ನಿಮ್ಮ ಹೆಂಡತಿಗೆ ಕಾರು ಕೊಡಿಸಬೇಕೇ.. ರೂ.3.99 ಲಕ್ಷ ಬೆಲೆ, 33 ಕಿ.ಮೀ ಮೈಲೇಜ್

ಭಾರತದಲ್ಲಿ ಪುಟ್ಟ ಕಾರುಗಳು ದೊಡ್ಡಮಟ್ಟದಲ್ಲಿ ಜನಪ್ರಿಯತೆಯನ್ನು ಗಳಿಸಿವೆ. ಟಾಟಾ, ಮಾರುತಿ ಸುಜುಕಿ ಹಾಗೂ ರೆನಾಲ್ಟ್ ಕಂಪನಿಗಳು ಈ ವಿಭಾಗದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟ ಮಾಡುತ್ತಿವೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸಣ್ಣ ಕುಟುಂಬಗಳ ಸಂಖ್ಯೆ ಹೆಚ್ಚಿದೆ. ದಿನನಿತ್ಯದ ಬಳಕೆಗೆ ಕಾರುಗಳು ತುಂಬಾ ಅಗತ್ಯವಾಗಿದ್ದು, ಗೃಹಿಣಿಯರಿಗೆ ಬಹಳಷ್ಟು ನೆರವಾಗುತ್ತವೆ. ಮಕ್ಕಳನ್ನು ಶಾಲೆಗೆ ಬಿಡುವುದು, ಶಾಪಿಂಗ್ ಹೋಗುವುದು ಸೇರಿದಂತೆ ಕಾರುಗಳ ಸಹಾಯದಿಂದ ಎಲ್ಲ ಕೆಲಸವನ್ನು ಮಹಿಳೆಯರು ಬೇಗನೆ ಮಾಡಿ ಮುಗಿಸಬಹುದು.

ಇಲ್ಲಿ ನಾವು ಅತ್ಯಂತ ಕೈಗೆಟುಕುವ ಬೆಲೆಗೆ ಗರಿಷ್ಠ ಮೈಲೇಜ್ ನೀಡುವ ಮಾರುತಿ ಸುಜುಕಿಯ ಜನಪ್ರಿಯ ಕಾರೊಂದರ ಬಗ್ಗೆ ಸಂಪೂರ್ಣವಾಗಿ ತಿಳಿಸಿದ್ದೇವೆ. ಇದು ನಿಮ್ಮ ಮಡದಿಗೆ ಉಡುಗೊರೆಯಾಗಿ ನೀಡಲು ಹೇಳಿ ಮಾಡಿಸಿದ ರೀತಿಯಲ್ಲಿದ್ದು, ದೀರ್ಘಕಾಲ ಬಾಳಿಕೆಯೂ ಬರುತ್ತದೆ. ಜೊತೆಗೆ ಪಾರ್ಕಿಂಗ್ ಮಾಡಲು ಹೆಚ್ಚಿನ ಸ್ಥಳಾವಕಾಶವು ಬೇಕಿಲ್ಲ. ವಾರಾಂತ್ಯದಲ್ಲಿ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗಲು ನೆರವಾಗುತ್ತದೆ. ಬಿಸಿಲು, ಮಳೆ ಹಾಗೂ ಚಳಿಯಿಂದಲೂ ರಕ್ಷಣೆಯನ್ನು ಒದಗಿಸುತ್ತದೆ.

Maruti Suzuki Alto K10 Best Choice To Gift Your Wife Rs 4 Lakh Price 33 Km Mileage

ಸದ್ಯ ಗೃಹಿಣಿಯರಿಗೆ ಹೆಚ್ಚು ಉಪಯುಕ್ತವಾಗಿರುವ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್‌ ಬಗ್ಗೆ ಮಾತನಾಡೋಣ. ಈ ಕಾರು ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ ಸೇರಿದಂತೆ 4 ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯನ್ನು ಹೊಂದಿದೆ. ವಿಶೇಷವಾಗಿ ಕೆಲವೇ ದಿನಗಳ ಹಿಂದೆ 'ಡ್ರೀಮ್ ಎಡಿಷನ್' ಮಾದರಿ ಬಿಡುಗಡೆಯಾಗಿತ್ತು. ಇದು ರೂ.4.99 ಲಕ್ಷ ಆರಂಭಿಕ ದರವನ್ನು ಹೊಂದಿದೆ.

ಮಾರುತಿ ಆಲ್ಟೊ ಕೆ10 ಎರಡು ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್ 67 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 89 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು ಸಿಎನ್‌ಜಿ ಚಾಲಿತ ಮಾದರಿಯು ಇದೇ ಎಂಜಿನ್ ಆಯ್ಕೆಯನ್ನು ಪಡೆದಿದೆ. ಆದರೆ, 57 ಪಿಎಸ್ ಪವರ್ ಹಾಗೂ 82 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ.

Maruti Suzuki Alto K10 Best Choice To Gift Your Wife Rs 4 Lakh Price 33 Km Mileage

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೆ ಲಭ್ಯವಿದೆ. ಪೆಟ್ರೋಲ್ ಮಾದರಿಗಳು 24.39 ರಿಂದ 24.90 ಕೆಎಂಪಿಎಲ್, ಸಿಎನ್‌ಜಿ ಆವೃತ್ತಿಗಳು 33.40 ರಿಂದ 33.85 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ. ಪ್ರವಾಸದ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಲು ಸಾಧ್ಯವಾಗುವಂತೆ 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದೆ.

ನೂತನ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗಲಿದ್ದು, ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕೀಲೆಸ್ ಎಂಟ್ರಿ, ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

Maruti Suzuki Alto K10 Best Choice To Gift Your Wife Rs 4 Lakh Price 33 Km Mileage

ಆಲ್ಟೊ ಕೆ10 ಸುರಕ್ಷೆತೆಗೂ ಹೆಸರುವಾಸಿಯಾಗಿದ್ದು, ಡುಯಲ್ ಫ್ರಂಟ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರಿವರ್ಸಿಂಗ್ ಕ್ಯಾಮೆರಾ ಮತ್ತು ರಿಯರ್ ಪಾರ್ಕಿಂಗ್ ಸೆನ್ಸರ್‌ ಅನ್ನು ಹೊಂದಿದೆ. ಈ ಕಾರಿಗೆ ರೆನಾಲ್ಟ್ ಕ್ವಿಡ್ ಹಾಗೂ ಟಾಟಾ ಟಿಯಾಗೊ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, June 8, 2024, 10:53 [IST]
English summary
Maruti suzuki alto k10 best choice to gift your wife rs 4 lakh price 33 km mileage
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+