ಬಹುಬೇಡಿಕೆಯ ಗ್ರ್ಯಾಂಡ್ ವಿಟಾರಾ ಗ್ರಾಹಕರಿಗೆ ಶಾಕ್ ಕೊಟ್ಟ ಮಾರುತಿ ಸುಜುಕಿ

ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಎಸ್‍ಯುವಿಗಳಿಗೆ ಭಾರೀ ಬೇಡಿಕೆಯನ್ನು ಹೊಂದಿರುವುದರಿಂದ, ಎಸ್‍ಯುವಿಯು ವಿಭಾಗವು ಅತಿಯಾದ ಸ್ಪರ್ಧೆಯಿಂದ ಕೂಡಿದೆ. ಎಸ್‍ಯುವಿ ವಿಭಾಗದ ಮಿಡ್ ಸೈಜ್ ಎಸ್‍ಯುವಿಗಳ ವಿಭಾಗದಲ್ಲಿ ಹ್ಯುಂಡೈ ಕ್ರೆಟಾ ಹಲವು ವರ್ಷಗಳಿಂದ ಪಾರುಪತ್ಯ ಸಾಧಿಸುತ್ತಿತ್ತು. ಮಾರುತಿ ಗ್ರ್ಯಾಂಡ್ ವಿಟಾರಾ (Maruti Grand Vitara) ಎಂಟ್ರಿಯ ಬಳಿಕ ಭರ್ಜರಿಯಾಗಿ ಪೈಪೋಟಿ ನೀಡುತ್ತಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ತನ್ನ ಮೊದಲ ವಾರ್ಷಿಕೋತ್ಸವವನ್ನು 1 ಲಕ್ಷಕ್ಕೂ ಹೆಚ್ಚು ಯುನಿಟ್‌ಗಳನ್ನು ಮಾರಾಟ ಮಾಡುವ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಈ ಸಾಧನೆಯು ಅದರ ತಯಾರಕರಾದ ಮಾರುತಿ ಸುಜುಕಿಯನ್ನು ಈ ಹಣಕಾಸು ವರ್ಷದ ಮೊದಲಾರ್ಧದಲ್ಲಿ 22 ಶೇಕಡಾ ಮಾರುಕಟ್ಟೆ ಪಾಲನ್ನು ಕೊಡುಗೆಯನ್ನು ನೀಡಿತು. ಈ ನಡುವೆ ಮಾರುತಿ ಸುಜುಕಿ ಇತ್ತೀಚೆಗೆ ಅರೆನಾ ಮತ್ತು ನೆಕ್ಸಾ ಸರಣಿಯ ಡೀಲರ್‌ಶಿಪ್‌ಗಳಾದ್ಯಂತ ತನ್ನ ಸಂಪೂರ್ಣ ಸರಣಿಯ ಕಾರುಗಳ ಬೆಲೆಗಳನ್ನು ಪರಿಷ್ಕರಿಸಿದೆ.

Maruti Grand Vitara

ಮಾರುತಿಯ ಗ್ರ್ಯಾಂಡ್ ವಿಟಾರಾ ಮಾದರಿಯ ಬೆಲೆಯು ಕೂಡ ಪರಿಷ್ಕರಣೆಯಾಗಿದೆ. ಡೆಲ್ಟಾ ಸ್ಮಾರ್ಟ್ ಹೈಬ್ರಿಡ್ ಎಟಿ, ಝೀಟಾ ಸ್ಮಾರ್ಟ್ ಹೈಬ್ರಿಡ್ ಎಟಿ, ಆಲ್ಫಾ ಸ್ಮಾರ್ಟ್ ಹೈಬ್ರಿಡ್ ಎಟಿ ಮತ್ತು ಆಲ್ಫಾ ಡ್ಯುಯಲ್-ಟೋನ್ ಸ್ಮಾರ್ಟ್ ಹೈಬ್ರಿಡ್ ಎಟಿ ಸೇರಿದಂತೆ ಮಾರುತಿ ಗ್ರ್ಯಾಂಡ್ ವಿಟಾರಾ ಆಯ್ದ ರೂಪಾಂತರಗಳ ಬೆಲೆಗಳು ಬದಲಾಗದೆ ಉಳಿದಿವೆ. ಉಳಿದ ಎಲ್ಲಾ ಇತರ ರೂಪಾಂತರಗಳು ಬೆಲೆಯು ರೂ.10,000 ವರೆಗೆ ಹೆಚ್ಚಾಗಿದೆ.

ಈ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಂಟ್ರಿ ಬಳಿಕ ಎಲ್ಲಾವೂ ಬದಲಾಗಿದೆ. ಮಾರುತಿ ಸುಜುಕಿ, ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ತನ್ನದೇ ಆದ ಮಿಡ್ ಸೈಜ್ ಎಸ್‍ಯುವಿಯು ಬಿಡುಗಡೆ ಮಾಡುವ ಮೂಲಕ ದೇಶದ ಜನರನ್ನು ದಿಗ್ಭ್ರಮೆಗೊಳಿಸಿತು. ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಗೆ ಭಾರೀ ಬೇಡಿಕೆಯನ್ನು ಪಡೆದುಕೊಂಡಿರುವುದರಿಂದ ಇದರ ಕಾಯುವ ಅವಧಿ ಕೂಡ ಹೆಚ್ಚಾಗಿದೆ.

Maruti Grand Vitara

ಈ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್‌ಬೇಸ್ ಹೊಂದಿದೆ. ಇದು ಹೈರೈಡರ್‌ನೊಂದಿಗೆ ಕೆಲವು ಬಾಹ್ಯ ವಿಶೇಷಣಗಳನ್ನು ಹಂಚಿಕೊಂಡದೆ. ಹೈರೈಡರ್‌ನಿಂದ ಗ್ರಾಂಡ್ ವಿಟಾರಾ ದೊಡ್ಡ ವ್ಯತ್ಯಾಸವೆಂದರೆ ಅದರ ಮುಂಭಾಗದ ವಿನ್ಯಾಸವಾಗಿದೆ. ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು ಎರಡು ಪವರ್‌ಟ್ರೇನ್ ಆಯ್ಕೆಗಳಲ್ಲಿ ಲಭ್ಯವಿದೆ.

ಈ ಎಸ್‍ಯುವಿಯು 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ ಮತ್ತು 1.5-ಲೀಟರ್ TNGA ಪೆಟ್ರೋಲ್ ಮೋಟರ್ ಸ್ಟ್ರಾಂಗ್-ಹೈಬ್ರಿಡ್ ಸಿಸ್ಟಂ ಅನ್ನು ಒಳಗೊಂಡಿದೆ. ಇದರಲ್ಲಿ 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ 102 ಬಿಹೆಚ್‍ಪಿ ಪವರ್ ಮತ್ತು 137 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಯುನಿಟ್ ಅನ್ನು ನೀಡಿದೆ.

Maruti Grand Vitara

ಇನ್ನು ಈ ಮಾರುತಿ ಎಸ್‍ಯುವಿಯ ಎಡಬ್ಲ್ಯೂಡಿ ಸಿಸ್ಟಂ ಅನ್ನು ಮ್ಯಾನುವಲ್ ರೂಪಾಂತರಗಳೊಂದಿಗೆ ಮಾತ್ರ ನೀಡಲಾಗುತ್ತಿದೆ. ಇಂಟೆಲಿಜೆಂಟ್ ಎಲೆಕ್ಟ್ರಿಕ್ ಹೈಬ್ರಿಡ್ ಸಿಸ್ಟಮ್ ಎಂದೂ ಕರೆಯಲ್ಪಡುವ ಸ್ಟ್ರಾಂಗ್-ಹೈಬ್ರಿಡ್ ಆವೃತ್ತಿಯು ಐಸಿಇ ಯುನಿಟ್ ಮೂಲಕ ಸಂಯೋಜಿತವಾಗಿ 115 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದನ್ನು ಇ-ಸಿವಿಟಿ ಯೊಂದಿಗೆ ಮಾತ್ರ ಜೋಡಿಸಲಾಗಿದೆ. ಈ ಪವರ್‌ಟ್ರೇನ್‌ಗಾಗಿ 27.97 ಕಿ.ಮೀ ಮೈಲೇಜ್ ಅನ್ನು ಒದಗಿಸುತ್ತದೆ.

ಈ ಗ್ರ್ಯಾಂಡ್ ವಿಟಾರಾ 5-ಸೀಟರ್ ಎಸ್‍ಯುವಿಯು 45 ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಹೊಂದಿದೆ. ವಿದೇಶಿ ಮಾರುಕಟ್ಟೆಯಲ್ಲಿ ಮಾರಾಟವಾಗುವ ಎಸ್-ಕ್ರಾಸ್‌ ಮಾದರಿಗೆ ಹೋಲುತ್ತಿದೆ. ಈ ಮಾರುತಿ ಗ್ರ್ಯಾಂಡ್ ವಿಟಾರಾ ವಿಟಾರಾ ಎಸ್‍ಯುವಿಯನ್ನು ಹೊಸ ಹಲವು ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಮೊದಲಿನಿಂದ ಅಭಿವೃದ್ಧಿಪಡಿಸಲಾಗಿದೆ. ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಸ್ಕೋಡಾ ಕುಶಾಕ್ ಮತ್ತು ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿಗಳೊಂದಿಗೆ ಪೈಪೋಟಿ ನೀಡುತ್ತದೆ,

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, February 12, 2024, 11:53 [IST]
English summary
Maruti grand vitara suv prices hiked for selected variants details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+