇಕರ ಆಯ್ಕೆಯ ವಾಹನವಾಗಬಹುದು. ನಿಮ್ಮ ಗಮನಕ್ಕೆ.. ಈ ಕಾಯುವಿಕೆ ಅವಧಿ ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, June 5, 2024, 8:30 [IST]
English summary
Mahindra xuv700 gets discount on my2023 stocks details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+