ವಿದೇಶಿಗರಿಗೆ 'ಹುಚ್ಚು' ಹಿಡಿಸಿದೆ 3.99 ಲಕ್ಷದ ಈ ಮಾರುತಿ ಕಾರು.. ದಿಢೀರನೆ 1000% ರಫ್ತು ಹೆಚ್ಚಳ: 34 Km ಮೈಲೇಜ್!
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10), ದಶಕಗಳಿಂದ ಜನಪ್ರಿಯ ಕಾರಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ಬೆಲೆಗೆ ಖರೀದಿಗೆ ದೊರೆಯುವುದರಿಂದ ಹೆಚ್ಚಿನ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇದು ಪುಟ್ಟ ಹ್ಯಾಚ್‌ಬ್ಯಾಕ್ ಆಗಿದ್ದರೂ ವಿಶ್ವಾಸಾರ್ಹ ಕಾರ್ಯಕ್ಷಮತೆಗೆ ಹೆಸರುವಾಸಿಯಾಗಿರುವುದರಿಂದ ಭಾರಿ ಸಂಖ್ಯೆಯಲ್ಲಿ ವಿದೇಶಿಗರನ್ನು ಕೂಡ ಸೆಳೆದಿದೆ. ಅದಕ್ಕೆ ಸಾಕ್ಷಿ ಎಂಬಂತೆ ಸೆಪ್ಟೆಂಬರ್‌ನಲ್ಲಿ (2024) ದೊಡ್ಡ ಪ್ರಮಾಣದಲ್ಲಿ ಆಲ್ಟೋ ಕಾರುಗಳನ್ನು ಹೊರದೇಶಕ್ಕೆ ರಫ್ತು ಮಾಡಲಾಗಿದೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ.
ಕಳೆದ ತಿಂಗಳು (ಸೆಪ್ಟೆಂಬರ್ (2024) ಸರಿ ಸುಮಾರು 442 ಯುನಿಟ್ ಮಾರುತಿ ಸುಜುಕಿ ಆಲ್ಟೊ ಕೆ10 ಕಾರುಗಳನ್ನು ವಿದೇಶಕ್ಕೆ ರಫ್ತು ಮಾಡಲಾಗಿದೆ. 2023ರ ಇದೇ ಅವಧಿಯಲ್ಲಿ ವಿದೇಶಕ್ಕೆ ರಫ್ತು ಮಾಡಿದ್ದ 43 ಯುನಿಟ್‌ಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 927.91% ಬೆಳವಣಿಗೆ ಸಾಧಿಸಲಾಗಿದೆ.

ದೇಶೀಯ ಮಾರುಕಟ್ಟೆಯಲ್ಲಿಯೂ ಉತ್ತಮ ಸಂಖ್ಯೆಯಲ್ಲಿ ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ಗಳು ಮಾರಾಟವಾಗುತ್ತವೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಬರೋಬ್ಬರಿ 8,655 ಯುನಿಟ್, ಆಗಸ್ಟ್‌ನಲ್ಲಿ 8,546 ಯುನಿಟ್, ಜುಲೈನಲ್ಲಿ 7,353 ಯುನಿಟ್ ಮತ್ತು ಜೂನ್ ತಿಂಗಳಲ್ಲಿ 7,775 ಯುನಿಟ್ ಕಾರುಗಳನ್ನು ಮಾರಾಟ ಮಾಡಲಾಗಿದೆ.
ಹೊಚ್ಚ ಹೊಸ ಮಾರುತಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಕನಿಷ್ಠ ರೂ.3.99 ಲಕ್ಷ ಹಾಗೂ ಗರಿಷ್ಠ ರೂ.5.96 ಲಕ್ಷವರೆಗೆ ಎಕ್ಸ್ ಶೋರೂಂ (ಬೆಂಗಳೂರು) ದರವನ್ನು ಒಳಗೊಂಡಿದೆ. ಎಲ್ಎಕ್ಸ್ಐ, ವಿಎಕ್ಸ್ಐ & ವಿಎಕ್ಸ್ಐ ಪ್ಲಸ್ ಸೇರಿದಂತೆ ಹಲವು ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಮೆಟಾಲಿಕ್ ಸಿಜ್ಲಿಂಗ್ ರೆಡ್ ಮತ್ತು ಮೆಟಾಲಿಕ್ ಗ್ರಾನೈಟ್ ಗ್ರೇ ಒಳಗೊಂಡಂತೆ ಹಲವು ಬಣ್ಣಗಳೊಂದಿಗೆ ಸಿಗುತ್ತದೆ.

ಈ ಆಲ್ಟೊ ಕೆ10 ಪುಟ್ಟ ಹ್ಯಾಚ್‌ಬ್ಯಾಕ್ ಆಗಿದ್ದರೂ 4 ರಿಂದ 5 ಮಂದಿ ಆರಾಮದಾಯಕವಾಗಿ ದೂರದ ಊರುಗಳಿಗೆ ಪ್ರಯಾಣಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಜೊತೆಗೆ ನಗರ ಪ್ರದೇಶದಲ್ಲಿ ಹೆಚ್ಚು ಸೂಕ್ತವಾಗಿದ್ದು, ಸುಲಭವಾಗಿ ಪಾರ್ಕಿಂಗ್ ಮಾಡಬಹುದು.
ನೂತನ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಕಾರು, 1-ಲೀಟರ್ ಪೆಟ್ರೋಲ್ (Petrol) & ಸಿಎನ್‌ಜಿ (Cng) ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೂಡ ನೀಡುತ್ತದೆ.

ಹೊಸ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ರಿವರ್ಸಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.
ಇನ್ನು, ದೇಶೀಯ ಮಾರುಕಟ್ಟೆಯಲ್ಲಿ ಹತ್ತಾರು ಕಾರುಗಳಿದ್ದರೂ ಮಾರುತಿ ಸುಜುಕಿ ಆಲ್ಟೊ ಕೆ10 ಮಾತ್ರ ಪ್ರತ್ಯೇಕ ಅಭಿಮಾನಿ ಬಳಗವನ್ನು ಹೊಂದಿದೆ. ಒಂದು ಹಂತದಲ್ಲಿ ಮಾರಾಟ ಸಂಖ್ಯೆ ಕುಸಿತವಾಗಿದ್ದರೂ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಕಂಪನಿ ನೀಡುತ್ತಿರುವ ಅನೇಕ ಹಣಕಾಸಿನ ಪ್ರಯೋಜನಗಳಿಂದ ಮಾರಾಟ ಪ್ರಮಾಣವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications