ಮಾರಾಟದಲ್ಲಿ ಬಿರುಗಾಳಿ: 7-ಸೀಟರ್ ಅತ್ಯುತ್ತಮ ಫ್ಯಾಮಿಲಿ ಎಸ್‍ಯುವಿ... 17 ಕಿ.ಮೀ ಮೈಲೇಜ್

ಜನಪ್ರಿಯ ಸ್ವದೇಶಿ ಬ್ರ್ಯಾಂಡ್, ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಮಹೀಂದ್ರಾ (Mahindra) ಗುರುತಿಸಿಕೊಂಡಿದೆ. ಕಂಪನಿಯು ಮಾರಾಟಗೊಳಿಸುವ ಕಾರುಗಳು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಪಡೆದಿದ್ದು, ಗ್ರಾಹಕರು ಸಹ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಅದರಲ್ಲೂ ಎಕ್ಸ್‌ಯುವಿ700 (XUV700) ಜನಪ್ರಿಯ ಎಸ್‍ಯುವಿಯಾಗಿದೆ. ನಿಮ್ಮ ಕುಟುಂಬಕ್ಕಾಗಿ ಹೊಚ್ಚ ಹೊಸ ಕಾರನ್ನು ತೆಗೆದುಕೊಳ್ಳಬೇಕು ಎಂದು ಯೋಚಿಸಿದ್ದೀರಾ.. ಹಾಗಾದರೆ, ಈ 'ಎಕ್ಸ್‌ಯುವಿ700' ಉತ್ತಮ ಆಯ್ಕೆಯಾಗಲಿದೆ. ಈ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಯು ಮಾಸ್ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್ ಗಳೊಂದಿಗೆ ಫ್ಯಾಮಿಲಿ ಜೊತೆಗೆ ಹೆಚ್ಚು ಯುವ ಗ್ರಾಹಕರನ್ನು ಸೆಳೆದಿದ್ದು, ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ.

ಕಳೆದ ತಿಂಗಳ ಮಾರಾಟದಲ್ಲಿ ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಎಸ್‍ಯುವಿಯು ಬೆಳವಣಿಗೆಯನ್ನು ಸಾಧಿಸಿದೆ. 2024ರ ಜುಲೈ ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ700 ಮಾದರಿಯ 7,769 ಯುನಿಟ್ ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ700 ಮಾದರಿಯ 6,176 ಯುನಿಟ್ ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.26 ರಷ್ಟು ಏರಿಕೆಯನ್ನು ಕಂಡಿದೆ.

Mahindra XUV700

ಎಂಜಿನ್: ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿ 2 ಪವರ್‌ಟ್ರೇನ್‌ನೊಂದಿಗೆ ಸಿಗುತ್ತದೆ. ಇದರ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 200 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 380 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 2.2-ಲೀಟರ್ ಡೀಸೆಲ್ ಎಂಜಿನ್ 185 ಪಿಎಸ್ ಶಕ್ತಿ ಮತ್ತು 450 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಈ ಎಕ್ಸ್‌ಯುವಿ700 ಎಸ್‍ಯುವಿ ರೂಪಾಂತರಗಳಿಗೆ ಅನ್ವಯ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೆ ಖರೀದಿಗೆ ಸಿಗುತ್ತದೆ. ಎಫ್‌ಡಬ್ಲ್ಯೂಡಿ (ಫ್ರಂಟ್ ವೀಲ್ ಡ್ರೈವ್) ಮತ್ತು ಎಡಬ್ಲ್ಯೂಡಿ (ಆಲ್ ವೀಲ್ ಡ್ರೈವ್) ತಂತ್ರಜ್ಞಾನ ಆಯ್ಕೆಯನ್ನು ಹೊಂದಿದೆ. ಜೊತೆಗೆ ಸರಿ ಸುಮಾರು 17 ಕಿ.ಮೀ ಮೈಲೇಜ್ ನೀಡುತ್ತದೆ.

Mahindra XUV700

ಬಣ್ಣಗಳು, ಆಸನ ಆಯ್ಕೆ: ಈ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿ ಎವರೆಸ್ಟ್ ವೈಟ್, ಮಿಡ್ನೈಟ್ ಬ್ಲಾಕ್, ನಪೋಲಿ ಬ್ಲಾಕ್ ಒಳಗೊಡಂತೆ ಹಲವು ಬಣ್ಣಗಳನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5, 6 ಅಥವಾ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಲಭ್ಯವಿದೆ. ವಾರಂತ್ಯ ಹಾಗೂ ರಜಾದಿನಗಳನ್ನು ಹೆಚ್ಚಿನ ಲಗೇಜ್ ಸಾಗಿಸಲು 240 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಫೀಚರ್ಸ್: ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿ ಅತ್ಯಾಧುನಿಕ ವೈಶಿಷ್ಟ್ಯವನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6-ವೇ ಪವರ್ ಡ್ರೈವರ್ ಸೀಟ್, 12-ಸ್ಪೀಕರ್‌ ಆಡಿಯೋ ಸಿಸ್ಟಮ್, ಸನ್‌ರೂಫ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ಬಿಲ್ಟ್-ಇನ್ ಅಲೆಕ್ಸಾ ಕನೆಕ್ಟಿವಿಟಿ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್ಸ್ ಪಡೆದಿದೆ.

Mahindra XUV700

ಸುರಕ್ಷತಾ ವೈಶಿಷ್ಟ್ಯಗಳು: ಈ ಕಾರು ಪ್ರಯಾಣಿಕರಿಗೆ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 7 ಏರ್‌ಬ್ಯಾಗ್‌, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಎಕ್ಸ್‌ಯುವಿ700ಗೆ ಹ್ಯುಂಡೈ ಅಲ್ಕಾಜರ್, ಟಾಟಾ ಹ್ಯಾರಿಯರ್, ಹ್ಯುಂಡೈ ಕ್ರೆಟಾ, ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ ಕಾರುಗಳು ದೊಡ್ಡ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, August 12, 2024, 8:30 [IST]
English summary
Mahindra xuv700 sales in july 2024 details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+