ಡೀಸೆಲ್ ಕಾರುಗಳು ಈ ಕಾರಣಕ್ಕೆ ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ.. ದೇಶದಲ್ಲಿ ಅವುಗಳಿಗೆ ಭವಿಷ್ಯ ಇದ್ಯಾ?

ವಿಶ್ವದಾದ್ಯಂತ ಹಲವು ದೇಶಗಳು ಡೀಸೆಲ್ (Diesel) ಕಾರುಗಳ ಮಾರಾಟವನ್ನು ಕಡಿಮೆಗೊಳಿಸಲು ಕಟ್ಟುನಿಟ್ಟಿನ ನಿಯಮ ಜಾರಿ ಮಾಡುತ್ತಿವೆ. ಮುಂದಿನ 5 ರಿಂದ 10 ವರ್ಷಗಳಲ್ಲಿ ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿವೆ. ಭಾರತದಲ್ಲಿ ನಡೆಯುತ್ತಿರುವ ಬೆಳವಣಿಗೆ ಗಮನಿಸಿದರೆ, ಕೆಲವೇ ವರ್ಷಗಳಲ್ಲಿ ಡೀಸೆಲ್ ಕಾರುಗಳು ಮಾರಾಟದಿಂದ ದೂರವಾಗುವಾಗುವ ಲಕ್ಷಣಗಳು ಗೋಚರಿಸುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಬಹುತೇಕ ರಾಜ್ಯಗಳು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಕಾರುಗಳ ಮಾರಾಟವನ್ನು ಉತ್ತೇಜಿಸಲು ಸಬ್ಸಿಡಿ ನೀಡುತ್ತೇವೆ. ಆದಾಗ್ಯೂ ಡೀಸೆಲ್ ಕಾರುಗಳ ಮಾರಾಟವನ್ನು ಪ್ರೋತ್ಸಾಹಿಸುವ ಯಾವುದೇ ಯೋಜನೆಗಳಿಲ್ಲ. ಇದರಿಂದ ಮುಂಬರುವ ವರ್ಷಗಳಲ್ಲಿ ಡೀಸೆಲ್ ಕಾರುಗಳ ಮಾರಾಟ ಸ್ಥಗಿತಗೊಂಡರೂ ಅಚ್ಚರಿಯಿಲ್ಲ ಎಂದು ಹೇಳಲಾಗಿದೆ.

ದೇಶೀಯ ಮಾರುಕಟ್ಟೆಯಲ್ಲಿ ಡೀಸೆಲ್ ಕಾರುಗಳ ಮಾರಾಟ ಮೇಲೆ ಹಲವು ನಿರ್ಬಂಧ ಹಾಗೂ ಹೆಚ್ಚಿನ ತೆರಿಗೆ ವಿಧಿಸಲಾಗುತ್ತದೆ. ಇದರ ಹೊರತಾಗಿ ಜನಪ್ರಿಯ ವಾಹನ ತಯಾರಕ ಕಂಪನಿಗಳಾದ ಟಾಟಾ, ಮಹೀಂದ್ರಾ, ಹ್ಯುಂಡೈ, ಟೊಯೊಟಾ ಹಾಗೂ ಕಿಯಾ ಸೇರಿದಂತೆ ಹಲವು ಕಂಪನಿಗಳು ಡೀಸೆಲ್ ಚಾಲಿತ ಕಾರುಗಳನ್ನು ಯಶಸ್ವಿಯಾಗಿವೆ ಮಾರಾಟ ಮಾಡುತ್ತಿವೆ.

Many Restrictions Diesel Cars Are Why Popular Details

ಪೆಟ್ರೋಲ್ ಕಾರುಗಳಿಗೆ ಹೋಲಿಕೆ ಮಾಡಿದರೆ, ಡೀಸೆಲ್ ಕಾರುಗಳ ಹೆಚ್ಚಿನ ಮೈಲೇಜ್ ನೀಡಬಲ್ಲವು. ಇದು ವಾಹನ ಮಾಲೀಕರಿಗೆ ಇಂಧನಕ್ಕೆ (Fuel) ಖರ್ಚು ಮಾಡುವ ಹಣವನ್ನು ಉಳಿತಾಯ ಮಾಡಲು ನೆರವಾಗುತ್ತದೆ. ಈ ಡೀಸೆಲ್ ಎಂಜಿನ್‌ನ್ನು ಒಳಗೊಂಡಿರುವ ಕಾರುಗಳು ಅಧಿಕ ಶಕ್ತಿ (Power) ಮತ್ತು ಪೀಕ್ ಟಾರ್ಕ್ ಹೊರಹಾಕುತ್ತವೆ. ಜೊತೆಗೆ ಡೀಸೆಲ್ ಎಂಜಿನ್ ದೀರ್ಘಕಾಲ ಬಾಳಿಕೆ ಬರುವುದರಿಂದ ಹಲವರು ಡೀಸೆಲ್ ಕಾರುಗಳ ಖರೀದಿಯತ್ತ ಸಾಕಷ್ಟು ಒಲವನ್ನು ಹೊಂದಿದ್ದಾರೆ.

ಡೀಸೆಲ್ ಕಾರುಗಳ ಎಂಜಿನ್ ಬಹಳಷ್ಟು ಶಕ್ತಿಯುತವಾಗಿರುತ್ತವೆ ಎಂಬ ಮಾತು ನಿಜ. ಆದರೂ ಪೆಟ್ರೋಲ್ ಚಾಲಿತ ಕಾರುಗಳಿಗಿಂತ ಹೆಚ್ಚಿನ ವಾಯು ಮಾಲಿನ್ಯ (Air Pollution) ಉಂಟು ಮಾಡುತ್ತಿವೆ. ದೊಡ್ಡ ಪ್ರಮಾಣದಲ್ಲಿ ಇಂಗಾಲದ ಡೈ ಆಕ್ಸೈಡ್ ಹೊರಬಿಡುವುದರಿಂದ ಮನುಷ್ಯರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ನಾನಾ ಕಾಯಿಲೆಗೆ ಗುರಿಯಾಗಬೇಕಾಗಿದೆ. ಇದೇ ಕಾರಣಕ್ಕೆ ಹೆಚ್ಚಿನ ವಾಯುಮಾಲಿನ್ಯವಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳ ಬಳಕೆಯನ್ನು ನಿಷೇಧಿಸಲಾಗಿದೆ.

ವಾಹನಗಳಿಂದ ಉಂಟಾಗುತ್ತಿರುವ ವಾಯುಮಾಲಿನ್ಯವನ್ನು ಕಡಿಮೆಗೊಳಿಸಲು ಕೇಂದ್ರ ಸರ್ಕಾರವು ಸಾಕಷ್ಟು ಶ್ರಮವಾಯಿಸುತ್ತಿದೆ. ಇದರಿಂದಾಗಿ ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್ (ಇಂಧನ + ಎಲೆಕ್ಟ್ರಿಕ್) ವಾಹನ ಬಳಕೆಯನ್ನು ಉತ್ತೇಜಿಸುತ್ತಿದ್ದು, ಹೆಚ್ಚಿನ ಸಬ್ಸಿಡಿ ನೀಡುತ್ತದೆ. ಹಳೆಯ ಕಂಪನಿಗಳೊಂದಿಗೆ ಹಲವು ಹೊಸ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ಕೈಜೋಡಿಸಿದ್ದು, ಕಳೆದ ಮೂರು ವರ್ಷದಲ್ಲಿ ನವೀನ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯ ಹೊಂದಿರುವ ವಿವಿಧ ಎಲೆಕ್ಟ್ರಿಕ್ ಸ್ಕೂಟರ್, ಬೈಕ್ ಹಾಗೂ ಕಾರುಗಳನ್ನು ಮಾರಾಟಕ್ಕೆ ತರುತ್ತಿವೆ.

ಈ ಹಿಂದೆ, ಅಧ್ಯಯನವೊಂದರ ಪ್ರಕಾರ, ಕರ್ನಾಟಕದಲ್ಲಿ ಎಲೆಕ್ಟ್ರಿಕ್ (ವಿದ್ಯುತ್ ಚಾಲಿತ) ವಾಹನಗಳ ನೋಂದಣಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಅಧಿಕಗೊಳುತ್ತಿದ್ದು, 2021ರಲ್ಲಿ ಇದ್ದ 80,000 ವಾಹನಗಳಿಗೆ ಹೋಲಿಕೆ ಮಾಡಿದರೆ, 2030ರ ವೇಳೆಗೆ ನಗರದಲ್ಲಿ 23 ಲಕ್ಷ ಎಲೆಕ್ಟ್ರಿಕ್ ಚಾಲಿತ ವಾಹನಗಳು ಇರಬಹುದೆಂದು ಅಂದಾಜಿಸಲಾಗಿದೆ.

ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ) ಅಂಕಿಅಂಶಗಳ ಪ್ರಕಾರ, ದೇಶದಲ್ಲಿಯೇ 'ಕರ್ನಾಟಕ' ಸಾರ್ವಜನಿಕ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವಲ್ಲಿ ಮುಂಚೂಣಿಯಲ್ಲಿದೆ. ಸರಿ ಸುಮಾರು 5,059 ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿದೆ. ಬೆಂಗಳೂರು ನಗರವೊಂದರಲ್ಲಿಯೇ 4,281 ಚಾರ್ಜಿಂಗ್ ಕೇಂದ್ರಗಳಿವೆ. ಸದ್ಯ, ಈ ಕೇಂದ್ರಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, August 19, 2024, 17:05 [IST]
English summary
Many restrictions diesel cars are why popular details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+