ಬಿಸಿಲಿಗೆ ಬೇಸತ್ತಿದ್ದೀರಾ?.. ಈ ಹೊಸ ಕಾರನ್ನು ಮನೆಗೆ ತನ್ನಿ, 33 ಕಿ.ಮೀ ಮೈಲೇಜ್.. ಬೈಕ್‌ನಷ್ಟೇ EMI

ಬೇಸಿಗೆ, ಚಳಿಗಾಲ ಅಥವಾ ಮಳೆಗಾಲದಲ್ಲಿ ದ್ವಿಚಕ್ರ ವಾಹನ ಸವಾರರು ಆಗಿನ ಹವಾಮಾನ ಪರಿಸ್ಥಿತಿಗೆ ಒಗ್ಗಿಕೊಳ್ಳಲೇಬೇಕು. ಕೆಟ್ಟ ವಾತಾವರಣದಲ್ಲಿ ಸ್ಕೂಟರ್ ಹಾಗೂ ಬೈಕ್‌ಗಳಲ್ಲಿ ಪ್ರಯಾಣಿಸುವುದು ಕಷ್ಟದ ಕೆಲಸ. ಇಂತಹ ಸನ್ನಿವೇಶದಲ್ಲಿ ಕಾರು ಉತ್ತಮ ಆಯ್ಕೆಯಾಗಬಲ್ಲದು. ಇಲ್ಲಿ ನಾವು ವಿವರಿಸಿರುವ ಮಾರುತಿ ಆಲ್ಟೊ ಹ್ಯಾಚ್‌ಬ್ಯಾಕ್ ಖರೀದಿಸಲು ಹೆಚ್ಚು ಹಣಬೇಕಿಲ್ಲ.

ನೂತನ ಮಾರುತಿ ಸುಜುಕಿ ಆಲ್ಟೊ ಕೆ10 ಬಜೆಟ್ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯಲಿದ್ದು, ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆವನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಒಳಗೊಂಡಂತೆ 4 ರೂಪಾಂತರ ಆಯ್ಕೆಯಲ್ಲಿ ಕೂಡ ಸಿಗುತ್ತದೆ. ನೀವು ಈ ಕಾರನ್ನು ರೂ.1.5 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, 7 ವರ್ಷದ ಅವಧಿಗೆ ಶೇಕಡ 9.8% ಬಡ್ಡಿದರದಲ್ಲಿ ಮಾಸಿಕ ರೂ.5,405 ಇಎಂಐ (EMI) ಕಟ್ಟಬೇಕು.

Maruti Suzuki Alto K10 Car Best Option In Summer 33 Km Mileage Low Emi

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ವಿನ್ಯಾಸದ ದೃಷ್ಟಿಯಿಂದಲೂ ಅತ್ಯಾಧುನಿಕವಾಗಿದ್ದು, ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಈ ಕಾರಿನಲ್ಲಿ 4 ರಿಂದ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ಮಾರುತಿ ಸುಜುಕಿ ಆಲ್ಟೊ ಕೆ10 ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್ 67 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 89 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೂ ದೊರೆಯುತ್ತದೆ.

Maruti Suzuki Alto K10 Car Best Option In Summer 33 Km Mileage Low Emi

ಸಿಎನ್‌ಜಿ ಚಾಲಿತ ಆಲ್ಟೊ ಮಾದರಿಯು ಇದೇ ಎಂಜಿನ್ ಒಳಗೊಂಡಿದೆ. ಆದರೆ, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಮಾತ್ರ ಹೊಂದಿದ್ದು, 57 ಪಿಎಸ್ ಪವರ್ ಹಾಗೂ 82 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಪೆಟ್ರೋಲ್ ಆವೃತ್ತಿಗಳು 24.39 ರಿಂದ 24.90 ಕೆಎಂಪಿಎಲ್ ಹಾಗೂ ಸಿಎನ್‌ಜಿ ರೂಪಾಂತರಗಳು 33.85 ಕೆಎಂ/ ಕೆಜಿ ಮೈಲೇಜ್ ನೀಡುತ್ತವೆ.

ಹೊಸ ಮಾರುತಿ ಸುಜುಕಿ ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪೇ, ಸ್ಟೀರಿಂಗ್ - ಮೌಂಟೆಡ್ ಕಂಟ್ರೋಲ್‌, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಜೊತೆಗೆ 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಕೂಡ ಒಳಗೊಂಡಿದೆ.

ಮಾರುತಿ ಸುಜುಕಿ ಆಲ್ಟೊ ಕೆ10 ಕಾರು ಉತ್ತಮ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಡುಯಲ್ ಫ್ರಂಟ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರಿವರ್ಸಿಂಗ್ ಕ್ಯಾಮೆರಾ ಹಾಗೂ ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಪಡೆದಿದೆ. ಈ ಕಾರಿಗೆ ರೆನಾಲ್ಟ್ ಕ್ವಿಡ್ ಪ್ರಬಲ ಎದುರಾಳಿಯಾಗಿದೆ. ನಿಮ್ಮ ಗಮನಕ್ಕೆ.. ಆಲ್ಟೊ ಹ್ಯಾಚ್‌ಬ್ಯಾಕ್ ಇಎಂಐ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, May 2, 2024, 14:52 [IST]
English summary
Maruti suzuki alto k10 car best option in summer 33 km mileage low emi
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+