Alto: ಮಧ್ಯಮ ವರ್ಗದವರ ಆಯ್ಕೆಯ ಕಾರಿದು.. ರೂ.3.99 ಲಕ್ಷ ದರ, 33 ಕಿ.ಮೀ ಮೈಲೇಜ್, 4 ಜನ ಹೋಗಬಹುದು!
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಕಡಿಮೆ ಬೆಲೆಯಲ್ಲಿ ಖರೀದಿಗೆ ಸಿಗುವುದೊಂದಿಗೆ ಉತ್ತಮವಾಗಿ ಮೈಲೇಜ್‌ನ್ನು ನೀಡಬಲ್ಲದು. ಈ ಕಾರು ದೇಶದ ಲಕ್ಷಾಂತರ ಮಧ್ಯಮ ವರ್ಗದ ಜನರಿಗೆ ಇಷ್ಟವಾಗುವುದರ ಹಿಂದೆ ನಾನಾ ಕಾರಣಗಳಿವೆ. ನೀವು ಕೂಡ ಹೊಚ್ಚ ಹೊಸ ಆಲ್ಟೊ ಕೆ10 ಕಾರನ್ನು ಮನೆಗೆ ತರಲು ಯೋಚಿಸಿದ್ದರೆ.. ಇಲ್ಲಿ ನೂತನ ಹ್ಯಾಚ್‌ಬ್ಯಾಕ್‌ನ ಪ್ರತಿಯೊಂದು ವಿಶೇಷತೆಗಳ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಕೈಗೆಟುಕುವ ಬೆಲೆ: ಭಾರತದಲ್ಲಿ 'ಮಾರುತಿ ಸುಜುಕಿ ಆಲ್ಟೊ ಕೆ10' ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿರುವ ಕಾರುಗಳಲ್ಲಿ ಒಂದಾಗಿದೆ. ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಹೊಂದಿದ್ದು, ಎಲ್ಎಕ್ಸ್ಐ, ವಿಎಕ್ಸ್ಐ ಸೇರಿದಂತೆ 4 ಅತ್ಯಾಧುನಿಕ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಸಣ್ಣ ಗಾತ್ರ & ವಿಶಾಲವಾದ ಒಳಾಂಗಣ: ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ ಕಾಂಪ್ಯಾಕ್ಟ್ ಸೈಜ್ (ಪುಟ್ಟ ಗಾತ್ರ)ನಲ್ಲಿದ್ದು, ನಗರ ಪ್ರದೇಶದಲ್ಲಿ ಚಾಲನೆ ಮಾಡಲು ಹೆಚ್ಚು ಸೂಕ್ತವಾಗಿದೆ. ಪಾರ್ಕಿಂಗ್ ಮಾಡುವುದು ಕೂಡ ಸುಲಭವಾಗಿದೆ. ಈ ಕಾರು ಸಣ್ಣದಾಗಿದ್ದರೂ 4 ರಿಂದ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಲು 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ.
ಪವರ್‌ಟ್ರೇನ್: ಈ ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್ 67 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 89 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಸಿಎನ್‌ಜಿ ಚಾಲಿತ ರೂಪಾಂತರವು ಇದೇ ಎಂಜಿನ್‌ನ್ನು ಪಡೆದಿದೆ. ಆದರೆ, 57 ಪಿಎಸ್ ಪವರ್ ಮತ್ತು 82 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೂ ಸಿಗುತ್ತದೆ.

ಮೈಲೇಜ್: ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್ ಅತ್ಯುತ್ತಮ ಇಂಧನ ದಕ್ಷತೆ (Fuel Efficiency)ಗೂ ಹೆಸರುವಾಸಿಯಾಗಿದೆ. ಪೆಟ್ರೋಲ್ ಮಾದರಿ (ಮಾಡೆಲ್)ಗಳು 24.39 ರಿಂದ 24.90 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 33.40 ರಿಂದ 33.85 ಕೆಎಂ/ಕೆಜಿ ವರೆಗೆ ಮೈಲೇಜ್ ನೀಡುತ್ತವೆ.
ವೈಶಿಷ್ಟ್ಯ & ಬಣ್ಣಗಳು: ಈ ಕಾರು ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕೀಲೆಸ್ ಎಂಟ್ರಿ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಮೆಟಾಲಿಕ್ ಸಿಜ್ಲಿಂಗ್ ರೆಡ್ ಮತ್ತು ಮೆಟಾಲಿಕ್ ಸಿಲ್ಕಿ ಸಿಲ್ವರ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ಸುರಕ್ಷತಾ ವೈಶಿಷ್ಟ್ಯಗಳು: ಮಾರುತಿ ಸುಜುಕಿ ಆಲ್ಟೊ ಕೆ10 ಬೆಲೆಗೆ ತಕ್ಕಂತೆ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ. ಡುಯಲ್ ಫ್ರಂಟ್ ಏರ್ ಬಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರಿವರ್ಸಿಂಗ್ ಕ್ಯಾಮೆರಾ ಮತ್ತು ರಿಯರ್ ಪಾರ್ಕಿಂಗ್ ಸೆನ್ಸರ್ ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications