ಬೆಸ್ಟ್ 5-ಸೀಟರ್ ಕಾರು... 34 ಕಿ.ಮೀ ಮೈಲೇಜ್... ಕೇವಲ 5.36 ಲಕ್ಷ ರೂ. ಬೆಲೆ
ಮಾರುತಿಯ ಪ್ರವೇಶ ಮಟ್ಟದ ಹ್ಯಾಚ್‌ಬ್ಯಾಕ್ ಆದ ಸೆಲೆರಿಯೊ 2014 ರಲ್ಲಿ ಬಿಡುಗಡೆಯಾಗಿ ಇಂದಿಗೂ ಉತ್ತಮ ಬೇಡಿಕೆಯೊಂದಿಗೆ ಗ್ರಾಹಕರನ್ನು ತೃಪ್ತಿಗೊಳಿಸುತ್ತಿದೆ. ಭಾರತದಲ್ಲಿ ಪ್ರಸ್ತುತ 5.36 ಲಕ್ಷ (ಎಕ್ಸ್ ಶೋ ರೂಂ) ರೂ.ಗಳ ಆರಂಭಿಕ ಬೆಲೆಯಲ್ಲಿ ಮಾರಾಟದಲ್ಲಿದೆ. ಸೆಲೆರಿಯೊ ಕಾರು ಒಟ್ಟು ಏಳು ವೆರಿಯೆಂಟ್‌ಗಳೊಂದಿಗೆ ಆರ್ಕ್ಟಿಕ್ ವೈಟ್, ಸಿಲ್ಕಿ ಸಿಲ್ವರ್, ಗ್ಲಿಸ್ಟೆನಿಂಗ್ ಗ್ರೇ, ಸಾಲಿಡ್ ಫೈರ್ ರೆಡ್, ಸ್ಪೀಡಿ ಬ್ಲೂ ಮತ್ತು ಕೆಫೀನ್ ಬ್ರೌನ್ ಎಂಬ ಸಿಂಗಲ್ ಟೋನ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಈ ಕಾರಿನ ಮೈಲೇಜ್, ಫೀಚರ್ಸ್ ಕುರಿತ ಹೆಚ್ಚಿನ ವಿಶೇಷತೆಗಳನ್ನು ಇಲ್ಲಿ ತಿಳಿಯೋಣ.
ಡಿಸೈನ್: ಸೆಲೆರಿಯೋ ಡಿಸೈನ್ ವಿಷಯಕ್ಕೆ ಬಂದರೆ ಆಕರ್ಷಕವಾದ ಗ್ರಿಲ್, ಪರಿಷ್ಕೃತ ಬಂಪರ್, ವೃತ್ತಾಕಾರದ ಹೆಡ್‌ಲ್ಯಾಂಪ್‌ಗಳು, ಕ್ರೋಮ್ ಸ್ಟ್ರಿಪ್ ಮೂಲಕ ಸಂಪರ್ಕ ಹೊಂದುವ ಸಿಗ್ನೇಚರ್ ಲೋಗೋ, ಲೋ ಟ್ರಿಮ್‌ಗಳು ಸಾಧಾರಣ ಅಲಾಯ್ ವ್ಹೀಲ್ ಗಳನ್ನು ಪಡೆದುಕೊಂಡಿದ್ದು, ಉನ್ನತ ರೂಪಾಂತರಗಳು ಬ್ಲ್ಯಾಕ್ ಬಣ್ಣದ 15 - ಇಂಚಿನ ಅಲಾಯ್ ವ್ಹೀಲ್ ಜೋಡಣೆಯೊಂದಿಗೆ ಬರುತ್ತದೆ.

ವೇರಿಯೆಂಟ್ & ಮೈಲೇಜ್: ಹೊಸ ಮಾರುತಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಅನ್ನು LXi, VXi, ZXi ಮತ್ತು ZXi ಪ್ಲಸ್ ಎಂಬ ನಾಲ್ಕು ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿದೆ. ಮಾರುತಿ ಸುಜುಕಿ ಸೆಲೆರಿಯೊ CNG ರೂಪಾಂತರದ ಮೈಲೇಜ್ 34.43 km/kg ಇದೆ. ಮಾರುತಿ ಸುಜುಕಿ ಸೆಲೆರಿಯೊ ಪೆಟ್ರೋಲ್‌ನಲ್ಲಿ 25.17 kmpl ನಿಂದ 26.23 kmpl ನಡುವೆ ಮೈಲೇಜ್ ನೀಡುತ್ತದೆ.
ಸುರಕ್ಷತೆ: ಹೊಸ ಸೆಲೆರಿಯೊ ಕಾರಿನಲ್ಲಿ ಡ್ರೈವರ್ ಹಾಗೂ ಫ್ರಂಟ್ ಸೀಟ್ ಪ್ಯಾಸೆಂಜರ್ ಏರ್‌ಬ್ಯಾಗ್, ಹಿಂಭಾಗದ ಬಾಗಿಲುಗಳಲ್ಲಿ ಚೈಲ್ಡ್ ಪ್ರೂಫ್ ಲಾಕ್, ಸ್ಪೀಡ್ ಅಲರ್ಟ್ ಸಿಸ್ಟಂ, ಹಿಲ್ ಹೋಲ್ಡ್ ಅಸಿಸ್ಟ್, ಸೀಟ್ ಬೆಲ್ಟ್ ರಿಮೈಂಡರ್, ಎಬಿಎಸ್-ಇಬಿಡಿ, ಇಂಜಿನ್ ಇಮೊಬಿಲೈಜರ್, ರಿವರ್ಸ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವಾರು ಸುರಕ್ಷತಾ ಫೀಚರ್‌ಗಳನ್ನು ನೀಡಲಾಗಿದೆ.

ವೈಶಿಷ್ಟ್ಯಗಳು: ಮಾರುತಿ ಸುಜುಕಿ ಸೆಲೆರಿಯೊದಲ್ಲಿ ಆಪಲ್ ಕಾರ್‌ಪ್ಲೇ, ಆಂಡ್ರಾಯ್ಡ್ ಆಟೋ ಸಂಪರ್ಕ ಹೊಂದಿರುವ ಸ್ಮಾರ್ಟ್‌ಪ್ಲೇ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂನಂತಹ ಹಲವಾರು ಹೊಸ ಹಾಗೂ ಅಪ್‌ಡೇಟ್ ಮಾಡಲಾದ ಫೀಚರ್‌ಗಳನ್ನು ನೀಡಲಾಗಿದೆ. ಐಡಲ್ ಸ್ಟಾರ್ಟ್/ಸ್ಟಾಪ್ ಫಂಕ್ಷನ್ ಜೊತೆಗೆ ಪುಶ್ ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ ಸಹ ನೀಡಲಾಗಿದೆ.
ಈ ಕಾರು ಹೊಸ ಟಚ್‌ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಸಿಸ್ಟಂ, ಕಾಲ್ ಹಾಗೂ ಮ್ಯೂಸಿಕ್ ಅಸಿಸ್ಟ್ ಹೊಂದಿರುವ ಮಲ್ಟಿ ಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಸಿಂಗಲ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಸರ್ಕ್ಯುಲರ್ ಡಿಜಿಟಲ್ ಸ್ಕ್ರೀನ್ ಅನ್ನು ಒಳಗೊಂಡಿದೆ. ಈ ಕಾರಿನ ಹೆಡ್‌ಲೈಟ್ ವಿನ್ಯಾಸವನ್ನು ಇತ್ತೀಚೆಗೆ ಹೊಸದಾಗಿ ಅಪ್‌ಡೇಟ್ ಮಾಡಲಾಗಿದೆ.

ಎಂಜಿನ್: ಇದರ ಎಂಜಿನ್ BS6 2.0-ಕಾಂಪ್ಲೈಂಟ್ ಆಗಿದ್ದು, 1.0-ಲೀಟರ್ NA ಪೆಟ್ರೋಲ್ ಎಂಜಿನ್ ಅನ್ನು ಐದು-ಸ್ಪೀಡ್ ಮ್ಯಾನುವಲ್ ಮತ್ತು AMT ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. 66bhp ಪವರ್ ಮತ್ತು 89Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಗ್ರಾಹಕರು ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಸೆಲೆರಿಯೊದ CNG ಆವೃತ್ತಿಯನ್ನು ಸಹ ಆಯ್ಕೆ ಮಾಡಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications