ರೂ.3.99 ಲಕ್ಷ ಆರಂಭಿಕ ಬೆಲೆ... 34 ಕಿ.ಮೀ ಮೈಲೇಜ್, ಪುಟ್ಟ ಕುಟುಂಬಕ್ಕೆ ಕಡಿಮೆ ಬಜೆಟ್ ಕಾರುಗಳಿವು!
ಭಾರತದಲ್ಲಿ ಸಣ್ಣ ಕುಟುಂಬಗಳ ಸಂಖ್ಯೆ ಹೆಚ್ಚಿದ್ದು, ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗಲು ಕಾರು ತುಂಬಾ ಅಗತ್ಯವಾಗಿದೆ. ಸಾಮಾನ್ಯ ದಿನಗಳಲ್ಲಿ ಕೂಡ ಕಚೇರಿಗೆ ಹೋಗಲು ಅಥವಾ ಮಕ್ಕಳನ್ನು ಶಾಲೆಗೆ ಬಿಡಲು ಬಳಕೆ ಮಾಡಬಹುದು. ಹೊಸ ಕಾರುಗಳ ಬೆಲೆ ಸ್ವಲ್ಪ ದುಬಾರಿಯಾಗಿರುವುದರಿಂದ ಬಹುತೇಕರು ಕೊಂಡುಕೊಳ್ಳುವುದಕ್ಕೆ ಹಿಂದೇಟು ಹಾಕುತ್ತಾರೆ. ಆದಾಗ್ಯೂ ಮಾರುತಿ ಸುಜುಕಿ ಹಾಗೂ ರೆನಾಲ್ಟ್ ಕಂಪನಿಗಳು ಬಜೆಟ್ ಬೆಲೆಯಲ್ಲಿ ಆಕರ್ಷಕ ವೈಶಿಷ್ಟ್ಯ ಮತ್ತು ಗರಿಷ್ಠ ಮೈಲೇಜ್ ನೀಡುವ ಕಾರುಗಳನ್ನು ಮಾರಾಟ ಮಾಡುತ್ತಿವೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರವನ್ನು ತಿಳಿಯೋಣ.
ಮೊದಲಿಗೆ ಜನಪ್ರಿಯ ಮಾರುತಿ ಸುಜುಕಿ ಆಲ್ಟೋ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್ ಕುರಿತು ಮಾತನಾಡೋಣ. ಈ ಕಾರು ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದ್ದು, ಪೆಟ್ರೋಲ್ ರೂಪಾಂತರ (ವೇರಿಯೆಂಟ್)ಗಳು 24.39 - 24.90 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 33.40 - 33.85 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.

ಈ ಆಲ್ಟೋ ಪುಟ್ಟ ಕಾರಾಗಿರುವುದರಿಂದ 4 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಇದು ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ, ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್ ಬಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಪಡೆದಿದೆ.
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki Wagon R) ಹ್ಯಾಚ್‌ಬ್ಯಾಕ್ ಕೂಡ ಸಣ್ಣ ಕುಟುಂಬಗಳಿಗೆ ಹೆಚ್ಚು ಸೂಕ್ತವಾಗಿದ್ದು, ರೂ.5.54 - ರೂ.7.38 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಸಿಗಲಿದ್ದು, ಪೆಟ್ರೋಲ್ ಆವೃತ್ತಿಗಳು 23.56 ರಿಂದ 24.43 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 34.05 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ. ಈ ಕಾರಿನಲ್ಲಿ 5 ಮಂದಿ ಸುಲಭವಾಗಿ ಓಡಾಟವನ್ನು ನಡೆಸಬಹುದು.

ನೂತನ ವ್ಯಾಗನ್ಆರ್ ಮಾದರಿಯು ಗ್ಯಾಲಂಟ್ ರೆಡ್, ಪೂಲ್‌ಸೈಡ್ ಬ್ಲೂ, ಸುಪೀರಿಯರ್ ವೈಟ್ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೆ ದೊರೆಯಲಿದ್ದು, 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, ರೇರ್ ಪಾರ್ಕಿಂಗ್ ಸೇನಾರ್ಸ್, ಹಿಲ್ ಹೋಲ್ಡ್ ಅಸಿಸ್ಟ್ ಅನ್ನು ಒಳಗೊಂಡಿದೆ.
ಕಡೆಯದಾಗಿ ರೆನಾಲ್ಟ್ ಕ್ವಿಡ್ (Renault Kwid) ಹ್ಯಾಚ್‌ಬ್ಯಾಕ್ ಕುರಿತು ಹೇಳುವುದಾದರೆ, ಈ ಕಾರು ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಲಭ್ಯವಿದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 68 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 91 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 21.46 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಕ್ವಿಡ್ ಕಾರಿನಲ್ಲಿ 5 ಜನರು ಸಂಚರಿಸಬಹುದು. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀಲೆಸ್ ಎಂಟ್ರಿ, ಮ್ಯಾನುವಲ್ ಎಸಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), HSA (ಹಿಲ್ ಸ್ಟಾರ್ಟ್ ಅಸಿಸ್ಟ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications