Maruti Suzuki: ಗಮನಿಸಿ.. 2,555 ಆಲ್ಟೊ ಕೆ10 ಕಾರುಗಳನ್ನು ಹಿಂಪಡೆಯಲಿದೆ ಕಂಪನಿ, ಕಾರಣವೇನು?
ಭಾರತದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಸ್ಟೀರಿಂಗ್ ಗೇರ್‌ಬಾಕ್ಸ್‌ನಲ್ಲಿ (Steering GearBox) ಸಂಭಾವ್ಯ ತಾಂತ್ರಿಕ ಸಮಸ್ಯೆಯಿಂದಾಗಿ 2,555 ಆಲ್ಟೊ ಕೆ10 (Alto K10) ಹ್ಯಾಚ್‌ಬ್ಯಾಕ್‌ಗಳನ್ನು ಹಿಂಪಡೆಯಲಾಗುವುದು ಎಂದು ಘೋಷಣೆ ಮಾಡಿದೆ. ಈ ದೋಷದಿಂದ ಚಾಲನೆ ವೇಳೆ ಒಂದಷ್ಟು ಅಡಚಣೆಗಳು ಆಗಬಹುದು. ತಾಂತ್ರಿಕ ಸಮಸ್ಯೆಗೆ ಒಳಗಾಗಿರುವ ಭಾಗವನ್ನು ಬದಲಾಯಿಸುವವರೆಗೆ ಕಾರನ್ನು ಉಪಯೋಗಿಸದಂತೆ ಕಂಪನಿಯು ಸೂಚಿಸಿದೆ.
ಮಾರುತಿ ಸುಜುಕಿ, ಯಾವುದೇ ಶುಲ್ಕ ವಿಧಿಸದೆ ಉಚಿತವಾಗಿ ಸಂಭಾವ್ಯ ತಾಂತ್ರಿಕ ಸಮಸ್ಯೆಗೆ ಒಳಪಟ್ಟಿರುವ ಕಾರುಗಳನ್ನು ಪರೀಕ್ಷಿಸುತ್ತದೆ. ಜೊತೆಗೆ ದೋಷಮುಕ್ತವಾಗಿರುವ ಭಾಗವನ್ನು ಬದಲಾಯಿಸಿಕೊಡಲಿದೆ. ಈ ಸಂಬಂಧ ತೊಂದರೆಗೆ ಒಳಗಾಗಿರುವ ಕಾರು ಮಾಲೀಕರನ್ನು ಅಧಿಕೃತ ಡೀಲರ್‌ಗಳ ವರ್ಕ್‌ಶಾಪ್ ಸಿಬ್ಬಂದಿ ಸಂಪರ್ಕಿಸಲಿದ್ದಾರೆ ಎಂದು ಕಂಪನಿಯು ತಿಳಿಸಿದೆ.

ಈ ಹಿಂದೆ, ಮಾರುತಿ ಸುಜುಕಿ ಜುಲೈ 30, 2019 ಹಾಗೂ ನವೆಂಬರ್ 1, 2019ರ ನಡುವೆ ಉತ್ಪಾದಿಸಲಾದ 11,851 ಬಲೆನೊ ಹಾಗೂ 4,190 ವ್ಯಾಗನ್ಆರ್ ಕಾರುಗಳನ್ನು ಹಿಂಪಡೆದುಕೊಂಡಿತ್ತು. ಈ ಕಾರುಗಳ ಫ್ಯುಯೆಲ್ (ಇಂಧನ) ಪಂಪ್ ಮೋಟಾರ್‌ನಲ್ಲಿನ ಸಂಭಾವ್ಯ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಲು ಉದ್ದೇಶಿಸಿತ್ತು.
ಮಾರುತಿ ಸುಜುಕಿ 2022ರ ಆಗಸ್ಟ್ 18ರಂದು ಹೊಸ ತಲೆಮಾರಿನ (New Generation) ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ನ್ನು ಬಿಡುಗಡೆಗೊಳಿಸಿತ್ತು. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಈ ಕಾರು, ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ ಸೇರಿದಂತೆ 4 ರೂಪಾಂತರ (ವೇರಿಯೆಂಟ್)ಗಳನ್ನು ಹೊಂದಿದ್ದು, ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್ ಮತ್ತು ಮೆಟಾಲಿಕ್ ಗ್ರಾನೈಟ್ ಗ್ರೇ ಒಳಗೊಂಡಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ.

ನೂತನ ಮಾರುತಿ ಸುಜುಕಿ ಆಲ್ಟೊ ಕೆ10 ಕಾರು 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್ ಅಥವಾ 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಪೆಟ್ರೋಲ್ ಮಾದರಿಗಳು 24.39 ರಿಂದ 24.90 ಕೆಎಂಪಿಎಲ್ ಹಾಗೂ ಸಿಎನ್‌ಜಿ ರೂಪಾಂತರಗಳು 33.85 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತವೆ.
ಈ ಹ್ಯಾಚ್‌ಬ್ಯಾಕ್‌ನಲ್ಲಿ 4 ರಿಂದ 5 ಮಂದಿ ಓಡಾಟ ನಡೆಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕೀಲೆಸ್ ಎಂಟ್ರಿ, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಕೂಡ ಹೊಂದಿದೆ.
ಮಾರುತಿ ಸುಜುಕಿ ಆಲ್ಟೊ ಕೆ10 ಕಾರು ಪ್ರಯಾಣಿಕರಿಗೆ ಗರಿಷ್ಠಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರಿವರ್ಸಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ. ಈ ಹ್ಯಾಚ್‌ಬ್ಯಾಕ್‌ಗೆ ರೆನಾಲ್ಟ್ ಕ್ವಿಡ್ ಪ್ರಬಲ ಪ್ರತಿಸ್ಪರ್ಧಿಯಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications