Maruti Suzuki: ನಾಳೆ ಆಲ್ಟೊ, ಎಸ್-ಪ್ರೆಸ್ಸೊ, ಸೆಲೆರಿಯೊ ಡ್ರೀಮ್ ಎಡಿಷನ್ ಕಾರುಗಳು ಬಿಡುಗಡೆ.. ರೂ.4.99 ಲಕ್ಷ ಬೆಲೆ

ಭಾರತದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ನೆಕ್ಸಾ (NEXA) ಹಾಗೂ ಅರೆನಾ (Arena) ಡೀಲರ್‌ಶಿಪ್ ಮೂಲಕ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದಿರುವ ಕಾರುಗಳನ್ನು ಮಾರಾಟಗೊಳಿಸುತ್ತಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಖರೀದಿಸುತ್ತಿದ್ದಾರೆ. ನಾಳೆ ದೇಶೀಯ ಮಾರುಕಟ್ಟೆಯಲ್ಲಿ ಅತ್ಯಂತ ಕಡಿಮೆ ಬೆಲೆಗೆ ನೂತನ ಆಲ್ಟೊ ಕೆ10, ಎಸ್-ಪ್ರೆಸ್ಸೊ ಹಾಗೂ ಸೆಲೆರಿಯೊ ಡ್ರೀಮ್ ಎಡಿಷನ್ ಹ್ಯಾಚ್‌ಬ್ಯಾಕ್‌ಗಳನ್ನು ಬಿಡುಗಡೆಗೊಳಿಸಲಿದೆ. ಬನ್ನಿ.. ಆ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

ಮಾರುತಿ ಸುಜುಕಿಯು ಎಂಟ್ರಿ ಲೆವೆಲ್ (ಆರಂಭಿಕ ಆವೃತ್ತಿ) ಹ್ಯಾಚ್‌ಬ್ಯಾಕ್‌ಗಳ ಮಾರಾಟವನ್ನು ಹೆಚ್ಚಿಸಲು ತೀರ್ಮಾನಿಸಿದೆ. ಅದರ ಭಾಗವಾಗಿ ನಾಳೆ (ಜೂನ್ 4, ಮಂಗಳವಾರ) ಹೊಚ್ಚ ಹೊಸ ಆಲ್ಟೊ ಕೆ10, ಎಸ್-ಪ್ರೆಸ್ಸೊ, ಸೆಲೆರಿಯೊದ ಡ್ರೀಮ್ ಎಡಿಷನ್ (Dream Edition) ಮಾದರಿ (ಮಾಡೆಲ್)ಗಳನ್ನು ಪರಿಚಯಿಸಲಿದೆ. ಈ ಕಾರುಗಳು ರೂ.4.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, ಜೂನ್ ತಿಂಗಳಾದ್ಯಂತ ಮಾತ್ರ ಖರೀದಿಗೆ ಲಭ್ಯವಿರಲಿವೆ.

Maruti Suzuki alto K10 S-Presso Celerio Dream Edition Cars Launch Tomorrow Price And Expected Features

ಜೂನ್ 1ರಿಂದಲೇ ನೂತನ ಆಲ್ಟೊ, ಎಸ್-ಪ್ರೆಸ್ಸೊ ಮತ್ತು ಸೆಲೆರಿಯೊ ಡ್ರೀಮ್ ಎಡಿಷನ್ ಹ್ಯಾಚ್‌ಬ್ಯಾಕ್‌ಗಳ ಬುಕ್ಕಿಂಗ್ ಶುರುವಾಗಿದ್ದು, ಆಸಕ್ತ ಗ್ರಾಹಕರು ಕಂಪನಿಯ ಅಧಿಕೃತ ವೆಬ್‌ಸೈಟ್‌ ಅಥವಾ ಸಮೀಪದ ಡೀಲರ್‌ಶಿಪ್‌ಗೆ ಭೇಟಿ ನೀಡಿ ಕಾಯ್ದಿರಿಸಬಹುದು. ಈ ಕಾರುಗಳು ಸ್ಮಾರ್ಟ್‌ಫೋನ್ ಕನೆಕ್ಟಿವಿಯೊಂದಿಗೆ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ.

ಹೊಸ ಮಾರುತಿ ಸುಜುಕಿ ಆಲ್ಟೊ ಕೆ10 (Alto K10) ಎಸ್-ಪ್ರೆಸ್ಸೊ (S-Presso) ಹಾಗೂ ಸೆಲೆರಿಯೊ (Celerio) ಡ್ರೀಮ್ ಎಡಿಷನ್ ಆವೃತ್ತಿಗಳು, 1.0-ಲೀಟರ್, 3-ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 66 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 89 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿರಲಿವೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆಯಿದೆ.

Maruti Suzuki alto K10 S-Presso Celerio Dream Edition Cars Launch Tomorrow Price And Expected Features

ಸದ್ಯ ದೇಶೀಯವಾಗಿ ಖರೀದಿಗೆ ಲಭ್ಯವಿರುವ ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌, ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್‌ನ್ನು ಪಡೆದಿದ್ದು, ಪೆಟ್ರೋಲ್ ಮಾದರಿಗಳು 24.39 - 24.90 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ (ವೇರಿಯೆಂಟ್)ಗಳು 33.40 - 33.85 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ರೂ.5.37 ಲಕ್ಷದಿಂದ ರೂ.7.09 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಸಿಗುತ್ತದೆ. ಇದು ಸಹ ಪೆಟ್ರೋಲ್/ ಸಿಎನ್‌ಜಿ ಪವರ್‌ಟ್ರೇನ್‌ನ್ನು ಹೊಂದಿದ್ದು, 25.24 ರಿಂದ 34.43 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್, ಕೀಲೆಸ್ ಎಂಟ್ರಿ, ಡುಯಲ್ ಫ್ರಂಟ್ ಏರ್ ಬ್ಯಾಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

Maruti Suzuki alto K10 S-Presso Celerio Dream Edition Cars Launch Tomorrow Price And Expected Features

ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ರೂ.4.26 ಲಕ್ಷದಿಂದ ರೂ.6.12 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದ್ದು, 24.12 - 32.73 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀಲೆಸ್ ಎಂಟ್ರಿ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, June 3, 2024, 13:29 [IST]
English summary
Maruti alto k10 s presso celerio dream edition cars launch tomorrow price and expected features
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+