Maruti Suzuki: ಗುಡ್‌ನ್ಯೂಸ್.. ಈ ಪ್ರಮುಖ ಕಾರುಗಳ ಬೆಲೆ ದಿಢೀರ್ ಇಳಿಕೆ.. ಯಾವುವು?

ದೇಶದ ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಗೌರಿ - ಗಣೇಶ, ದಸರಾ ಹಾಗೂ ದೀಪಾವಳಿ ಹಬ್ಬಗಳು ಆರಂಭವಾಗುವ ಮೊದಲೇ, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವ ಆಲ್ಟೊ ಕೆ10 (Alto K10) ಮತ್ತು ಎಸ್-ಪ್ರೆಸ್ಸೊ (S-Presso) ದರವನ್ನು ಇಳಿಕೆ ಮಾಡಿದೆ. ಕಳೆದೆರಡು ತಿಂಗಳಿನಿಂದ ಈ ಕಾರುಗಳ ಮಾರಾಟ ಪ್ರಮಾಣ ಕುಸಿತವಾಗಿರುವ ಹಿನ್ನೆಲೆ, ಬೆಲೆಯನ್ನು ಕಡಿಮೆ ಮಾಡಿರುವುದಾಗಿ ಘೋಷಣೆ ಮಾಡಿದೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮಾರುತಿ ಸುಜುಕಿಯು ಆಲ್ಟೊ ಕೆ10 ಹಾಗೂ ಎಸ್-ಪ್ರೆಸ್ಸೊ ಕಾರುಗಳ ಆಯ್ದ ರೂಪಾಂತರಗಳ (ವೇರಿಯೆಂಟ್) ದರವನ್ನು ಕಡಿಮೆ ಮಾಡಿದೆ. ಎಸ್-ಪ್ರೆಸ್ಸೊ ಎಲ್ಎಕ್ಸ್ಐ ಪೆಟ್ರೋಲ್ (LXI Petrol) ರೂಪಾಂತರದ ಬೆಲೆ ರೂ.2,000 ಮತ್ತು ಆಲ್ಟೊ ಕೆ10 ವಿಎಕ್ಸ್ಐ ಪೆಟ್ರೋಲ್ (VXI Petrol) ರೂಪಾಂತರದ ದರ ರೂ.6,500 ಇಳಿಕೆಯಾಗಿದೆ.

Maruti Suzuki Alto K10 and S-Presso Car Price Reduced

ಆಲ್ಟೊ ಕೆ10 ಮತ್ತು ಎಸ್-ಪ್ರೆಸ್ಸೊಗಳು ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್ ಆಗಿವೆ. ಈ ಕಾರುಗಳನ್ನು 2023ರ ಆಗಸ್ಟ್‌ನಲ್ಲಿ 12,209 ಯುನಿಟ್‌ ಮಾರಾಟ ಮಾಡಲಾಗಿತ್ತು. ಆದಾಗ್ಯೂ ಈ ಆಗಸ್ಟ್‌ ತಿಂಗಳಲ್ಲಿ (10,648 ಯುನಿಟ್‌) ಮಾರಾಟ ಪ್ರಮಾಣ ಶೇಕಡ 12.78% ಕುಸಿತವಾಗಿದೆ. ಕಳೆದ ತಿಂಗಳು ಇದೇ ಕಾರುಗಳಲ್ಲಿ ಹೆಚ್ಚುವರಿಯಾಗಿ ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಸುರಕ್ಷತಾ ವೈಶಿಷ್ಟ್ಯವನ್ನು ಪರಿಚಯಿಸಲಾಗಿತ್ತು.

ಪ್ರಸ್ತುತ, ದೇಶೀಯವಾಗಿ ಖರೀದಿಗೆ ಲಭ್ಯವಿರುವ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್ ಅತ್ಯಂತ ಕೈಗೆಟುಕುವ ಬೆಲೆಯನ್ನು ಹೊಂದಿದೆ. ರೂ.3.99 ಲಕ್ಷದಿಂದ ರೂ.5.96 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ ಹಾಗೂ ವಿಎಕ್ಸ್ಐ ಸೇರಿದಂತೆ 4 ವಿವಿಧ ರೂಪಾಂತರಗಳ ಆಯ್ಕೆಯಲ್ಲಿ ದೊರೆಯುತ್ತದೆ. ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ ಒಳಗೊಂಡಂತೆ ಹಲವು ಬಣ್ಣಗಳನ್ನು ಒಳಗೊಂಡಿದೆ.

Maruti Suzuki Alto K10 and S-Presso Car Price Reduced

ಈ ಆಲ್ಟೊ ಕೆ10 ಕಾರು 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 4 ರಿಂದ 5 ಮಂದಿ ಪ್ರಯಾಣಿಸಬಹುದು. 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀಲೆಸ್ ಎಂಟ್ರಿ, ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಡಿ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ರಿವರ್ಸಿಂಗ್ ಕ್ಯಾಮೆರಾವನ್ನು ಹೊಂದಿದೆ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಕಾರು ರೂ.4.26 ಲಕ್ಷದಿಂದ ರೂ.6.12 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 24.12 ರಿಂದ 32.73 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ಈ ಎಸ್-ಪ್ರೆಸ್ಸೊ ಹ್ಯಾಚ್‌ಬ್ಯಾಕ್ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಡಿ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, September 3, 2024, 8:30 [IST]
English summary
Maruti suzuki alto k10 and s presso car price reduced
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+