ಮಳೆಯಲ್ಲಿ ನೆಂದು ಒದ್ದೆಯಾಗುವುದಕ್ಕಿಂತ ಈ ಕಾರು ಸಿಕ್ಕರೆ ಮೇಲು.. ಪ್ರಚಂಡ ಮೈಲೇಜ್, ಅತ್ಯಂತ ಕಡಿಮೆ ಇಎಂಐ!
ಚಳಿಗಾಲವಿರಲಿ.. ಬೇಸಿಗೆಗಾಲವಿರಲಿ.. ದ್ವಿಚಕ್ರ ವಾಹನಗಳನ್ನು ಓಡಿಸುವವರೂ ಎಲ್ಲ ರೀತಿಯ ಕೆಟ್ಟ ಹವಾಮಾನ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಹದಗೆಟ್ಟ ವಾತಾವರಣವಿದ್ದರೆ ಬೈಕ್ ಹಾಗೂ ಸ್ಕೂಟರ್‌ನಲ್ಲಿ ಪ್ರಯಾಣಿಸುವುದು ತುಂಬಾ ಕಷ್ಟವಾಗುತ್ತದೆ. ಮಳೆಗಾಲದಲ್ಲೂ ದ್ವಿಚಕ್ರ ವಾಹನ ಸವಾರರು ಬಹಳಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ಧಾರಾಕಾರ ಮಳೆ ಬಂದರೆ, ಒಂದೋ ಒದ್ದೆಯಾಗುತ್ತಾರೆ.. ಇಲ್ಲವಾದರೆ ದಾರಿಯಲ್ಲಿ ಎಲ್ಲೋ ನಿಲ್ಲಿಸಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಕಾರು ಉತ್ತಮ ಆಯ್ಕೆಯಾಗಲಿದೆ. ನಿಮ್ಮ ಬಜೆಟ್ ಕಡಿಮೆ ಇದ್ದರೂ, ಪ್ರಚಂಡ ಮೈಲೇಜ್ ಹಾಗೂ ಅತ್ಯುತ್ತಮ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಈ ಕಾರನ್ನು ಖರೀದಿಸಬಹುದು.
ನಾವಿಲ್ಲಿ ವಿವರಿಸಲಾಗಿರುವ ನೂತನ ಕಾರು 1 ಲೀಟರ್ ಪೆಟ್ರೋಲ್‌ನಲ್ಲಿ ಸರಿ ಸುಮಾರು 25 ಕಿಲೋಮೀಟರ್ ಮೈಲೇಜ್ ನೀಡುತ್ತದೆ. ಜೊತೆಗೆ ಶಕ್ತಿಯುತವಾದ 1000 ಸಿಸಿ ಎಂಜಿನ್ ಹೊಂದಿದ್ದು, 5 ಮಂದಿ ಆರಾಮದಾಯಕವಾಗಿ ದೂರದ ಊರುಗಳಿಗೆ ಪ್ರಯಾಣಿಬಹುದು. ಈ ಕಾರು ದೀರ್ಘಕಾಲ ಬಾಳಿಕೆಯೂ ಬರಲಿದ್ದು, ಸಾವಿರಾರು ಕಿಲೋಮೀಟರ್ ಪ್ರಯಾಣಿಸಬಹುದು. ಉತ್ತಮ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದ್ದು, 2 ಏರ್‌ಬ್ಯಾಗ್‌ನ್ನು ಕೂಡ ಒಳಗೊಂಡಿದೆ.

ಸದ್ಯ, ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಕಾರಿನ ಕುರಿತಂತೆ ಮಾತನಾಡುತ್ತಿದ್ದೇವೆ. ಇದೊಂದು ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿ ಮನೆ ಮಾತಾಗಿದ್ದು, ಪೆಟ್ರೋಲ್ ಮತ್ತು ಸಿಎನ್‌ಜಿ ಎಂಬ ಎರಡು ಎಂಜಿನ್ ಆಯ್ಕೆಯಲ್ಲಿ ಸಿಗುತ್ತದೆ. ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ.
ಈ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ನ ಸ್ಟ್ಯಾಂಡರ್ಡ್ ಮಾದರಿ (ಮಾಡೆಲ್)ಯನ್ನು ರೂ.4.80 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. ನೀವು ರೂ.1.50 ಲಕ್ಷ ಡೌನ್ ಪೇಮೆಂಟ್ ಪಾವತಿಸಿ, ಈ ಕಾರನ್ನು ಖರೀದಿಸಿದರೆ, ಉಳಿದ ರೂ.3.30 ಲಕ್ಷ ಮೊತ್ತಕ್ಕೆ ಶೇಕಡ 9.8% ಬಡ್ಡಿ ದರದಲ್ಲಿ ಮಾಸಿಕ ರೂ.5,457 ಇಎಂಐ ಪಾವತಿಸಬೇಕು.

ಹೊಚ್ಚ ಹೊಸ ಮಾರುತಿ ಸುಜುಕಿ ಆಲ್ಟೊ ಕೆ10 ಕಾರು ಎಲ್ಎಕ್ಸ್ಐ, ವಿಎಕ್ಸ್ಐ ಸೇರಿದಂತೆ 4 ಅತ್ಯಾಧುನಿಕ ರೂಪಾಂತರ (ವೇರಿಯೆಂಟ್)ಗಳನ್ನು ಹೊಂದಿದ್ದು, ಮೆಟಾಲಿಕ್ ಸಿಜ್ಲಿಂಗ್ ರೆಡ್ ಹಾಗೂ ಮೆಟಾಲಿಕ್ ಸಿಲ್ಕಿ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. ವಾರಾಂತ್ಯ ಮತ್ತು ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಕಾರು 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಸಿಗಲಿದ್ದು, 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 24.39 ರಿಂದ 24.90 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 33.40 ರಿಂದ 33.85 ಕೆಎಂ/ಕೆಜಿ ವರೆಗೆ ಮೈಲೇಜ್ ಕೊಡುತ್ತವೆ.

ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕೀಲೆಸ್ ಎಂಟ್ರಿ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಡಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್ ಬಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರಿಯರ್ ಪಾರ್ಕಿಂಗ್ ಸೆನ್ಸಾರ್ ಮತ್ತು ರಿವರ್ಸಿಂಗ್ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications